Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೋಕಸಭಾ ಚುಣಾವಣೆಯಲ್ಲಿ ಬಿಜೆಪಿ ನೇತೃತ್ವದ...

ಲೋಕಸಭಾ ಚುಣಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಸೋಲಿಸಿ : ಎಸ್‌ಎಫ್‌ಐ

ವಾರ್ತಾಭಾರತಿವಾರ್ತಾಭಾರತಿ23 April 2024 6:17 PM IST
share
ಲೋಕಸಭಾ ಚುಣಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಸೋಲಿಸಿ : ಎಸ್‌ಎಫ್‌ಐ

ಬೆಂಗಳೂರು: ಶಿಕ್ಷಣರಂಗವನ್ನು ಕಾರ್ಪೋರೇಟೀಕರಣ, ಕೋಮುವಾದಿಕರಣ ಹಾಗೂ ಕೇಂದ್ರೀಕರಣಗೊಳಿಸುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಲೋಕಸಭಾ ಚುಣಾವಣೆಯಲ್ಲಿ ಸೋಲಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಕರೆ ನೀಡಿದೆ.

ಮಂಗಳವಾರ ಫೆಡರೇಷನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ರಾಜ್ಯದ ವಿದ್ಯಾರ್ಥಿ ಸಮುದಾಯದ ಗಮನಕ್ಕೆ ತರಲು ಬಯಸುವುದೇನೆಂದರೆ 2014 ರಿಂದ 2024ರಲ್ಲಿನ ಮೋದಿ ಆಡಳಿತದ ಒಂದು ದಶಕದಲ್ಲಿ ಕೇಂದ್ರ ಸರಕಾರವು ಶಿಕ್ಷಣಕ್ಕೆ ವೆಚ್ಚ ಮಾಡುತ್ತಿರುವ ವಾರ್ಷಿಕ ಸರಾಸರಿಯು ಜಿಡಿಪಿಯ ಕೇವಲ ಶೇಕಡಾ 0.41 ಮಾತ್ರವೇ ಆಗಿದೆ. ಇದು ಹಿಂದಿನ 2004-2014 ಯುಪಿಎ ಸರಕಾರವು ಒಂದು ದಶಕದಲ್ಲಿ ಶಿಕ್ಷಣಕ್ಕೆ ವೆಚ್ಚ ಮಾಡಿದ ಶೇ.0.66ಕ್ಕಿಂತಲೂ ಬಹಳ ಕಡಿಮೆ ಇದೆ ಎಂದಿದ್ದಾರೆ.

ಹೊಸ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳದ ರಾಜ್ಯಗಳಿಗೆ ಅನುದಾನವನ್ನು ನಿಲ್ಲಿಸಲಾಗುವುದು ಎಂದು ಮೋದಿ ಸರಕಾರವು ಬೆದರಿಕೆ ಹಾಕಿದೆ. ಇತ್ತೀಚೆಗೆ, ಅಂತಹ ಎಂಟು ರಾಜ್ಯಗಳಿಗೆ ಸಮಗ್ರ ಶಿಕ್ಷಾ ಅಭಿಯಾನದ ಅಡಿಯಲ್ಲಿನ ಅನುದಾನವನ್ನು ಕೇಂದ್ರ ಸರಕಾರ ನಿಲ್ಲಿಸಿದೆ ಎಂಬ ವರದಿಗಳಿವೆ ಎಂದು ಅವರು ಆತಂಕವ್ಯಕ್ತಪಡಿಸಿದ್ದಾರೆ.

