Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಾವೋಸ್: ಎನ್‍ಟಿಟಿ ಡೇಟಾದಿಂದ 2 ಬಿಲಿಯನ್...

ದಾವೋಸ್: ಎನ್‍ಟಿಟಿ ಡೇಟಾದಿಂದ 2 ಬಿಲಿಯನ್ ಡಾಲರ್, ಆ್ಯಬ್ ಸಮೂಹದಿಂದ 400ಕೋಟಿ ರೂ. ಹೂಡಿಕೆಗೆ ಅಸ್ತು

ವಾರ್ತಾಭಾರತಿವಾರ್ತಾಭಾರತಿ18 Jan 2024 6:49 PM IST
share
ದಾವೋಸ್: ಎನ್‍ಟಿಟಿ ಡೇಟಾದಿಂದ 2 ಬಿಲಿಯನ್ ಡಾಲರ್, ಆ್ಯಬ್ ಸಮೂಹದಿಂದ 400ಕೋಟಿ ರೂ. ಹೂಡಿಕೆಗೆ ಅಸ್ತು

ಬೆಂಗಳೂರು: ಸ್ವಿಝರ್ಲ್ಯಾಂಡ್‌ ನ ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದ ಮೂರನೆಯ ದಿನ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗವು ಎಚ್‍ಪಿ, ಆ್ಯಬ್ ಇನ್ಬೇವ್ ಬ್ರೂವರೀಸ್, ಎಚ್‍ಸಿಎಲ್, ಗೆನಾತ್ರಿ(ಪೆಟ್ರೋನಾಸ್), ಎನ್‍ಟಿಟಿ ಡೇಟಾ, ಸಿಸ್ಕೋ, ಸ್ವಿಗ್ಗಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿ, ಹೆಚ್ಚಿನ ಹೂಡಿಕೆ ಆಕರ್ಷಿಸಿದೆ.

ಗುರುವಾರ ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಪಾಟೀಲ್, ʼಪಾನೀಯಗಳ ತಯಾರಿಕೆಗೆ ಹೆಸರಾಗಿರುವ ಆ್ಯಬ್ ಇನ್ಬೇವ್ ಇಂಡಿಯಾ ಕಂಪೆನಿಯು ರಾಜ್ಯದಲ್ಲಿ ತನ್ನ ಉತ್ಪಾದನೆ ಹೆಚ್ಚಿಸಲು 400 ಕೋಟಿ ರೂ. ಹೂಡಲು ಒಪ್ಪಿಕೊಂಡಿದೆ. ಜೊತೆಗೆ, ಈಗಾಗಲೇ ರಾಜ್ಯದಲ್ಲಿ 900 ಮಿಲಿಯನ್ ಡಾಲರ್ ಹೂಡಿಕೆ ಮಾಡಿರುವ ಎನ್‍ಟಿಟಿ ಡೇಟಾ ಕಂಪೆನಿಯು ಮುಂಬರುವ ವರ್ಷಗಳಲ್ಲಿ ನಮ್ಮಲ್ಲಿ ಇನ್ನೂ 2 ಬಿಲಿಯನ್ ಡಾಲರ್ ಬಂಡವಾಳ ತೊಡಗಿಸಲು ತೀರ್ಮಾನಿಸಿದೆ’ ಎಂದು ತಿಳಿಸಿದ್ದಾರೆ.

