ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಹೂಡಿರುವ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ರೋಹಿನಿ ಸಿಂಧೂರಿ/ಡಿ.ರೂಪಾ
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಮಾ.12ರವರೆಗೆ ತಡೆಯಾಜ್ಞೆ ನೀಡಿದೆ. ಆ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ತಮ್ಮ ವಿರುದ್ದ ಡಿ.ರೂಪಾ ಮೌದ್ಗೀಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ತಡೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮತ್ತೊಮ್ಮೆ ರಾಜೀ ಸಂಧಾನಕ್ಕೆ ಪ್ರಯತ್ನಿಸುವಂತೆ ಇಬ್ಬರೂ ಅಧಿಕಾರಿಗಳಿಗೂ ಮೌಖಿಕ ಸಲಹೆ ನೀಡಿದೆ.
ವಿಚಾರಣೆ ವೇಳೆ ಸಿಂಧೂರಿ ಪರ ವಕೀಲರು ವಾದ ಮಂಡಿಸಿ, ರೋಹಿಣಿ ಸಿಂಧೂರಿ ಹೂಡಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಸಂಜ್ಞೆ ಪರಿಗಣಿಸಿರುವುದನ್ನು ಪ್ರಶ್ನಿಸಿದ್ದ ರೂಪಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೀಗಾಗಿ 2023ರಲ್ಲಿ ರೋಹಿಣಿ ವಿರುದ್ದ ರೂಪಾ ಮಾನಹಾನಿ ದಾವೆ ಹೂಡಿದ್ದಾರೆ. ರೋಹಿಣಿ ಮಾಧ್ಯಮ ಹೇಳಿಕೆ ಆಧರಿಸಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ಪ್ರತಿದಿನ ವಿಚಾರಣೆ ನಡೆಸಿ ಸಂಜ್ಞೆ ಪರಿಗಣಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಈ ನಡೆಯ ಕುರಿತು ಗಮನಹರಿಸಬೇಕು ಎಂದು ಕೋರಿದ್ದರು.
ಅದಕ್ಕೆ ರೂಪಾ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದರು. ವಾದ ಪ್ರತಿವಾದ ಆಲಿಸಿ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.







