Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅರ್ಹ ರೈತರಿಗೆ ಬರ ಪರಿಹಾರ ತ್ವರಿತವಾಗಿ...

ಅರ್ಹ ರೈತರಿಗೆ ಬರ ಪರಿಹಾರ ತ್ವರಿತವಾಗಿ ತಲುಪಿಸಲು ಡಿಸಿಎಂ ಪರಮೇಶ್ವರ ಸೂಚನೆ

15 ಲಕ್ಷ ನಿವೇಶನಗಳ ವಿತರಣೆ ಯೋಜನೆಗೆ ವಿಶೇಷ ಆದ್ಯತೆ ನೀಡಲು ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ20 Nov 2026 2:41 PM IST
share
ಅರ್ಹ ರೈತರಿಗೆ ಬರ ಪರಿಹಾರ ತ್ವರಿತವಾಗಿ ತಲುಪಿಸಲು ಡಿಸಿಎಂ ಪರಮೇಶ್ವರ ಸೂಚನೆ

ಬೆಂಗಳೂರು, ನವೆಂಬರ್ 20: ಸರಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿಗದಿತ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಆಡಳಿತದಲ್ಲಿ ನಿರ್ಲಕ್ಷ್ಯ ಹಾಗೂ ಅನಗತ್ಯ ವಿಳಂಬವನ್ನು ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ಅವರು ಇಂದು ವಿಕಾಸಸೌಧದಲ್ಲಿ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡುತ್ತಿದ್ದರು.

ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಾಧಿಸಿರುವ ಪ್ರಗತಿಯ ಕುರಿತು ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಬೇಕು. ಕೆಲವು ಜಿಲ್ಲೆಗಳು ಉತ್ತಮ ಕಾರ್ಯಕ್ಷಮತೆ ತೋರಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಇದಕ್ಕೆ ಕಾರಣಗಳನ್ನು ಪರಿಶೀಲಿಸಿ, ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಬೇಕು. ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸುವುದು ಎಲ್ಲ ಅಧಿಕಾರಿಗಳ ಆದ್ಯತೆಯಾಗಬೇಕು ಎಂದು ಸೂಚಿಸಿದರು.

ಬರ ಪರಿಸ್ಥಿತಿ: ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ :

ಸೂಪರ್ ಎಲ್ನೀನೋ ಪರಿಣಾಮವಾಗಿ ರಾಜ್ಯದಲ್ಲಿ ಇಂತಹ ಭೀಕರ ಬರಗಾಲ ಎದುರಾಗಬಹುದು ಎಂಬುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದೆ. ಆದಾಗ್ಯೂ, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಉತ್ಪಾದನೆ ಕುಂಠಿತಗೊಂಡರೆ ಅದರ ಪರಿಣಾಮ ಇತರ ಕ್ಷೇತ್ರಗಳ ಮೇಲೂ ಬೀರುತ್ತದೆ ಎಂದರು.

ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಉತ್ತಮ ಬೆಳೆ ಬಂದಿರುವ ಬಗ್ಗೆ ವರದಿಗಳಿಲ್ಲ. ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಹೀಗಾಗಿ ಬರದ ಪರಿಣಾಮ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಯಾವ ಪ್ರಮಾಣದಲ್ಲಿ ಬೀರಿದೆ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆಗೆ ಆದ್ಯತೆ:

ಬರ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಮೇವಿನ ಬೀಜದ ಕಿಟ್ ಗಳನ್ನು ವಿತರಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೇವಿನ ಬೀಜದ ಕಿಟ್ ಗಳ ವಿತರಣೆಗಾಗಿ ಹೆಚ್ಚುವರಿಯಾಗಿ 30 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವ ಸಲ್ಲಿಕೆಯಾಗಿದೆ. ಅದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಧಿಕಾರಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಬರ ಪರಿಹಾರ ವಿತರಣೆಯಲ್ಲಿ ವಿಳಂಬ ಸಲ್ಲದು :

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವಾಗಲು ಅರ್ಹ ಪ್ರತಿ ರೈತರಿಗೆ 5,000 ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಈವರೆಗೂ ಪರಿಹಾರ ವಿತರಣೆ ಪೂರ್ಣಗೊಂಡಿಲ್ಲ. ಪರಿಹಾರ ಘೋಷಿಸಿ ಎರಡು ತಿಂಗಳು ಕಳೆದರೂ ರೈತರ ಖಾತೆಗಳಿಗೆ ಹಣ ಜಮೆಯಾಗದಿರುವುದು ಸರಿಯಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅರ್ಹ ರೈತರಿಗೆ ಪರಿಹಾರದ ಹಣವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

15 ಲಕ್ಷ ನಿವೇಶನಗಳ ವಿತರಣೆಗೆ ವಿಶೇಷ ಆದ್ಯತೆ:

ಬಡವರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರೂ ಬಡವರು ಇಂದಿಗೂ ಗುಡಿಸಲುಗಳಲ್ಲಿ ವಾಸಿಸುವ ಪರಿಸ್ಥಿತಿ ಮುಂದುವರಿದಿರುವುದು ಕಳವಳಕಾರಿ ಎಂದು ಹೇಳಿದರು.

ಮುಖ್ಯಮಂತ್ರಿಗಳ ಆಶಯದಂತೆ ಬಡವರಿಗೆ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಯನ್ನು ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿ ಪರಿಗಣಿಸಿ, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಉದ್ದೇಶಕ್ಕಾಗಿ ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನನ್ನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವುದು, ಜಮೀನಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಹಾಗೂ ನಿವೇಶನಗಳ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಸೂಚಿಸಿದರು.

ಪಿಂಚಣಿ ಫಲಾನುಭವಿಗಳ ಅರ್ಹತೆಯ ಸಮಗ್ರ ಪರಿಶೀಲನೆಗೆ ಸೂಚನೆ :

ರಾಜ್ಯದಲ್ಲಿ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಆರಂಭಿಕ ಹಂತದಲ್ಲಿಯೇ ಹೆಚ್ಚಿನ ಎಚ್ಚರಿಕೆ ವಹಿಸಬೇಕಿತ್ತು. ಪಿಂಚಣಿಗೆ ಅರ್ಹರಾಗಿರುವವರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೃಷಿ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ಚಂದ್ರ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್, ಭೂಮಾಪನ ಮತ್ತು ಭೂದಾಲೆಗಳ ಆಯುಕ್ತರಾದ ರಾಕೇಶ್ ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ, ಯುವಜನಸೇವಾ ಮತ್ತು ಕ್ರೀಡಾ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ಇದ್ದರು.

Tags

DCMParameshwaraDrought ReliefFarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X