Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ.:...

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ.: ಡಿಸಿಎಂ ಡಿಕೆಶಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ11 Oct 2025 3:11 PM IST
share
ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ.: ಡಿಸಿಎಂ ಡಿಕೆಶಿ ಘೋಷಣೆ
'ಟನೆಲ್ ಯೋಜನೆಗೆ ಲಾಲ್ ಬಾಗ್ ಆರು ಎಕರೆ ವಶ ಎಂಬುದು ಸುಳ್ಳು'

ಬೆಂಗಳೂರು, ಅ.10: "ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಲಾಲ್ ಬಾಗ್ ನಲ್ಲಿ ನಾಗರಿಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಬೆಂಗಳೂರಿನಲ್ಲಿ ಅವಕಾಶ ಇರುವೆಡೆ ಲಾಲ್ ಬಾಗ್ ಮಾದರಿಯಲ್ಲಿ ಟ್ರೀಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. ಅದಕ್ಕೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು” ಎಂದು ತಿಳಿಸಿದರು.

“ಇಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದೇವೆ. ಇನ್ನು ಮುಂದೆ ಇಲ್ಲಿನ ಶೌಚಾಲಯಗಳ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುವುದು.ಬೆಂಗಳೂರಿನ ಕಸ ವಿಲೇವಾರಿ, ವಾಹನ ನಿಲುಗಡೆ, ಸೇರಿದಂತೆ ಅನೇಕ ವಿಚಾರವಾಗಿ ಸಲಹೆ, ಅಭಿಪ್ರಾಯಗಳು ಬಂದಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಟನಲ್ ರಸ್ತೆಗೆ ಲಾಲ್ ಬಾಗ್ ನ ಆರು ಎಕರೆ ಭೂಮಿ ಅಗತ್ಯವಿಲ್ಲ

"ಲಾಲ್ ಬಾಗ್ ಸಾರ್ವಜನಿಕರ ಆಸ್ತಿ. ಈ ಸಾರ್ವಜನಿಕರ ಆಸ್ತಿ ಉಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಆರು ಎಕರೆ ಭೂಮಿ ವಶಪಡಿಸಿಕೊಳ್ಳುವ ಅಗತ್ಯವಿಲ್ಲ. ಅರ್ಧ ಎಕರೆ ಪ್ರದೇಶದಲ್ಲಿ ಅಶೋಕ ಪಿಲ್ಲರ್ ಕಡೆ ಟನಲ್ ರಸ್ತೆಗೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗುವುದು. ಪಾರ್ಕಿಂಗ್ ಗಾಗಿ ಇರುವ ಜಾಗದಲ್ಲಿ ಸುಮಾರು ಒಂದು ಎಕರೆ ಜಾಗವನ್ನು ಸ್ಟೋರೇಜ್ ಗೆ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ ಲಾಲ್ ಬಾಗ್ ಗೆ ಕೊಡುತ್ತೇವೆ. ಸಣ್ಣದಾಗಿರುವ ಗಿಡಗಳನ್ನು ತೆರವುಗೊಳಿಸಿ, ಮತ್ತೆ ಗಿಡ ನೆಡುತ್ತೇವೆ. ಉಳಿದಂತೆ ಲಾಲ್ ಬಾಗ್ ಉದ್ಯಾನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ" ಎಂದು ತಿಳಿಸಿದರು.

ಈ ಯೋಜನೆ ಆರಂಭ ಯಾವಾಗ ಎಂದು ಕೇಳಿದಾಗ, "ನಾವು ಯೋಜನೆಯ ಟೆಂಡರ್ ಕರೆಯಲಾಗಿದೆ. ಬಿಡ್ ನಲ್ಲಿ ಯಾರು ಭಾಗವಹಿಸುತ್ತಾರೆ ಎಂದು ನೋಡಿ, ನಂತರ ಅತ್ಯುತ್ತಮ ಬಿಡ್ ಮಾಡಿದವರಿಗೆ ನೀಡಲಾಗುವುದು" ಎಂದು ತಿಳಿಸಿದರು.

