Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಟೆಲಿ ಕಾರ್ಡಿಯೋಲಾಜಿ’ ಮೂಲಕ 600 ಜೀವಗಳ...

ʼಟೆಲಿ ಕಾರ್ಡಿಯೋಲಾಜಿ’ ಮೂಲಕ 600 ಜೀವಗಳ ರಕ್ಷಣೆ : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ1 Dec 2025 12:41 AM IST
share
ʼಟೆಲಿ ಕಾರ್ಡಿಯೋಲಾಜಿ’ ಮೂಲಕ 600 ಜೀವಗಳ ರಕ್ಷಣೆ : ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ 82 ತಾಲೂಕು ಅಸ್ಪತ್ರೆಗಳಲ್ಲಿ ಟೆಲಿ ಕಾರ್ಡಿಯೋಲಾಜಿ ವ್ಯವಸ್ಥೆ ಮೂಲಕ ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದು, ದುಬಾರಿ ದರದ ಚುಚ್ಚುಮದ್ದು ಉಚಿತವಾಗಿ ನೀಡಲಾಗುತ್ತಿದೆ. ಇದರಿಂದ 600 ಜೀವಗಳನ್ನು ಒಂದುವರೆ ವರ್ಷದಲ್ಲಿ ಉಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ರವಿವಾರ ನಗರದ ಐಐಎಸ್ಸಿ ಟಾಟಾ ಸಭಾಂಗಣದಲ್ಲಿ ಟೆಲಿಮೆಡಿಸಿನ್ ಸೊಸೈಟಿ ಆಫ್ ಇಂಡಿಯಾ ಅಂತರ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇವಲ 8/9 ನಿಮಿಷದಲ್ಲಿ ಪರಿಣಿತ ವೈದ್ಯರು ಇಸಿಜಿ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗೆ ಇದೇ ವರ್ಷ ಕಲ್ಪಿಸಲಾಗುತ್ತದೆ. ಇಲಾಖೆ ಆರೋಗ್ಯ ಉಪಕರಣಗಳ ನಿರ್ವಹಣೆ ಮಾಡಲು ತಂತ್ರಜ್ಞಾನ ಬಳಸಿಕೊಂಡು ಕೆಲಸ ಮಾಡುತ್ತಿದೆ ಎಂದರು.

ಇಂತಹ ಎಲ್ಲ ತಂತ್ರಜ್ಞಾನ ಬಳಸಿ ಹಳ್ಳಿಯಲ್ಲಿ ವಾಸಿಸುವವರಿಗೂ ಉತ್ತಮ ಚಿಕಿತ್ಸೆ ನೀಡಲು, ಪರಿಣಿತ ವೈದ್ಯರ ಸಲಹೆ ಸಿಗುವಂತೆ ಮಾಡಲು ಕಾರ್ಯೋನ್ಮುಖರಾಗಿದ್ದೇವೆ. ಇಲ್ಲಿರುವ ಪರಿಣಿತರು, ನಮ್ಮ ಆರೋಗ್ಯ ಇಲಾಖೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸೋಣ. ನಿಮ್ಮ ಸಲಹೆ ಆರೋಗ್ಯ ಇಲಾಖೆಗೂ ಉಪಯೋಗ ಆಗಲಿ. ರಾಜ್ಯ ಮೆಡಿಕಲ್ ಫೆಸಿಲಿಟಿ, ಟೂರಿಸಂಗೆ ಮುಂಚೂಣಿಯಲ್ಲಿದ್ದು ಬೇರೆ ಬೇರೆ ದೇಶಗಳಿಂದ ಜನರು ಇಲ್ಲಿಗೆ ಬರುತ್ತಿದ್ದಾರೆ. ಎಐ ಮತ್ತು ಡಿಜಿಟಲ್ ತಂತ್ರಜ್ಞಾನ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶಕ್ಕೆ ಬಹಳ ಉಪಯುಕ್ತ ಎಂದು ಅವರು ಹೇಳಿದರು.

ಇದು ಅತ್ಯಂತ ಆಸಕ್ತಿದಾಯಕ ವಿಷಯವಾಗಿದ್ದು, ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಯೋನ್ಮುಖವಾಗಿದೆ. ಅದಕ್ಕೆ ಬೇಕಾದ ಸಾಪ್ಟವೇರ್, ತಂತ್ರಜ್ಞಾನ ಲಭ್ಯವಿದ್ದು, ಅದನ್ನು ಸರಿಯಾಗಿ ಬಳಸಬೇಕಾಗಿದೆ. ಇದಕ್ಕೆ ಅತ್ಯುತ್ತಮ ದರ್ಜೆಯ ಕ್ಯಾಮರಾ ಬಳಸಲಾಗುತ್ತಿದ್ದು ದೂರದಲ್ಲಿದ್ದುಕೊಂಡೇ ತಜ್ಞ ವೈದ್ಯರು ಹಳ್ಳಿಯಲ್ಲಿರುವ ರೋಗಿಗೆ ಚಿಕಿತ್ಸೆ ನೀಡಲು ಸ್ಥಳೀಯ ವೈದ್ಯರಿಗೆ ನೆರವಾಗಬಹುದು. ಎಐ ತಂತ್ರಜ್ಞಾನ ಬಳಸಿ ಟೆಲಿ ರೆಡಿಯೋಲಾಜಿ, ಆಪ್ತಮಾಲೊಜಿ ಸೇವೆ ಮುಖಾಂತರ ರೋಗ ಪತ್ತೆ ಮಾಡುವ ನೂತನ ವ್ಯವಸ್ಥೆ ಜಾರಿಗೆ ತರಲು ಸಿದ್ದತೆ ನಡೆದಿದೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಸಮ್ಮೇಳನದಲ್ಲಿ 700ಕ್ಕೂ ಹೆಚ್ಚು ದೇಶಿಯ ಮತ್ತು ಅಂತರರಾಷ್ಟ್ರೀಯ ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಿಮ್ಹಾನ್ಸ್‌ ನ ಮಾಜಿ ನಿರ್ದೇಶಕ ಡಾ.ಗಂಗಾಧರ, ಇಸ್ರೊ ಮಾಜಿ ನಿರ್ದೇಶಕ ಡಾ.ಸತ್ಯಮೂರ್ತಿ, ಟಿಎಸ್‍ಐ ಅಧ್ಯಕ್ಷ ಡಾ.ಸುನಿಲ್ ಶ್ರಾಫ್, ಐಐಎಸ್‍ಸಿ ಮೆಡಿಕಲ್ ಸ್ಕೂಲ್ ಮುಖ್ಯಸ್ಥೆ ಡಾ.ಉಮಾ ನಂಬಿಯಾರ್, ಐಐಎಸ್‍ಸಿ ನಿರ್ದೇಶಕ ಡಾ.ಭಾಸ್ಕರ್ ರಾಜಕುಮಾರ್, ಪದಾಧಿಕಾರಿಗಳಾದ ಡಾ.ಉಮಾಶಂಕರ್, ಡಾ.ಸಂಜಯ್ ಶರ್ಮ, ಡಾ. ರಾಜೀವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X