Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರತಿ ಜಿಲ್ಲೆಯಲ್ಲಿ ಸಾಧಕರ ವಸ್ತು...

ಪ್ರತಿ ಜಿಲ್ಲೆಯಲ್ಲಿ ಸಾಧಕರ ವಸ್ತು ಸಂಗ್ರಹಾಲಯ ಕುರಿತು ಪರಿಶೀಲನೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Jan 2026 7:45 PM IST
share
ಪ್ರತಿ ಜಿಲ್ಲೆಯಲ್ಲಿ ಸಾಧಕರ ವಸ್ತು ಸಂಗ್ರಹಾಲಯ ಕುರಿತು ಪರಿಶೀಲನೆ : ಸಿಎಂ ಸಿದ್ದರಾಮಯ್ಯ
‘23ನೆ ಚಿತ್ರಸಂತೆ’ ಕಾರ್ಯಕ್ರಮ

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡುವ ಕುರಿತು ಬೇಡಿಕೆ ಇದ್ದು, ಈ ಬಗ್ಗೆ ಸರಕಾರ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ರವಿವಾರ ನಗರದ ಕುಮಾರಕೃಪ ರಸ್ತೆಯಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ಆಯೋಜಿಸಿಲಾಗಿದ್ದ ‘23ನೆ ಚಿತ್ರಸಂತೆ’ ಕಾರ್ಯಕ್ರಮವನ್ನು ಫೋಟೋ ಕ್ಯಾನ್ವಾಸ್ ಮೇಲೆ ಸಹಿ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತು ಸಂಗ್ರಹಾಲಯ ಬೇಕಾಗಿದೆ ಎನ್ನುವ ಬೇಡಿಕೆಯಿದೆ. ಅದರಂತೆ ಸರಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ ಎಂದರು.

ಮುಖ್ಯಮಂತ್ರಿಯಾಗಿ 8ನೆ ಬಾರಿ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕಲಾವಿದರನ್ನು ಪ್ರೋತ್ಸಾಹಿಸುವ ಜತೆಗೆ ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು 60 ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೆ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು ನಾಲ್ಕು ಕೇಂದ್ರಾಡಳಿತ ಪ್ರದೇಶಗಳು ಕಾರ್ಯಕ್ರಮದಲ್ಲಿ ಭಾಗವಹಿಸಿವೆ ಎಂದರು.

ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ. ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದ್ದು, ಮುಂದಿನ ದಿನಗಳಲ್ಲೂ ಪ್ರೋತ್ಸಾಹ ನೀಡಲು ಸರಕಾರ ಬದ್ಧವಾಗಿದೆ. ಈ ಬಾರಿಯ ಚಿತ್ರ ಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಅವರು ಹೇಳಿದರು.

ಪ್ರತಿ ವರ್ಷ 3 ರಿಂದ 5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ.30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ದಿವಂಗತ ಸಾಲು ಮರದ ತಿಮ್ಮಕ್ಕ ಅವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು ಎಂದು ಅವರು ಕರೆ ನೀಡಿದರು.

ಪರಿಸರ ರಕ್ಷಣೆಗಾಗಿ ಹೋರಾಟವನ್ನೆ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೇ. ಸರಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದ ಅವರು, ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ಹೊಸದಿಲ್ಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಹೀಗಾಗಿ, ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದರು.

ಇದಕ್ಕೂ ಮೊದಲು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಪ್ರತಿ ಜಿಲ್ಲೆಗಳಲ್ಲಿ ಸಾಧಕರ ಮ್ಯೂಸಿಯಂ ತೆರೆಯುವಂತೆ. ಅದರಲ್ಲೂ, ಕನಿಷ್ಠ ಎರಡು ಕಲಾ ಗ್ಯಾಲರಿ ಶುರು ಮಾಡುವಂತೆ ಸರಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಸಿಎಂಗೆ ಚಿತ್ರ ಊಡುಗರೆ: ಚಿತ್ರಸಂತೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಅವರದೇ ಚಿತ್ರವನ್ನು ಊಡುಗರೆ ನೀಡಲಾಯಿತು. ಹಾನಗಲ್‍ನಿಂದ ಬಂದಿರುವ ರಾಣಿ ಎಂಬ ಕಲಾವಿದೆ ಚಿತ್ರ ಬಿಡಿಸಿದ್ದಾರೆ. ಸುಮಾರು ಎರಡು ದಿನಗಳಲ್ಲಿ ಈ ಚಿತ್ರ ಬಿಡಿಸಿದ್ದರು. ತಮ್ಮ ಚಿತ್ರವನ್ನು ಸಿದ್ದರಾಮಯ್ಯ ಖುಷಿಯಿಂದ ಸ್ವೀಕರಿಸಿದ ದೃಶ್ಯ ಕಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X