ಮುಂದಿನ ದಿನಗಳಲ್ಲೂ ಉದ್ಯಾನಗಳಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಮುಂದುವರಿಸುತ್ತೀರಾ ಎಂದು ಕೇಳಿದಾಗ, "ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ, ಸಲಹೆ, ಅಹವಾಲು ಆಲಿಸಲಾಗುವುದು" ಎಂದು ತಿಳಿಸಿದರು.

ಜನರು ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ನಿಮ್ಮ ಬಳಿ ಚರ್ಚಿಸಿದ್ದಾರೆ ಎಂದು ಕೇಳಿದಾಗ, "ಈ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ಬ್ಲಾಕ್ ಸ್ಪಾಟ್ ಇದೆಯೋ ಅಲ್ಲಿ ಕ್ಯಾಮೆರಾ ಅಳವಡಿಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯ

ಜಿಬಿಎ ವಿಚಾರದಲ್ಲಿ ಬಿಜೆಪಿಯವರ ಟೀಕೆ ಬಗ್ಗೆ ಕೇಳಿದಾಗ, "ಬಿಜೆಪಿಯವರಿಗೆ ಬೆಂಗಳೂರು ಅಭಿವೃದ್ಧಿ ಮುಖ್ಯವಲ್ಲ, ರಾಜಕೀಯವೇ ಮುಖ್ಯ. ಅವರು ಜಿಬಿಎ ಸಮಿತಿ ಸಭೆಯಲ್ಲಿ ತಮ್ಮ ಅಭಿಪ್ರಾಯ, ಸಲಹೆ, ದೂರು ಹೇಳಿಕೊಳ್ಳಬಹುದಾಗಿತ್ತು. ಜನ ಅವರನ್ನು ಗೆಲ್ಲಿಸಿ ಅಧಿಕಾರ ನೀಡಿದ್ದು, ಆ ಜನರ ಧ್ವನಿಯಾಗಬೇಕಿತ್ತು. ಆದರೆ ಆ ಕೆಲಸ ಮಾಡಲಿಲ್ಲ. ಬದಲಿಗೆ ಜಿಬಿಎ ರದ್ದು ಮಾಡುವುದಾಗಿ ಹೇಳಿದ್ದಾರೆ. ಅದು ಅವರಿಗೆ ಬಿಟ್ಟ ವಿಚಾರ. ಇದುವರೆಗೂ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಯೋಜನೆ, ತೀರ್ಮಾನಗಳನ್ನು ಯಾವುದೇ ಸರ್ಕಾರ ಬದಲಿಸಲು ಸಾಧ್ಯವಾಗಿಲ್ಲ. ನಮ್ಮ ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿ ಜನಪರ ತೀರ್ಮಾನ ಮಾಡುತ್ತೇವೆ. ಮುಂದೆ ಅವರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಅವರು ಈ ಆಲೋಚನೆ ಮಾಡುವುದು ಬೇಡ. ಅವರು ಜಿಬಿಎ ವಿರೋಧಿಸುವುದೇ ಆದರೆ ಪಾಲಿಕೆ ಚುನಾವಣೆ ಬಹಿಷ್ಕರಿಸಲಿ. ಮೇಯರ್ ಅಧಿಕಾರ ಅವಧಿಯನ್ನು ನಾವು ಎರಡೂವರೇ ವರ್ಷಕ್ಕೆ ವಿಸ್ತರಿಸಿದ್ದೇವೆ. ಇನ್ನು ವಾರ್ಡ್ ಸಮಿತಿಗಳಲ್ಲಿ ಐದು ಸಾವಿರ ಸದಸ್ಯರು ಇರುತ್ತಾರೆ. 369 ಪಾಲಿಕೆ ಪ್ರತಿನಿಧಿಗಳು ಆಯ್ಕೆಯಾಗುತ್ತಾರೆ. ಇದರಲ್ಲಿ 50% ಮಹಿಳೆಯರು ಇರುತ್ತಾರೆ" ಎಂದರು.

ಸರ್ಜಾಪುರದಲ್ಲಿ ಭಾರಿ ಮಳೆಯಿಂದ ರೈನ್ ಬೋ ಬಡಾವಣೆಗೆ ತೊಂದರೆಯಾಗಿದೆ ಎಂದು ಕೇಳಿದಾಗ, "ಅಧಿಕಾರಿಗಳ ಬಳಿ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು.

Tags

DCMDK SivakumarJalalbagh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X