ಸರಕಾರಿ ಶಾಲೆಗಳನ್ನು ಮುಚ್ಚುವ ಅಥವಾ ಇತರ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ, ವಿದ್ಯಾರ್ಥಿಗಳು ಬಲವಂತವಾಗಿ ಖಾಸಗಿ ಶಾಲೆಗಳನ್ನು ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಗೆ ‘ಚಿರಾಗ್’ ಕಾರ್ಯಕ್ರಮದ ಅಡಿಯಲ್ಲಿ ಪ್ರವೇಶ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಆದರೆ ಅದೇ ರಾಜ್ಯಗಳಲ್ಲಿನ ಖಾಸಗಿ ಶಾಲೆಗಳಗೆ ಸಹಾಯಧನ(ಸಬ್ಸಿಡಿ) ನೀಡಲಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹೀಗೆ ಸ್ಥಳಾಂತರವಾದಾಗ ಬಡ ವಿದ್ಯಾರ್ಥಿಗಳು ಶಾಲೆ ಬಿಡುತ್ತಾರೆ. ಆಗ ಈ ಸಬ್ಸಿಡಿ ನಿಲ್ಲಿಸುವ ಹುನ್ನಾರವಿದೆ ಎಂದು ಅವರು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ಪ್ರತೀ ವರ್ಷ ಹೆಚ್ಚಾಗುತ್ತಲೇ ಬಂದಿವೆ. ಹೊಸ ಉನ್ನತ ಶಿಕ್ಷಣ ಸಂಸ್ಥೆಗಳು ಬಹುಮಟ್ಟಿಗೆ ಖಾಸಗಿಯವರಿಂದಲೇ ನಿರ್ವಹಿಸಲ್ಪಡುತ್ತಿವೆ. ಸಾರ್ವಜನಿಕ ಅನುದಾನಿತ ವಿಶ್ವವಿದ್ಯಾಲಯಗಳಲ್ಲಿ ಶುಲ್ಕವನ್ನು ವಿಪರೀತವಾಗಿ ಏರಿಸಿರುವುದು ಹಾಗೂ ಮೂಲ ಸೌಲಭ್ಯಗಳು ಮರೀಚಿಕೆಯಾಗಿರುವ ಕಾರಣ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಖಾಸಗಿ ವಿಶ್ವವಿದ್ಯಾಲಯಗಳತ್ತ ಅನಿವಾರ್ಯವಾಗಿ ಹೋಗುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಶಾಲೆ ಹಾಗೂ ಉನ್ನತ ಶಿಕ್ಷಣ ಮಟ್ಟದಲ್ಲಿ ಎರಡೂ ಕಡೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈಗ ಆನ್‌ಲೈನಲ್ಲಿ ಶಿಕ್ಷಣ ಮತ್ತು ತರಬೇತಿ ಹಾಗೂ ಡಿಜಿಟಲೈಜೇಶನ್‌ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದು ಸಮಾಜದ ವಂಚಿತರ ಸಮುದಾಯಗಳ ವಿದ್ಯಾರ್ಥಿಗಳು ಶಿಕ್ಷಣದ ಹಕ್ಕನ್ನು ಪಡೆಯುವುದನ್ನು ವಂಚಿಸುವ ಪಿತೂರಿಯಲ್ಲದೇ ಬೇರೇನೂ ಅಲ್ಲ ಎಂದು ಖಂಡಿಸಿದ್ದಾರೆ.

ಬಹುಪಾಲು ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಎಸ್.ಸಿ./ಎಸ್.ಟಿ.ಯವರಿಗೆ ಹಾಗೂ ಇತರ ಮೀಸಲಾತಿ ಹೊಂದಿರುವ ವಿಭಾಗದವರಿಗೆ ಸ್ಕಾಲರ್‌ಶಿಪ್‌ಗಳನ್ನು ನಿಲ್ಲಿಸಲಾಗುತ್ತಿದೆ ಅಥವಾ ಕಾರಣವೇ ಇಲ್ಲದೇ ಹಣಸಂದಾಯವನ್ನು ತಡೆ ಹಿಡಿಯಲಾಗುತ್ತಿರುವುದು ಶಿಕ್ಷಣದಿಂದ ದೂರ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ನಡೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.ಅಲ್ಪಸಂಖ್ಯಾತ ಸಮುದಾಯದ ಸಂಸ್ಥೆಗಳು ನಡೆಸುತ್ತಿರುವ ಮದರಸಾಗಳಲ್ಲಿ ನಿರಂತರ ಹಸ್ತಕ್ಷೇಪಗಳ ಮೂಲಕ ಅವುಗಳನ್ನು ಹಾಳುಗೆಡವಲಾಗುತ್ತಿದೆ. ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಮಾನ್ಯತೆಯನ್ನೂ ಪ್ರಶ್ನಿಸಲಾಗುತ್ತಿದೆ. ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ನೀಡಲಾಗುತ್ತಿರುವ ಫೆಲೋಶಿಪ್ ಹಣವನ್ನು ಕಡಿತ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

