Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಒಳಮೀಸಲಾತಿ’ ಮಧ್ಯಂತರ ವರದಿ ನೀಡಲು...

‘ಒಳಮೀಸಲಾತಿ’ ಮಧ್ಯಂತರ ವರದಿ ನೀಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 Feb 2025 10:23 PM IST
share
‘ಒಳಮೀಸಲಾತಿ’ ಮಧ್ಯಂತರ ವರದಿ ನೀಡಲು ಒತ್ತಾಯ

ಬೆಂಗಳೂರು : ಪರಿಶಿಷ್ಟರ ಒಳಮೀಸಲಾತಿ ಸಂಬಂಧ ಸರಕಾರ ರಚಿಸಿರುವ ಏಕಸದಸ್ಯ ಆಯೋಗದ ಅಧ್ಯಕ್ಷ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಕೂಡಲೇ ಮಧ್ಯಂತರ ವರದಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಸಮಿತಿ’ಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಬುಧವಾರ ನಗರದಲ್ಲಿ ನ್ಯಾ.ನಾಗಮೋಹನ್‍ದಾಸ್ ಅವರನ್ನು ಭೇಟಿ ಮಾಡಿದ ಒಕ್ಕೂಟದ ನಿಯೋಗ ಮನವಿ ಸಲ್ಲಿಸಿದ್ದು, ರಾಜ್ಯ ಸರಕಾರ ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ರೀತಿತಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಬೇಕು. ಸುಪ್ರೀಂಕೋರ್ಟ್ ತೀರ್ಪಿನಲ್ಲಿ ‘ಪ್ರಾಯೋಗಿಕ ದತ್ತಾಂಶ’ವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯ ವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ‘ಸಮೀಕ್ಷೆ' ಕೈಗೊಳ್ಳಬೇಕು. ಇದಕ್ಕೆ ಸರಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ, ಅವಕಾಶಗಳಿದ್ದಾಗ ಪರಿಶಿಷ್ಟ ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು. ಭಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಬೇಕು. ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿ ಮತ್ತು ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು ಎಂದು ನಿಯೋಗ ಒತ್ತಾಯಿಸಿದೆ.

ಒಕ್ಕೂಟದ ಪದಾಧಿಕಾರಿಗಳಾದ ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನೆ, ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ಪ್ರಸನ್ನ ಎ.ಸಿ., ಮಂಜುನಾಥ್ ಸೇರಿದಂತೆ ಹಲವು ಮುಖಂಡರುಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X