Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಿ.ಲಂಕೇಶ್‌ರ ಟೀಕೆ-ಟಿಪ್ಪಣಿಗಳನ್ನು...

ಪಿ.ಲಂಕೇಶ್‌ರ ಟೀಕೆ-ಟಿಪ್ಪಣಿಗಳನ್ನು ಡಿಜಿಟಲೀಕರಣಗೊಳಿಸಿ : ದಿನೇಶ್ ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ12 Nov 2024 9:47 PM IST
share
ಪಿ.ಲಂಕೇಶ್‌ರ ಟೀಕೆ-ಟಿಪ್ಪಣಿಗಳನ್ನು ಡಿಜಿಟಲೀಕರಣಗೊಳಿಸಿ : ದಿನೇಶ್ ಅಮೀನ್ ಮಟ್ಟು

ಬೆಂಗಳೂರು : ಹಿರಿಯ ಪತ್ರಕರ್ತ ಪಿ.ಲಂಕೇಶ್ ಅವರು 20 ವರ್ಷಗಳ ಕಾಲ ಪ್ರತಿ ವಾರ ಟೀಕೆ ಟಿಪ್ಪಣಿಗಳನ್ನು ಬರೆದಿದ್ದಾರೆ. ಕನಿಷ್ಟ 12,00 ಟೀಕೆ ಟಿಪ್ಪಣಿಗಳಿವೆ. ಅವೆಲ್ಲವನ್ನೂ ಸರಕಾರ, ಮಾಧ್ಯಮ ಅಕಾಡಮಿ ಅಥವಾ ಸಾಹಿತ್ಯ ಅಕಾಡಮಿ ಸಂಗ್ರಹಿಸಿ ಅವುಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಒತ್ತಾಯಿಸಿದ್ದಾರೆ.

ಮಂಗಳವಾರ ನಗರದ ಕಲಾಗ್ರಾಮದಲ್ಲಿ ಸಾಹಿತ್ಯ ಅಕಾಡಮಿಯ ವತಿಯಿಂದ ಆಯೋಜಸಿರುವ ಲಂಕೇಶ್ ಬಹುತ್ವಗಳ ಶೋಧ ಅಧ್ಯಯನ ಶಿಬಿರದಲ್ಲಿ ಮಾತನಾಡಿದ ಅವರು, ಈಗ 3 ಸಂಪುಟಗಳಲ್ಲಿ ಪಿ.ಲಂಕೇಶ್‍ರ ಟೀಕೆ ಟಿಪ್ಪಣಿಗಳು ಪ್ರಕಟಗೊಂಡಿವೆ. ಆದರೆ ಇನ್ನುಳಿದ ಎಲ್ಲ ಟೀಕೆ ಟಿಪ್ಪಣಿಗಳು ಪ್ರಮುಖವಾಗಿವೆ. ಅವುಗಳನ್ನು ಸಂಗ್ರಹಿಸಬೇಕಿದೆ ಎಂದು ತಿಳಿಸಿದರು.

ಇಂದು ರಾಜ್ಯದಲ್ಲಿ ಜಾತಿಗಣತಿ ವರದಿಯ ಕುರಿತು ಚರ್ಚೆ ನಡೆಯುತ್ತಿದೆ. ಅದನ್ನು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ವಿರೋಧಿಸುತ್ತಿವೆ. ಇಂಥ ಸಂದರ್ಭದಲ್ಲಿ ಪ್ರಾಮಾಣಿಕ ಮತ್ತು ಸ್ಪಷ್ಟ ನಿಲುವು ತೆಗೆದುಕೊಳ್ಳುವ ಮಾಧ್ಯಮವಾಗಲಿ, ಸರಕಾರವಾಗಲಿ ಇಲ್ಲವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಲಂಕೇಶ್ ಇದ್ದಿದ್ದರೆ ಏನು ಪ್ರತಿಕ್ರಿಯೆ ನೀಡುತ್ತಿದ್ದರು ಎನ್ನುವುದು ಪ್ರಶ್ನೆಯಾಗಿದೆ ಎಂದು ಹೇಳಿದರು.

1983ರಲ್ಲಿ ಕಾಂಗ್ರೆಸ್ ಸೋತು ಜನತಾ ರಂಗ ಅಧಿಕಾರಕ್ಕೆ ಬಂದಾಗ ಚಳವಳಿಗಳ ಯಶಸ್ಸು ಎಂದು ತಿಳಿಯಲಾಗಿತ್ತು. ಆದರೆ ಆಗ 18 ಮಂದಿ ಬಿಜೆಪಿ ಸದಸ್ಯರು ವಿಧಾನಸಭೆಗೆ ಆಯ್ಕೆಯಾಗಿದ್ದರು. ಅದರಲ್ಲಿ 8 ಮಂದಿ ದಕ್ಷಿಣ ಕನ್ನಡದವರು. ಅದ್ದರಿಂದ ಇವತ್ತು ಚರ್ಚೆ ಮಾಡುತ್ತಿರುವ ಕೋಮುವಾದದ ಬೀಜ 1983ರಲ್ಲೇ ಬಿತ್ತಲಾಗಿತ್ತು ಎಂದು ಅಭಿಪ್ರಾಯಪಟ್ಟರು.

