Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ...

ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಎಎಪಿ

ವಾರ್ತಾಭಾರತಿವಾರ್ತಾಭಾರತಿ2 May 2024 5:43 PM IST
share
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಎಎಪಿ

ಬೆಂಗಳೂರು : ವಿಶ್ವಸಂಸ್ಥೆಯು ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿತ್ತು. ಅಲ್ಲದೆ, ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ ಎಂದು ಆಮ್ ಆದ್ಮಿ ಪಾರ್ಟಿ(ಎಎಪಿ) ಪ್ರಶ್ನಿಸಿದೆ.

ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ಕೋವಿಶೀಲ್ಡ್‌ ನ ಅಡ್ಡಪರಿಣಾಮವನ್ನು ಅರಿತ ಅನೇಕ ದೇಶಗಳು ಲಸಿಕೆಯನ್ನು ಬ್ಯಾನ್ ಮಾಡಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ 35 ಸಾವಿರ ಕೋಟಿ ರೂ. ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಹೇಳಿದರು.

ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರಕಾರಕ್ಕೆ ಕಿಕ್‍ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫಾರಸ್ಸು ಮಾಡಲಿಲ್ಲವೇ? ಎಂದು ಅವರು ಪ್ರಶ್ನೆ ಮಾಡಿದರು.

ವಿಶ್ವದ ಅತಿ ದೊಡ್ಡ ಲಸಿಕೆ ಕಾರ್ಯಕ್ರಮದಲ್ಲಿ ಅತಿ ದೊಡ್ಡ ಹಗರಣ ನಡೆದಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕೋವಿಶೀಲ್ಡ್ ಹಾಕಿಸಿಕೊಳ್ಳುವ ಕಾರಣ ರಕ್ತ ಹೆಪ್ಪುಗಟ್ಟುತ್ತದೆ ಎಂದು ಅಸ್ಟ್ರಾಜನಿಕ ಒಪ್ಪಿಕೊಂಡಿದೆ. ತಮ್ಮಿಂದಾದ ತಪ್ಪನ್ನು ಒಪ್ಪಿಕೊಳ್ಳಲು ಮೋದಿ ಸಿದ್ದವಾಗಿಲ್ಲ, ಕೆಲವು ವೈದ್ಯರಿಗೆ ಹಣ ನೀಡಿ ಅಡ್ಡ ಪರಿಣಾಮ ಇಲ್ಲ ಎಂದು ಹೇಳಿಸುತ್ತಿದ್ದಾರೆ ಎಂದು ಅವರು ಖಂಡಿಸಿದರು.

ಎಎಪಿ ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ಕೋವಿಶೀಲ್ಡ್ ತಯಾರಿ ಮಾಡಿದ್ದ ಅಸ್ಟ್ರಾಜನಿಕಾ ಕಂಪೆನಿ ಮೇಲೆ ಕೇಸು ದಾಖಲಾದ ಬಳಿಕ, ಕಂಪನಿ ಅಂತಿಮವಾಗಿ ತಮ್ಮ ಔಷಧಿಯಿಂದ ಅಡ್ಡ ಪರಿಣಾಮ ಇದೆ ಎಂದು ಕೋರ್ಟ್‍ನಲ್ಲಿ ಒಪ್ಪಿಕೊಂಡಿದೆ ಎಂದರು,

ವಿಶ್ವಸಂಸ್ಥೆಯೂ ಲಸಿಕೆಯಿಂದ ಅಡ್ಡ ಪರಿಣಾಮ ಇದ್ದು ಜನರಿಗೆ ಮಾಹಿತಿ ನೀಡುವಂತೆ ತಿಳಿಸಿದರೂ, ಕೇಂದ್ರ ಸರಕಾರ ಮಾತ್ರ ಔಷಧಿಯಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ವಾದಿಸಿತು. ಲೋಕಸಭೆಯಲ್ಲೇ ಅಧಿಕೃತವಾಗಿ ಸರಕಾರ ಘೋಷಣೆ ಮಾಡಿತ್ತು ಎಂದು ಅವರು ತಿಳಿಸಿದರು.

50 ಕೋಟಿ ರೂ.ಕೊಟ್ಟು ಬಾಂಡ್ ಖರೀದಿ ಮಾಡಿದ ಕಂಪೆನಿ: ಯಾವುದೇ ಲಸಿಕೆಯಾದರೂ ಅಡ್ಡ ಪರಿಣಾಮ ಇರುತ್ತದೆ. ಆದರೆ ಯಾಕೆ ಭಾರತದಲ್ಲಿ 80 ಪ್ರತಿಶತ ಜನಕ್ಕೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಭಾರತದ ಕೋವ್ಯಾಕ್ಸಿನ್ ಅನ್ನು ಯಾಕೆ ಶಿಫಾರಸ್ಸು ಮಾಡಲಿಲ್ಲ. ಅಸ್ಟ್ರಾಜನಿಕಾ ಕಂಪೆನಿ 50 ಕೋಟಿ ರೂ. ಚುನಾವಣಾ ಬಾಂಡ್ ಖರೀದಿ ಮಾಡಿದೆ. 35 ಸಾವಿರ ಕೋಟಿ ರೂ. ಜನಗಳ ದುಡ್ಡು ಖರ್ಚು ಮಾಡಿ ಈ ವ್ಯಾಕ್ಸಿನ್ ಅನ್ನು ಕೇಂದ್ರ ಸರಕಾರ ನೀಡಿದೆ. ಯಾಕೆ ಇದೇ ಕಂಪೆನಿಯ ಲಸಿಕೆಯನ್ನು ಕೇಂದ್ರ ಸರ್ಕಾರ ಶಿಫಾರಸ್ಸು ಮಾಡಿದೆ ಎಂದು ಸಮಸ್ತ ತನಿಖೆಯಾಗಬೇಕು.-ಅಶೋಕ್ ಮೃತ್ಯುಂಜಯ, ಎಎಪಿ ಸಂಘಟನಾ ಕಾರ್ಯದರ್ಶಿ

‘2022ರಲ್ಲಿ ಹೃದಯಾಘಾತದಿಂದ 32,457 ಮಂದಿ, 2021ರಲ್ಲಿ 28,413 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಲಸಿಕೆ ಪಡೆದ ನಂತರ 2022ರಲ್ಲಿ 30 ವರ್ಷದೊಳಗಿನ 3,329 ಯುವಕರು ಸಾವನ್ನಪ್ಪಿದ್ದಾರೆ. ಫಿಟ್ ಆಗಿದ್ದ ನಟ ಪುನೀತ್ ರಾಜ್‍ಕುಮಾರ್ ಇದ್ದಕ್ಕಿದ್ದಂತೆ ಹೃದಯಾಘತದಿಂದ ಸಾವನ್ನಪ್ಪುತ್ತಾರೆ ಎಂದರೆ ಕೋವಿಶೀಲ್ಡ್ ಲಸಿಕೆ ಒಂದು ಕಾರಣ ಇರಬಹುದು.

ಮೋಹನ್ ದಾಸರಿ, ಎಎಪಿ ಸಂಘಟನಾ ಕಾರ್ಯದರ್ಶಿ

..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X