Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ...

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ : ಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ8 Aug 2026 3:00 PM IST
share
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ : ಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಈ ಮಸೂದೆಯನ್ನು ರೂಪಿಸಿ, ಲೋಕಸಭೆಯಲ್ಲಿ ಪಾಸ್ ಮಾಡಿದ್ದವರು ಕಾಂಗ್ರೆಸ್ ನವರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಮಹಿಳೆರಿಗೆ ಹೆಚ್ಚು ಸ್ಥಾನ ನೀಡಿದ್ದೆವು. ಸಧ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ” ಎಂದರು.

ದೆಹಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದಾಗ, “ಹೋಗಲೇಬೇಕಲ್ಲವೆ, ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ” ಎಂದರು.




ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ

“ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಅಂಗವಾಗಿ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿ ಸ್ಮರಿಸುತ್ತಿದ್ದೇವೆ. ನಾನು ಅನೇಕ ಬಾರಿ ನಿಜಲಿಂಗಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ನಾನು ಹಾಗೂ ಎಸ್ ಎಂ ಕೃಷ್ಣ ಅವರು ಹಲವು ಬಾರಿ ನಿಜಲಿಂಗಪ್ಪ ಅವರ ಜೊತೆಗೆ ಹೋಗಿದ್ದೇವೆ. ಸೋನಿಯಾ ಗಾಂಧಿ ಅವರು ಕೂಡ ನಿಜಲಿಂಗಪ್ಪ ಅವರನ್ನು ಭೇಟಿ ಮಾಡಬೇಕು ಎಂದು ಚಿತ್ರದುರ್ಗಕ್ಕೆ ಆಗಮಿಸಿದ್ದರು. ನಾನು ಎರಡನೇ ಬಾರಿಗೆ ಶಾಸಕನಾದಾಗಲೂ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದೆ” ಎಂದು ಸ್ಮರಿಸಿದರು.

“ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕೆ ದೊಡ್ಡ ಹೋರಾಟ ಮಾಡಿದ್ದರು. ಮಹಾತ್ಮಾ ಗಾಂಧೀಜಿ ಅವರ ಚಿಂತನೆ ಅಳವಡಿಸಿಕೊಂಡ ನಾಯಕರು. ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ” ಎಂದು ಬಣ್ಣಿಸಿದರು.

“ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ನಾವೆಲ್ಲರೂ ಅವರ ಹಾದಿಯಲ್ಲಿ ಸಾಗಬೇಕು” ಎಂದು ಅಭಿಪ್ರಾಯಪಟ್ಟರು.

“ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಐಸಿಸಿ ಅಧ್ಯಕ್ಷರಾಗಿ ಅವರು ಕೊಟ್ಟ ಮಾರ್ಗದರ್ಶನಗಳು, ದಾಖಲೆಗಳಲ್ಲಿ ಇವೆ. 1924ರ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಿಜಲಿಂಗಪ್ಪ ಅವರ ಪಾತ್ರ ದೊಡ್ಡದಾಗಿತ್ತು. ನೀರಾವರಿಗೆ ಭದ್ರಾ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ಪ್ರಮುಖ ಪಾತ್ರ ವಹಿಸಿದ ನಾಯಕರು. ನಿಜಲಿಂಗಪ್ಪ ಅವರು ಸಿಎಂ ಆಗಿದ್ದರೂ ಅವರ ಪುತ್ರಿ ನಾನು ಓದಿದ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅವರು ಸರಳ ಜೀವನ ನಡೆಸಿದ್ದರು. ಅವರ ಮಾರ್ಗದರ್ಶನ ನಮಗೆ ಸದಾ ಅಗತ್ಯ” ಎಂದು ತಿಳಿಸಿದರು.

Tags

D. K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X