Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೋದಿ, ಅಮಿತ್ ಶಾ ಬಗ್ಗೆ ಕಾಂಗ್ರೆಸ್...

ಮೋದಿ, ಅಮಿತ್ ಶಾ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಸರಿಯಲ್ಲ: ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ25 Dec 2024 11:38 PM IST
share
Photo of Program

ಬೆಂಗಳೂರು : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ವಾಜಪೇಯಿ ಜನ್ಮಶತಾಬ್ದಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 'ಸುಶಾಸನ ದಿನಾಚರಣೆ' ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ. ಅಧಿವೇಶನದಲ್ಲಿ ‌ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಅವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಎಂದು ಆರೋಪಿಸಿದರು.

ನಾನು ವಾಜಪೇಯಿ ಬಗ್ಗೆ ಬಹಳಷ್ಟು ಹೇಳಬಲ್ಲೆ. ನಾನು ಆಳುವ ಪಕ್ಷದ ನಾಯಕನಾಗಿದ್ದಾಗ ಅಟಲ್ ಜೀ ವಿಪಕ್ಷದ ನಾಯಕರಾಗಿದ್ದರು. ನಾನು ವಿಪಕ್ಷದಲ್ಲಿದ್ದಾಗ ಅವರು ನನ್ನನ್ನು ತುಂಬಾ ಗೌರವದಿಂದ ಕಾಣುತ್ತಿದ್ದರು. ಅವರ ಹಿಂದಿ ಭಾಷಣದ ಅರ್ಥ ತಿಳಿದುಕೊಳ್ಳುತ್ತಿದ್ದೆ. ಬಹಳ ಸೊಗಸಾಗಿ ಅವರು ಹಿಂದಿ ಮಾತನಾಡುತ್ತಿದ್ದರು. ನಾನು ಆಗಾಗ ಅವರ ತಮಾಷೆಗೆ 'ಸರ್ ನಿಮ್ಮ ಹಿಂದಿಯಿಂದ ದೇಶದ ಸಮಸ್ಯೆ ಬಗೆಹರಿಯಲ್ಲ' ಅಂತ ಹೇಳುತ್ತಿದ್ದೆ. ಅವರು ನಗುತ್ತಿದ್ದರು. ಬಹಳ ದೊಡ್ಡ ವ್ಯಕ್ತಿ, ದೂರದೃಷ್ಟಿ ಇದ್ದ ನಾಯಕ ಎಂದು ವಾಜಪೇಯಿ ಗುಣಗಾನ ಮಾಡಿದರು.

ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಆಗುತ್ತೇನೆ ಎಂದು ಆಲೋಚನೆ ಮಾಡಿರಲಿಲ್ಲ. ಅವರು ಬರೀ 13 ದಿನ ಅಧಿಕಾರದಲ್ಲಿದ್ದರು. ಕಾಕತಾಳೀಯ ಎಂದರೆ, ಅವರ ನಂತರ 13 ಪಕ್ಷಗಳು ಸೇರಿ ಸಂಯುಕ್ತ ರಂಗ ರಚನೆ ಮಾಡಿ ನನ್ನನ್ನು ಪ್ರಧಾನಿ ಮಾಡಿದರು. ಆಗ ಏನೆಲ್ಲಾ ನಡೆಯಿತು ಎಂದು ನಾನು ಹೇಳಲು ಹೋಗಲ್ಲ. ನಾನು ಬರೀ 320 ದಿನ ಪ್ರಧಾನಿ ಆಗಿದ್ದೆ ಅಷ್ಟೇ ಎಂದು ದೇವೇಗೌಡ ಹೇಳಿದರು.

ನಾನು ವಾಜಪೇಯಿ ಅಧಿಕಾರದಿಂದ ಇಳಿದ ಮೇಲೆ ಅವರ ಮನೆಗೆ ಹೋಗಿದ್ದೆ. ನನ್ನ ಕಾಲದಲ್ಲಿ ಅಷ್ಟು ಕೆಲಸ ಮಾಡಲು ಆಗಿಲ್ಲ, ನೀವು ದೇಶವನ್ನು ಎಷ್ಟು ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂದು ಅವರಿಗೆ ಹೇಳಿದ್ದೆ. ನಾನು ಆರ್ಡಿನರಿ ಡಿಪ್ಲೊಮಾ ಮಾಡಿದವನು, ರೈತನ ಮಗ. ನೀರನ್ನು ಹೇಗೆ ಉಳಿಸಿಕೊಳ್ಳಬೇಕು, ಬಳಸಿಕೊಳ್ಳಬೇಕು ಎಂದು ತೋರಿಸಿದೆ. ಜನ ಕೊಟ್ಟ ಶಕ್ತಿಯಿಂದ ಈ ಎಲ್ಲ ಕೆಲಸ‌ ಮಾಡಿದೆ ಎಂದು ಅವರಿಗೆ ಹೇಳಿದೆ ಎಂದು ಸ್ಮರಿಸಿದರು.

ಬಿ.ಎಲ್ ಸಂತೋಷ್ ಬಗ್ಗೆ ಮೆಚ್ಚುಗೆ :

ಸಭೆಯಲ್ಲಿ ತಮಗೂ ಮೊದಲು ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾತುಗಳನ್ನು ಮೆಚ್ಚಿಕೊಂಡ ದೇವೇಗೌಡ, ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದರು.

ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ಮಾಜಿ ಸಿ.ಎಂ. ಬಿ.ಎಸ್.ಯಡಿಯೂರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ್, ಉನ್ನತ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ತಿಮ್ಮೇಗೌಡ ಅವರು ಅಟಲ್ ಪುರಸ್ಕಾರಕ್ಕೆ ಪಾತ್ರರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X