ಫಕೀರ್ ಕಾಲೋನಿ-ವಸೀಮ್ ಲೇಔಟ್ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ: ಬೆಂಗಳೂರಿನ ಯಲಹಂಕ ಸಮೀಪದ ಬಂಡೆ ರಸ್ತೆಯ ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ ನಿರಾಶ್ರಿತರಿಗೆ ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟಿಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು ಎಂದರು.
ಅಲ್ಲಿನ ಜನರು ಸರಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
Next Story





