Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಣೆಯ...

ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಣೆಯ ಕಪಟ ನಾಟಕ: ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ26 Nov 2024 2:24 PM IST
share
Photo of Vijayendra

ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷವು ಹಲವಾರು ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಅಲ್ಲದೆ, ಸಂವಿಧಾನದ ದುರುಪಯೋಗ ಪಡಿಸಿಕೊಂಡು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಆಗಿದೆ ಎಂಬುದನ್ನು ದೇಶ- ರಾಜ್ಯದ ಜನರು ಮರೆತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಸಂವಿಧಾನ ದಿನಾಚರಣೆಯ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಿಂದೆ ಕಾನೂನು ದಿನವನ್ನಾಗಿ ಇದನ್ನು ಆಚರಿಸಲಾಗುತ್ತಿತ್ತು. ಇದನ್ನು ಸಂವಿಧಾನ ಸಮರ್ಪಣಾ ದಿನವಾಗಿ ಅರ್ಥಪೂರ್ಣವಾಗಿ ಆಚರಿಸುವ ಅಭಿಲಾಷೆ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರದು ಎಂದು ತಿಳಿಸಿದರು.

ನ.26ರಿಂದ ಜನವರಿ 26ರವರೆಗೆ 2 ತಿಂಗಳುಗಳ ಕಾಲ ದೇಶಾದ್ಯಂತ ಸಂವಿಧಾನ ಸನ್ಮಾನ ಅಭಿಯಾನ ಆಚರಿಸಲಾಗುತ್ತಿದೆ. ಸಂವಿಧಾನ ಒಂದು ಧರ್ಮಗ್ರಂಥ ಎಂದ ಅವರು, ಸಂವಿಧಾನಕ್ಕೆ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಹಲವಾರು ದಶಕಗಳಿಂದ ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ, ಸಂವಿಧಾನವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ. ಈ ಆಚರಣೆಯು ಕೇವಲ ನವೆಂಬರ್ 26ಕ್ಕೆ ಸೀಮಿತ ಆಗಬಾರದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದವರು ಇತಿಹಾಸವನ್ನು ಮರೆಮಾಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ಅದನ್ನು ತೊಡೆದು ಹಾಕಿ, ಡಾ. ಬಾಬಾಸಾಹೇಬ ಅಂಬೇಡ್ಕರರ ನೇತೃತ್ವದಲ್ಲಿ ರಚಿಸಿದ ಸಂವಿಧಾನಕ್ಕೆ ಸಂಪೂರ್ಣ ಗೌರವ ತಂದು ಕೊಡುವ ಪ್ರಾಮಾಣಿಕ ಕೆಲಸವನ್ನು ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ.ಅಂಬೇಡ್ಕರರ ಪರಿಶ್ರಮ, ಬೆವರಿನ ಫಲಶ್ರುತಿಯ ಫಲವಾಗಿ ಸಮಾನತೆ, ಸ್ವಾವಲಂಬನೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಕೊಡಲಾಗಿದೆ. ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಯ ಪಾಲಿಗೆ ಒಂದು ಧರ್ಮಗ್ರಂಥ ಎಂದು ವಿಶ್ಲೇಷಿಸಿದರು. ನಮ್ಮೆಲ್ಲರ ನೇತೃತ್ವದಲ್ಲಿ ಸಂವಿಧಾನಕ್ಕೆ ಗೌರವ ಕೊಡುವ ಕೆಲಸ ಆಗಬೇಕಿದೆ. ಸಂವಿಧಾನವನ್ನು ರಕ್ಷಿಸುವ ಕರ್ತವ್ಯ ಪ್ರತಿಯೊಬ್ಬ ಭಾರತೀಯರದು ಎಂದು ಅವರು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಬಿ.ಜಿ.ಪಾಟೀಲ್, ವಿಧಾನಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕ ಬಸವರಾಜ ಮತ್ತಿಮೊಡ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಆನಾಪುರ, ಮುಖಂಡ ಜಗದೀಶ್ ಹಿರೇಮನಿ, ರಾಜ್ಯ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X