Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರಕಾರದ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರಕಾರದ ನಡೆ ಪರಿಷತ್ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ7 Aug 2026 3:17 PM IST
share
ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರಕಾರದ ನಡೆ ಪರಿಷತ್ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿಯವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ. ಇದು ಸಭಾಪತಿ ಸ್ಥಾನದ ಗೌರವಕ್ಕೆ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನ. ಕರ್ನಾಟಕ ವಿಧಾನ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಕೆಟ್ಟ ನಡವಳಿಕೆ ಹಾಗೂ ಕಪ್ಪು ಚುಕ್ಕೆಯಾಗಿ ಉಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಸವರಾಜ ಹೊರಟ್ಟಿ ಸುದೀರ್ಘ 46 ವರ್ಷಗಳ ಕಾಲ ಯಾವುದೇ ಬಿಡುವಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿ, ಸಚಿವರಾಗಿ ಹಾಗೂ ಸಭಾಪತಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಅವರು ಪಕ್ಷಾತೀತವಾಗಿ ವಿಷಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿಯಾದವರು. ಆದರೆ, ಅವರನ್ನು ಮುಖ್ಯಮಂತ್ರಿ ಮನೆಗೆ ಕರೆಯಿಸಿ ಮಾತನಾಡಿ, ವಿಧಾನಸೌಧದಲ್ಲಿಯೇ ಕುಳಿತು ಒತ್ತಾಯಪೂರ್ವಕವಾಗಿ ರಾಜೀನಾಮೆ ಪಡೆದಿರುವುದು ಮತ್ತು ರಾಜೀನಾಮೆ ನೀಡಿದ ಕೇವಲ 5 ನಿಮಿಷಗಳಲ್ಲಿ ಅದನ್ನು ಅಂಗೀಕರಿಸಿ ಪ್ರಕಟನೆ ಹೊರಡಿಸಿರುವುದು ಸರ್ಕಾರದ ದುರಾಲೋಚನೆಯನ್ನು ಪ್ರದರ್ಶಿಸುತ್ತದೆ. ಈ ಪ್ರಕ್ರಿಯೆಯು ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ. ಇದು ಸಭಾಪತಿ ಸ್ಥಾನದ ಗೌರವಕ್ಕೆ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನವಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಕೆಟ್ಟ ನಡವಳಿಕೆ ಹಾಗೂ ಕಪ್ಪು ಚುಕ್ಕೆಯಾಗಿ ಉಳಿಯಲಿದೆ ಎಂದು ತಿಳಿಸಿದ್ದಾರೆ.

ಸಭಾಪತಿಯಾಗಿ ಬಸವರಾಜ ಹೊರಟ್ಟಿ ನೀಡಿದ ಕೊಡುಗೆ ಮತ್ತು ಮಾಡಿದ ಕೆಲಸಗಳು ಇತಿಹಾಸದಲ್ಲಿ ಶಾಶ್ವತವಾಗಿರಲಿವೆ. ರಾಜೀನಾಮೆಯ ನಂತರವೂ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿ ಮುಂದುವರಿಯಬೇಕು. ಯುವಕರಿಗೆ ಹಾಗೂ ಹೊಸ ರಾಜಕಾರಣಿಗಳಿಗೆ ತಮ್ಮ ಸುದೀರ್ಘ ಅನುಭವದ ಮೂಲಕ ಮಾರ್ಗದರ್ಶನ ನೀಡಬೇಕು ಎಂಬುದು ಸಾರ್ವಜನಿಕರ ಅಪೇಕ್ಷೆಯಾಗಿದೆ. ಅವರ ಹಿರಿತನ ಮತ್ತು ಅಪಾರ ಅನುಭವಕ್ಕೆ ರಾಜ್ಯದ ಜನತೆ ಸದಾ ಗೌರವಪೂರ್ವಕವಾಗಿ ಋಣಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

Tags

Basavaraja BommaiBasavaraj Horatti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X