‘ವೃತ್ತಿಜೀವನ ನಿರ್ಮಾಣ’(ಕೆರಿಯರ್ ಬಿಲ್ಡಿಂಗ್) ದ ಹೆಸರಿನಲ್ಲಿ ದುಬಾರಿ ಖಾಸಗಿ ಕೇಂದ್ರಗಳು ಹುಲುಸಾಗಿ ಬೆಳೆಯುತ್ತಿವೆ. ಅವು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿವೆ. ಅದರ ಪರಿಣಾಮವಾಗಿ ಮಾನಸಿಕ ಒತ್ತಡಕ್ಕೊಳಗಾದ ಮಕ್ಕಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸಾಕಷ್ಟು ಸಂಪನ್ಮೂಲಗಳನ್ನು ನೀಡದಿರುವ ಕಾರಣ ಉನ್ನತ ಶಿಕ್ಷಣ ಸಂಸ್ಥೆಗಳು ಅನಿವಾರ್ಯವಾಗಿ ‘ಸ್ವಯಂ-ವರಮಾನ ಸೃಷ್ಟಿ’(ಸೆಲ್ಫ್ ಫೈನಾನ್ಸಿಂಗ್) ಮಾದರಿಯನ್ನು ಅಳವಡಿಸಿಕೊಳ್ಳುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಸೆಲ್ಫ್ ಫೈನಾನ್ಸಿಂಗ್‌ನಿಂದಾಗಿ ವೈದ್ಯಕೀಯ, ವಾಣಿಜ್ಯ, ಇಂಜನೀರಿಂಗ್ ಮುಂತಾದ ಕ್ಷೇತ್ರಗಳಲ್ಲಿನ ತಾಂತ್ರಿಕ ಶಿಕ್ಷಣವನ್ನು ಹುಡುಕಿಕೊಂಡು ಶಿಕ್ಷಣ ಅಗ್ಗವಾಗಿರುವ ವಿದೇಶಿ ಸಂಸ್ಥೆಗಳತ್ತ ದೇಶಾಂತರ ಹೋಗುವಂತಾಗಿದೆ. ಕೇಂದ್ರದ ಬಿಜೆಪಿ ಸರಕಾರ ಕಳಪೆ ಗುಣಮಟ್ಟದ ವಿದೇಶಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಆಹ್ವಾನ ನೀಡುತ್ತಿರುವುದರಿಂದ ಪರಿಸ್ಥಿತಿಯು ಇನ್ನೂ ಹದಗೆಡುತ್ತದೆ ಎಂದು ಅಮರೇಶ ಕಡಗದ ಖಂಡಿಸಿದ್ದಾರೆ.

ಬಿಜೆಪಿಯು 2009ರ ಶಿಕ್ಷಣ ಹಕ್ಕು ಕಾಯಿದೆಯನ್ನು ಬಹುಮಟ್ಟಿಗೆ ಅನೂರ್ಜಿತಗೊಳಿಸಿದೆ. ಶಿಕ್ಷಣ ವ್ಯೆವಸ್ಥೆಯನ್ನು ದುರ್ಬಲಗೊಳಿಸಿ ದೇಶದ ಭವಿಷ್ಯವನ್ನು ಹಾಳುಮಾಡಲು ಯತ್ನಿಸುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಈ ಬಾರಿಯ ಲೋಕಸಭಾ ಚುಣಾವಣೆಯಲ್ಲಿ ವಿದ್ಯಾರ್ಥಿ ಯುವಜನರು ಸೋಲಿಸುವ ಮೂಲಕ ತಕ್ಕಪಾಠ ಕಲಿಸಿ ದೇಶದ ಶಿಕ್ಷಣ ವ್ಯೆವಸ್ಥೆಯನ್ನು ಉಳಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

