Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್...

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿ ಕೋರಿ ಮತ್ತೊಮ್ಮೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಲೈಂಗಿಕ ದೌರ್ಜನ್ಯ ಹಗರಣ

ವಾರ್ತಾಭಾರತಿವಾರ್ತಾಭಾರತಿ23 May 2024 11:11 AM IST
share
ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿ ಕೋರಿ ಮತ್ತೊಮ್ಮೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 23: ಲೈಂಗಿಕ ದೌರ್ಜನ್ಯ ಹಗರಣ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದಿದ್ದಾರೆ.

'ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಹಗರಣ ಪ್ರಕರಣದ ಕುರಿತು ತಮ್ಮ ಗಮನ ಸೆಳೆಯಲು ಮತ್ತೊಮ್ಮೆ ಪತ್ರ ಬರೆಯುತ್ತಿದ್ದೇನೆ. ಈ ಪ್ರಕರಣವು ರಾಜ್ಯದ ಜನರ ಆತ್ಮಸಾಕ್ಷಿಯನ್ನು ಘಾಸಿಗೊಳಿಸಿರುವುದಷ್ಟೇ ಅಲ್ಲದೆ, ದೇಶಾದ್ಯಂತ ಕಳವಳಕ್ಕೆ ಕಾರಣವಾಗಿದೆ' ಎಂದು ಮುಖ್ಯಮಂತ್ರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

'ಹಾಲಿ ಸಂಸದ, ಮರು ಆಯ್ಕೆ ಬಯಸಿ ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿರುವ ಹಾಗೂ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ಪ್ರಕರಣ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಅಂದರೆ, 2024ರ ಎಪ್ರಿಲ್ 27ರಂದು ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ದೇಶ ತೊರೆದು ಜರ್ಮನಿಗೆ ಓಡಿಹೋಗಿರುವುದು ನಾಚಿಕೆಗೇಡಿನ ಸಂಗತಿ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

'ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ತ್ವರಿತ ಮತ್ತು ಸಂಘಟಿತ ಕ್ರಮಗಳನ್ನು ಕೈಗೊಂಡು ಪ್ರಜ್ವಲ್ ಅವರ ಪಾಸ್ ಪೋರ್ಟ್ ರದ್ದುಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ' ಎಂದು ಪತ್ರದಲ್ಲಿ ಸಿಎಂ ಮನವಿ ಮಾಡಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವ ಮೂಲಕ ಕರ್ನಾಟಕ ಸರಕಾರವು ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಪ್ರಜ್ವಲ್ ರೇವಣ್ಣ ಮೇಲಿರುವ ಲೈಂಗಿಕ ಹಗರಣ ಆರೋಪಗಳ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಕ್ರಿಮಿನಲ್ ಆರೋಪಗಳನ್ನು ಎದುರಿಸಲು ಆರೋಪಿ ಉಪಸ್ಥಿತಿಗೆ ಎಸ್ ಐಟಿ ಪ್ರಯತ್ನಿಸುತ್ತಿದೆ. ಸಿಆರ್ ಪಿಸಿ ಕಲಂ 41ಎ ಅಡಿಯಲ್ಲಿ ತನಿಖಾಧಿಕಾರಿಯಿಂದ ಲುಕ್ಔಟ್ ಸುತ್ತೋಲೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಆಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಆರೋಪಿ ಪ್ರಜ್ವಲ್ ರೇವಣ್ಣ ಇಂದಿಗೂ ತಲೆಮರೆಸಿಕೊಂಡಿದ್ದಾರೆ. ಇದು ತೀವ್ರ ಕಳವಳಕಾರಿ ಸಂಗತಿ. ಪ್ರಜ್ವಲ್ ರೇವಣ್ಣ ವಿರುದ್ಧದ ಎಫ್ ಐಆರ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ವಸ್ತ್ರಾಪಹರಣ ಮತ್ತು ಬಲಿಪಶುಗಳಿಗೆ ಬೆದರಿಕೆ ಹಾಕುವ ಸಲುವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆಗಳನ್ನು ವೀಡಿಯೊ-ಗ್ರಾಫಿಂಗ್ ಸ್ವರೂಪದ ಆರೋಪಗಳಿವೆ. ಸವಲತ್ತುಗಳ ದುರುಪಯೋಗ ಮತ್ತು ಉದ್ದೇಶಪೂರ್ವಕವಾಗಿ ಕಾನೂನು ಪ್ರಕ್ರಿಯೆಗಳಿಗೆ ಅಸಹಕಾರ ತೋರುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದಿಂದ ಗಂಭೀರವಾದ ಕ್ರಮ ತೆಗೆದುಕೊಳ್ಳಬೇಕು.

ಆರೋಪಿಯ ಉಪಸ್ಥಿತಿಯನ್ನು ತನಿಖೆ ಮತ್ತು ವಿಚಾರಣೆಯನ್ನು ಎದುರಿಸಲು ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವುದು ಸಾಧನವಾಗಿದೆ. ಇದನ್ನು ಒತ್ತಿ ಹೇಳುವ ಅಗತ್ಯವಿಲ್ಲ. ಇದೇ ರೀತಿಯ ಕಳವಳವನ್ನು ವ್ಯಕ್ತಪಡಿಸುವ ನನ್ನ ಹಿಂದಿನ ಪತ್ರವು ಸಹ ಪರಿಸ್ಥಿತಿಯ ಗಂಭೀರತೆಯನ್ನ ಪ್ರಸ್ತಾಪಿಸಿತ್ತು. ಆದರೆ, ನನಗೆ ತಿಳಿದಿರುವಂತೆ, ಕ್ರಮ ತೆಗೆದುಕೊಳ್ಳದಿರುವುದು ನಿರಾಶಾದಾಯಕವಾಗಿದೆ. ಆದ್ದರಿಂದ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪಾಸ್ಪೋರ್ಟ್ ಕಾಯ್ದೆ, 1967ರ ಸೆಕ್ಷನ್ 10(3)(ಎಚ್) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ಅನ್ನು ರದ್ದುಗೊಳಿಸಿ ತ್ವರಿತ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ. ಕಾನೂನು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಜ್ವಲ್ ದೇಶಕ್ಕೆ ಸುರಕ್ಷಿತವಾಗಿ ಮರಳುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಪಡಿಸಿ, ಕಾನೂನಿನಡಿ ವಿಚಾರಣೆ ಎದುರಿಸಲು ಎಸ್‌ಐಟಿ ಗೆ ಕೇಂದ್ರ ಸರ್ಕಾರ ನೆರವಾಗುವಂತೆ ಪ್ರಧಾನಿ @narendramodi ಅವರಿಗೆ ಪತ್ರದ ಮೂಲಕ… pic.twitter.com/XWlXObDSxx

— Siddaramaiah (@siddaramaiah) May 23, 2024



ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X