Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಧರ್ಮಸ್ಥಳ ಪ್ರಕರಣ | ಎಸ್‍ಐಟಿಗೆ ಹೆಚ್ಚಿನ...

ಧರ್ಮಸ್ಥಳ ಪ್ರಕರಣ | ಎಸ್‍ಐಟಿಗೆ ಹೆಚ್ಚಿನ ಮಾಹಿತಿ ಲಭ್ಯವಾದರೆ, ಪರಿಶೀಲನೆ : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ7 Aug 2025 10:41 PM IST
share
ಧರ್ಮಸ್ಥಳ ಪ್ರಕರಣ | ಎಸ್‍ಐಟಿಗೆ ಹೆಚ್ಚಿನ ಮಾಹಿತಿ ಲಭ್ಯವಾದರೆ, ಪರಿಶೀಲನೆ : ದಿನೇಶ್ ಗುಂಡೂರಾವ್

ಬೆಂಗಳೂರು : ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ದೂರುದಾರ ಗುರುತಿಸಿದ ಬಹುತೇಕ ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ. ನಾಳೆ(ಆ.8) ಸ್ಥಳ ಪರಿಶೀಲನೆ ಮುಕ್ತಾಯವಾಗುವ ಸಾಧ್ಯತೆ ಇದ್ದು, ಪ್ರಕರಣದ ಬಗ್ಗೆ ಎಸ್‍ಐಟಿಗೆ ಹೆಚ್ಚಿನ ಮಾಹಿತಿ ಲಭ್ಯವಾದರೆ, ಪರಿಶೀಲಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮೊದಲಿನಿಂದಲೂ ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದೇವೆ. ಇದರಿಂದ ಬಹಳಷ್ಟು ವಿಷಯಗಳು ಹೊರಗೆ ಬಂದಿವೆ. ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ ಎಂದರು.

ಪ್ರಕರಣದ ಕುರಿತಾಗಿ ಎಸ್‍ಐಟಿ ಸೇರಿದಂತೆ, ಸರಕಾರವಾಗಲೀ, ನಮ್ಮ ಪಕ್ಷದವರಾಗಲೀ, ಎಲ್ಲಿಯೂ ಹಗುರವಾಗಿ ಮಾತನಾಡಿಲ್ಲ. ಸಾಕ್ಷಿಗಳ ಆಧಾರದಲ್ಲಿಯೇ ಪಾರದರ್ಶಕವಾಗಿ ತನಿಖೆಯನ್ನು ನಡೆಸಲಾಗುತ್ತಿದೆ. ಪ್ರಕರಣದ ಆರೋಪಗಳು ಮತ್ತು ವಿಷಯಗಳು ಗಂಭೀರವಾಗಿದ್ದು, ಅದು ನಿಜವಾದರೆ, ವಿಶ್ವವ್ಯಾಪಿ ದೊಡ್ಡ ಸುದ್ದಿಯಾಗಲಿದೆ. ಹೀಗಾಗಿ ಎಸ್‍ಐಟಿ ಸ್ಪಷ್ಟ ತನಿಖೆಯನ್ನು ನಡೆಸುತ್ತಿದ್ದು, 12 ಅಥವಾ 13ನೇ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಯೂಟ್ಯೂಬ್‍ನಲ್ಲಿ ಏನು ಹೇಳುತ್ತಾರೆ ಎಂಬುದರ ಬಗ್ಗೆ ನಾನು ಮಾತನಾಡುವುದಿಲ್ಲ. ದೇಶದ ಜನರಿಗೆ ಮಾತನಾಡಲೂ ಅವಕಾಶ ಇದೆ. ಕೋರ್ಟ್ ಮಾನ್ಯತೆಯನ್ನು ಕೊಟ್ಟಿದೆ. ಆದರೆ ಯಾರು ಸಹ ಏನನ್ನು ವೈಭವೀಕರಿಸಬಾರದು. ವಾಸ್ತವದ ಬಗ್ಗೆ ಮಾತನಾಡಬೇಕು ಎಂದು ಅವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರೇ ಪ್ರಕರಣವನ್ನು ತನಿಖೆ ಮಾಡುತ್ತಿದ್ದರು. ಅವರಿಗೆ ಆ ಸಾಮರ್ಥ್ಯ ಇದ್ದು, ಎಸ್‍ಐಟಿಗೆ ಕೊಡುವ ಅಗತ್ಯತೆ ಇರಲಿಲ್ಲ. ಎಡಪಂಥೀಯ ಸಂಘಟನೆಗಳು ಸೇರಿ ಅನೇಕ ಸಂಘಗಳು ಎಸ್‍ಐಟಿ ರಚನೆ ಮಾಡಲು ಒತ್ತಡ ಹಾಕಿದರು. ಎಸ್‍ಐಟಿ ರಚನೆಗೆ ದೊಡ್ಡಮಟ್ಟದಲ್ಲಿ ಚರ್ಚೆಯಾಯಿತು. ಹೀಗಾಗಿ ಸರಕಾರವೂ ಪಾರದರ್ಶಕ ತನಿಖೆಗೆ ಎಸ್‍ಐಟಿಯನ್ನು ರಚನೆ ಮಾಡಿದೆ.

-ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X