ಎಚ್‍ಪಿ (ಹ್ಯೂಲೆಟ್ ಪೆಕಾರ್ಡ್) ಕಂಪೆನಿಯು ಇನ್ನೂ 4ಸಾವಿರ ಉದ್ಯೋಗಗಳನ್ನು ಸೃಷ್ಟಿಸಲು ನಿರ್ಧರಿಸಿದ್ದು, ಬೆಂಗಳೂರಿನ ಮಹದೇವಪುರದಲ್ಲಿ ಹೊಸದಾಗಿ ಎರಡು ಸುಸಜ್ಜಿತ ಕಚೇರಿಗಳನ್ನು ಆರಂಭಿಸಲಿದೆ. ಜೊತೆಗೆ ಮೈಸೂರಿನಲ್ಲಿ ಸರ್ವರ್ ತಯಾರಿಕಾ ಘಟಕ ಆರಂಭಿಸಲು ಅದು ಮಾತುಕತೆ ನಡೆಸುತ್ತಿದೆ. ಇದು ಸಾಧ್ಯವಾದರೆ 1 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಸಾಧ್ಯವಾಗಲಿದೆ. ಅಲ್ಲದೆ, ಎಚ್.ಪಿ ಕಂಪನಿಯು ರಾಜ್ಯದಲ್ಲಿ ತನ್ನ `ಗ್ಲೋಬಲ್ ಲೀಡರ್ ಶಿಪ್’ ಕಚೇರಿ ಹೊಂದಲು ಮನಸ್ಸು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪೆಟ್ರೋನಾಸ್ (ಗೆನಾತ್ರಿ) ಕಂಪೆನಿಯು ಶುದ್ಧ ಇಂಧನ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು, ರಾಜ್ಯದಲ್ಲಿ ಈ ವರ್ಷದ ಕೊನೆಯ ಹೊತ್ತಿಗೆ 30 ಗಿಗಾವ್ಯಾಟ್ ಮರುಬಳಕೆ ಮಾಡಹುದಾದ ಇಂಧನ ತಯಾರಿಸುವ ಗುರಿ ಹೊಂದಿದೆ. ಅಲ್ಲದೆ, ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ತ್ಯಾಜ್ಯ ನಿರ್ವಹಣೆಯನ್ನು ಅದು ವೈಜ್ಞಾನಿಕವಾಗಿ ಮಾಡಲು ಆಸಕ್ತಿ ಹೊಂದಿದೆ. ಈ ನಿಟ್ಟಿನಲ್ಲಿ ಅದು ರಾಜ್ಯ ಸರಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದು ಅವರು ನುಡಿದಿದ್ದಾರೆ.

ಇದೇ ರೀತಿಯಲ್ಲಿ ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಸಿಸ್ಕೋ, ನಗರ ಸಂಚಾರ ವ್ಯವಸ್ಥೆಯೊಂದಿಗೆ ಸ್ವಿಗ್ಗಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ವೋಲ್ವೋ ಕಂಪೆನಿಗಳು ಹೆಚ್ಚಿನ ಬಂಡವಾಳ ಹೂಡಲು ಮುಂದೆ ಬಂದಿವೆ. ಇವುಗಳ ಹೂಡಿಕೆ ಪ್ರಸ್ತಾವನೆಗೆ ರಾಜ್ಯ ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲ ಬಗೆಯ ಸಹಕಾರ ಕೊಡುವ ಭರವಸೆ ನೀಡಲಾಗಿದೆ ಎಂದು ಪಾಟೀಲ್ ವಿವರಿಸಿದ್ದಾರೆ.

ಈ ಹೂಡಿಕೆಗಳ ಸಂಬಂಧವಾಗಿ ಎಚ್‍ಸಿಎಲ್ ಕಂಪೆನಿಯ ಮುಖ್ಯಸ್ಥ ಬಾಲಸುಬ್ರಮಣಿಯನ್, ಪೆಟ್ರೋನಾಸ್ ಕಂಪೆನಿಯ ಸಿಇಒ ಸುಶೀಲ್ ಪುರೋಹಿತ್, ಸಿಸ್ಕೋದ ಪ್ರಧಾನ ವ್ಯವಸ್ಥಾಕಪ ಜೀತು ಪಟೇಲ್ ಮುಂತಾದವರೊಂದಿಗೆ ವಿಸ್ತೃತ ಮಾತುಕತೆ ನಡೆಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ದಾವೋಸ್ ಶೃಂಗಸಭೆಗೆ ರಾಜ್ಯದಿಂದ ತೆರಳಿರುವ ನಿಯೋಗದಲ್ಲಿ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿ-ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಏಕ್‍ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ್ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X