ದೇವನಹಳ್ಳಿ | ಡ್ರಗ್ಸ್ ಮಾರಾಟ : ವಿದೇಶಿ ಪ್ರಜೆ ಬಂಧನ, 21 ಗ್ರಾಂ ಕೊಕೇನ್, 30 ಗ್ರಾಂ ಎಂಡಿಎಂಎ ವಶ

ದೇವನಹಳ್ಳಿ : ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಲರ್ ವಿಮಾನ ನಿಲ್ದಾಣದ ಹಿಂಭಾಗದ ಗೇಟ್ ಸಮೀಪ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ದೇವನಹಳ್ಳಿ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಅನುಮಾನಾಸ್ಪದವಾಗಿ ಡ್ರಗ್ಸ್ ಖರೀದಿದಾರರನ್ನು ಸೆಳೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
Next Story