1983ರಲ್ಲಿ ಲಂಕೇಶ್ ಅವರು ಟೀಕೆ ಟಿಪ್ಪಣಿಯಲ್ಲಿ, ಭಾರತೀಯತ್ವದ ಬಗ್ಗೆ ಸ್ಪಷ್ಟ ನಿಲುವು ತಾಳದಿದ್ದರೆ, ಅನೇಕ ದುರಂತಗಳ ಗಂಗೋತ್ರಿಗಳಾಗಬೇಕಾಗುತ್ತದೆ. ಹಿಂದೂಧರ್ಮದ ಘೋರಿಯನ್ನು ನಾವೇ ತೋಡಿದ ಅಪರಾಧಿಗಳಾಗಬೇಕಾಗುತ್ತದೆ ಎಂದು ಬರೆದಿದ್ದರು. 1983ರ ನಂತರದ ಟೀಕೆ ಟಿಪ್ಪಣಿಗಳನ್ನು ನೋಡಿದರೆ ಈ ರೀತಿಯ ವಿಚಾರ ಹೆಚ್ಚಿರುವುದನ್ನು ನೋಡಬಹುದು ಎಂದು ಅವರು ತಿಳಿಸಿದರು.

ಯಾವುದೇ ಒಂದು ಪತ್ರಿಕೆ ಯಶಸ್ಸು ಕಾಣಬೇಕಾದರೆ ಓದುಗರಿಂದ ಪ್ರತಿಕ್ರಿಯೆ ಬರಬೇಕು. ಆಗ ಪ್ರಾಮಾಣಿಕ ಓದುಗರು ಮತ್ತು ಪ್ರಾಮಾಣಿಕ ಬರಹಗಾರರು ಇದ್ದರು. ಲಂಕೇಶ್‍ರ ತರಗತಿಗೆ ಹೋಗದವರು ಲಂಕೇಶ್ ಅವರನ್ನು ಮೇಷ್ಟ್ರು ಎಂದು ಕರೆಯುತ್ತಾರೆ. ಅವರಿಗೆ ಅವರ ವಿದ್ಯಾರ್ಥಿಗಳ ಭವಿಷ್ಯದ ಬಗೆಗಿನ ಕಾಳಜಿಯಿಂದ ಬರೆಯುತ್ತಿದ್ದರು ಎಂದು ದಿನೇಶ್ ಅಮೀನ್ ಮಟ್ಟು ತಿಳಿಸಿದರು.

ಈ ಸಂದರ್ಭದಲ್ಲಿ ವಿಮರ್ಶಕಿ ಎಂ.ಎಸ್.ಆಶಾದೇವಿ, ಚಲನಚಿತ್ರ ನಿರ್ದೇಶಕ ಕೃಷ್ಣ ಮಾಸಡಿ, ನಿವೃತ್ತ ಅಧಿಕಾರಿ ಎನ್.ಆರ್.ವಿಶುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

‘ಲಂಕೇಶ್ ಅವರು ತಮ್ಮ ನಾಟಕಗಳಲ್ಲಿ ಮಧ್ಯಮ ವರ್ಗದ ಪೀಕಲಾಟ ಮತ್ತು ವಾಸ್ತವತೆಯನ್ನು ಕುರಿತು ಬರೆದಿದ್ದಾರೆ. ಕ್ರಾಂತಿ ಬಂತು ಕ್ರಾಂತಿ ನಾಟಕದಿಂದ, ಗಿಳಿಯು ಪಂಜರದೊಳಿಲ್ಲ’ ನಾಟಕದಲ್ಲಿ ಮಧ್ಯಮ ವರ್ಗದ ಜೀವನದ ಬಗ್ಗೆ ತಿಳಿಸಿದ್ದಾರೆ. ಲಂಕೇಶ್ ಬದುಕಿನಲ್ಲಿ ಎಲ್ಲಕ್ಕಿಂತ ಘೋರವಾದದ್ದು, ಬೇಸರ ಎಂದು ಹೇಳಿದ್ದರು. ಭಾರತ ಎಲ್ಲ ಮೂಲಗಳಿಂದ ಆಕ್ರಮಣಕ್ಕೆ ಒಳಗಾಗಿದೆ. ರೋಗಗ್ರಸ್ತ ಸಮಾಜದ ಬಗ್ಗೆ ಗುಣಮುಖ ನಾಟಕದಲ್ಲಿ ತಿಳಿಸಿದ್ದಾರೆ. ಈಡಿಪಸ್ ನಾಟಕ ಕನ್ನಡಕ್ಕೆ ಅನುವಾದ ಮಾಡಿದ್ದರೂ ಅದು ಮೂಲ ಕೃತಿಯ ಹಾಗೆ ಇದೆ’

-ಸಿ.ಬಸವಲಿಂಗಯ್ಯ, ಹಿರಿಯ ನಾಟಕಕಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X