ಮಧ್ಯಾಹ್ನ ಲೋಕಭವನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ರಾಜೀನಾಮೆ ಸಲ್ಲಿಸುವ ಸಾಧ್ಯತೆ

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ.
ಈ ಕುರಿತು ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದ್ದು, ಲೋಕಭವನ ಭೇಟಿ ಬಳಿಕ ಮುಖ್ಯಮಂತ್ರಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.
ಪಕ್ಷದಲ್ಲಿನ ರಾಜಕೀಯ ಬೆಳವಣಿಗೆಗಳು ಹಾಗೂ ನಾಯಕತ್ವ ಬದಲಾವಣೆ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಮುಖ್ಯಮಂತ್ರಿ ಸ್ವತಃ ಸ್ಪಷ್ಟನೆ ನೀಡಲಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಯವರ ಲೋಕಭವನ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿದೆ.
Next Story




