Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೇಸಿಗೆ ರಜೆ : ಬೆಲೆಬಾಳುವ ವಸ್ತು...

ಬೇಸಿಗೆ ರಜೆ : ಬೆಲೆಬಾಳುವ ವಸ್ತು ಮನೆಯಲ್ಲಿಡಬೇಡಿ, ಹೊಸ ಬೀಗ ಬಳಸಿ : ದಯಾನಂದ್

ವಾರ್ತಾಭಾರತಿವಾರ್ತಾಭಾರತಿ7 April 2025 9:43 PM IST
share
ಬೇಸಿಗೆ ರಜೆ : ಬೆಲೆಬಾಳುವ ವಸ್ತು ಮನೆಯಲ್ಲಿಡಬೇಡಿ, ಹೊಸ ಬೀಗ ಬಳಸಿ : ದಯಾನಂದ್

ಬೆಂಗಳೂರು : ಬೇಸಿಗೆ ರಜೆ ಕಳೆಯಲು ಪ್ರವಾಸಕ್ಕೆ ತೆರಳುವ ಮುನ್ನ ನಿಮ್ಮ ಮನೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಿ. ಜತೆಗೆ, ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡುವ ಬದಲು ಬ್ಯಾಂಕ್ ಲಾಕರ್ ಸೌಲಭ್ಯ ಹಾಗೂ ಹೊಸ ಬೀಗಗಳನ್ನು ಬಳಸಿ ಎಂದು ಬೆಂಗಳೂರು ನಗರಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಸೋಮವಾರ ಈ ಕುರಿತು ಮುನ್ನೆಚ್ಚರಿಕೆ ಕ್ರಮಗಳ ಪ್ರತಿಕ್ರಿಯಿಸಿದ ಅವರು, ದೀರ್ಘಕಾಲ ಪ್ರವಾಸಕ್ಕೆ ತೆರಳುವ ಬೆಂಗಳೂರಿಗರು ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಉತ್ತಮ ಎಂದು ಹೇಳಿದ್ದಾರೆ.

ಮನೆಯಿಂದ ಹೊರಹೋಗುವ ಮುನ್ನ ಮನೆಯ ಕಿಟಕಿ. ಬಾಗಿಲು ಗೇಟ್‍ಗಳನ್ನು ಲಾಕ್ ಮಾಡಿ. ಮತ್ತು ಕೈಲಿಗಳನ್ನು ಮನೆಯ ಹೊರಗೆ ಹೂಕುಂಡ ಅಥವಾ ಪಾದರಕ್ಷೆಗಳು ಅಥವಾ ಡೋರ್ ಮ್ಯಾಟ್ ಕೆಳಗೆ ಮತ್ತಿತರ ಕಡೆಗಳಲ್ಲಿ ಬಚ್ಚಿಡಬೇಡಿ. ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದರೆ, ಅವು ಸೂಕ್ತವಾಗಿ ಕಾರ್ಯ ನಿರ್ವಹಿಸುತ್ತಿವೆಯೇ? ಮನೆಯ ಆಯಕಟ್ಟಿನ ಸ್ಥಳಗಳ ಮೇಲೆ ನಿಗಾವಹಿಸುತ್ತಿವೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳನ್ನು ಯಾರು ಬೇಕಿದ್ದರೂ ವೀಕ್ಷಿಸಬಹುದಾಗಿರುವುದರಿಂದ ನಿಮ್ಮ ಪ್ರವಾಸದ ರೂಪುರೇಷೆಗಳು, ದಿನಾಂಕಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಿರಿ. ಹಳೆಯ ಬೀಗಗಳನ್ನು ಬಳಸುವ ಬದಲು ಸುರಕ್ಷತೆಗೆ ಆದ್ಯತೆ ನೀಡಿ, ಹೆಚ್ಚು ಉತ್ತಮ ಗುಣಮಟ್ಟದ ಬೀಗಗಳನ್ನು ಬಳಸಿ. ಮನೆಯ ಮುಖ್ಯ ಗೇಟ್‍ನ್ನು ಲಾಕ್ ಮಾಡದಿರುವುದು ಸೂಕ್ತ, ಅದು ಮನೆಯಲ್ಲಿ ಯಾರೂ ಇಲ್ಲ ಎಂದು ಕಳ್ಳರಿಗೆ ಸುಲಭವಾಗಿ ತಿಳಿಯಲು ಅನುಕೂಲವಾಗಬಹುದು ಎಂದು

ಮನೆಯ ಮುಂದೆ ದಿನಪತ್ರಿಕೆಗಳು, ಹಾಲಿನ ಪ್ಯಾಕೆಟ್‍ಗಳು ಸಂಗ್ರಹವಾಗಲು ಬಿಡದಿರಿ. ಅವುಗಳ ಪೂರೈಕೆದಾರರಿಗೆ ನೀವು ಮನೆಯಲ್ಲಿ ಇರದಿರುವುದರ ಕುರಿತು ಮಾಹಿತಿ ನೀಡುವುದು ಸೂಕ್ತ. ಮನೆಯಲ್ಲಿ ಯಾರಾದರೂ ಇದ್ದಾರೆ ಎಂಬ ಭಾವನೆ ಮೂಡಿಸಲು ಮನೆಯೊಳಗಿನ ಒಂದಾದರೂ ದೀಪವನ್ನು, ಲೈಟ್ ಬೆಳಗಿಸಿಡುವುದು ಸೂಕ್ತ.

ಕಳ್ಳತನ ಪತ್ತೆ ಅಥವಾ ಒಳನುಗ್ಗುವಿಕೆ ತಪ್ಪಿಸಲು ಆಧುನಿಕ ತಂತ್ರಜ್ಞಾನವಿರುವ ಸಾಧನಗಳನ್ನು ಬಳಸಬಹುದು. ಸಾಧ್ಯವಾದರೆ ಸ್ಥಳೀಯ ಪೊಲೀಸರು ಅಥವಾ ನೆರೆಹೊರೆಯ ಕಾವಲು ಪಡೆಗಳೊಂದಿಗೆ ಕೈಜೋಡಿಸಿ ಎಂದು ಆಯುಕ್ತರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X