ಜೂ.16ಕ್ಕೆ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವ ಸಂಬಂಧ ಚರ್ಚಿಸಲು ಜೂ.16ರ ಸಂಜೆ 6 ಗಂಟೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ‘ವಂಡರ್ಲಾ ರೆಸಾರ್ಟ್’ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಎಲ್ಲ ಕಾರ್ಯಾಧ್ಯಕ್ಷರು ಉಪಸ್ಥಿತರಿರುತ್ತಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.
ಆದುದರಿಂದ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಎಲ್ಲ ವಿಧಾನಸಭಾ ಸದಸ್ಯರು, ಬಾಹ್ಯ ಬೆಂಬಲಿತ ವಿಧಾನಸಭಾ ಸದಸ್ಯರು ತಪ್ಪದೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