" ಮೋದಿ ಸರಕಾರವು ದೇಶದ ಶಿಕ್ಷಣ ರಂಗವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಚರಿತ್ರೆಯ ಪುನರ್ ರಚನೆ ಮತ್ತು ಸಮಾಜ ವಿಜ್ಞಾನದ ಕೇಸರೀಕರಣದ ಮೂಲಕ ಈ ವಿಷಯಗಳು ಊಳಿಗಮಾನ್ಯ, ಪುರುಷಪ್ರಧಾನ ಹಾಗೂ ಗೊಡ್ಡು ಸಂಪ್ರದಾಯ ಚಿಂತನೆಗಳು ಹಾಗೂ ಮೂಢನಂಬಿಕೆಗಳಲ್ಲಿ ಮುಳುಗಿ ಹೋಗುತ್ತಿವೆ. ಜ್ಯೋತಿಷ್ಯ, ವೇದ ಗಣಿತ ಹಾಗೂ ನೈತಿಕ ಶಿಕ್ಷಣಗಳ ಹೆಸರಿನಲ್ಲಿ ಇಡೀ ಪಠ್ಯಗಳನ್ನು ಅವೈಚಾರಿಕ ಹಾಗೂ ಅವೈಜ್ಞಾನಿಕ ವಿಷಯಗಳಿಂದ ತುಂಬಿಸಲಾಗುತ್ತಿದೆ"

ಅಮರೇಶ ಕಡಗದ, ಎಸ್‌ಎಫ್‌ಐನ ರಾಜ್ಯಾಧ್ಯಕ್ಷ

" ಬಿಜೆಪಿಯೇತರ ಆಳ್ವಿಕೆಯ ರಾಜ್ಯಗಳಲ್ಲಿ ಬಿಜೆಪಿಯಿಂದ ನೇಮಕವಾದ ರಾಜ್ಯಪಾಲರು ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಯಲ್ಲಿ ಬಹಿರಂಗವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದ ಹಾಗೂ ಪುದುಚೇರಿ ವಿಶ್ವವಿದ್ಯಾಲಯದ ಉಪಕುಲಪತಿಗಳ ನೇಮಕಾತಿಯನ್ನು ತಮಿಳುನಾಡಿನ ರಾಜ್ಯಪಾಲರು ನಿರಾಕರಿಸುತ್ತಿರುವುದು ಅದಕ್ಕೊಂದು ದೊಡ್ಡ ಉದಾಹರಣೆಯಾಗಿದೆ. ಅಲ್ಲದೆ, ಆರೆಸ್ಸೆಸ್‌ನ ಕೋಮುವಾದಿ, ಪಂಥೀಯವಾದಿ ಸಿದ್ಧಾಂತಗಳನ್ನು ಬೆಂಬಲಿಸುವ ವ್ಯಕ್ತಿಗಳು ಶೈಕ್ಷಣಿಕವಾಗಿ ಕಳಪೆ ಜ್ಞಾನಮಟ್ಟ ಹೊಂದಿದ್ದರೂ, ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನಾಗಿ, ವಿಶ್ವವಿದ್ಯಾಲಯ ಅನುದಾನ ಆಯೋಗದ ಉನ್ನತ ಅಧಿಕಾರಿಗಳನ್ನಾಗಿ ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳಿಗೆ ನೇಮಕ ಮಾಡಲಾಗುತ್ತಿದೆ"

ಭೀಮನಗೌಡ ಸುಂಕೇಶ್ವರಹಾಳ, ಎಸ್‌ಎಫ್‌ಐನ ರಾಜ್ಯ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X