Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತುರ್ತು ಸಂದರ್ಭದಲ್ಲಿ ಜನರಿಗೆ ಸೂಕ್ತ...

ತುರ್ತು ಸಂದರ್ಭದಲ್ಲಿ ಜನರಿಗೆ ಸೂಕ್ತ ಮಾಹಿತಿ, ಸ್ಪಂದನೆಗೆ ಸಹಾಯಕ : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ7 May 2026 7:09 PM IST
share
ತುರ್ತು ಸಂದರ್ಭದಲ್ಲಿ ಜನರಿಗೆ ಸೂಕ್ತ ಮಾಹಿತಿ, ಸ್ಪಂದನೆಗೆ ಸಹಾಯಕ : ದಿನೇಶ್ ಗುಂಡೂರಾವ್

ಬೆಂಗಳೂರು, ಮೇ 7: ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರವು (ಎಚ್‍ಇಒಸಿ) ತುರ್ತು ಸಂದರ್ಭಗಳಲ್ಲಿ ಜನರಿಗೆ ಸೂಕ್ತ ಮಾಹಿತಿಯನ್ನು ನೀಡಿ, ವೇಗದ ಸ್ಪಂದನೆಯನ್ನು ನೀಡಲು ಸಹಾಯಕವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಗುರುವಾರ ಇಲ್ಲಿನ ಆರೋಗ್ಯಸೌಧದಲ್ಲಿ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರವು ಸಮಯೋಚಿತ ನಿರ್ಧಾರ, ಸಂಪನ್ಮೂಲಗಳ ಸರಿಯಾದ ಬಳಕೆಗೆ ಮತ್ತು ಜನರಿಗೆ ಮಾಹಿತಿಯನ್ನು ತಲುಪಿಸಿ, ಆತಂಕಕ್ಕೆ ಒಳಗಾಗದಂತೆ ಎಚ್ಚರಿಸಲು ಕೇಂದ್ರೀಯ ನಿಯಂತ್ರಣ ಘಟಕವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಹೊಂದಿರಬೇಕು ಎಂದು ಸೂಚನೆಗಳನ್ನು ನೀಡಿದೆ. ಅದರಂತೆ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ ಪ್ರತಿ ರಾಜ್ಯದಲ್ಲೂ ಕೇಂದ್ರವನ್ನು ಮಾಡಲಾಗುತ್ತಿದೆ. ಸಾಂಕ್ರಾಮಿಕ ರೋಗಗಳು, ಬೆಂಕಿ ಅವಘಡಗಳು, ಪ್ರಕೃತಿ ವಿಕೋಪ ಮುಂತಾದವುಗಳನ್ನು ಸಮರ್ಪಕವಾಗಿ ನಿರ್ವಹಿಸಲು ಈ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ ನೆರವಾಗಲಿದೆ ಎಂದು ಅವರು ಹೇಳಿದರು.

ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ತುರ್ತು ಸಂದರ್ಭಗಳಲ್ಲಿ ಕಂದಾಯ, ವಿಪತ್ತು ನಿರ್ವಹಣಾ ಪ್ರಾಧಿಕಾರ, ಪೊಲಿಸ್, ಅಗ್ನಿಶಾಮಕ ಸೇವೆ ಮುಂತಾದವುಗಳ ಸಮನ್ವಯದಿಂದ ಪರಿಸ್ಥಿತಿ ನಿರ್ವಹಿಸಲು ಇದು ಸಹಕಾರಿ ಆಗಲಿದೆ. ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಈ ಕೇಂದ್ರವು ಜಿಲ್ಲಾ ಆರೋಗ್ಯ ಸೇವೆಗಳಿಗೆ ತಕ್ಷಣ ಸಂಪರ್ಕ ಸಾಧಿಸಿ ಮಾಹಿತಿ ವಿನಿಮಯ ಮತ್ತು ಸೂಕ್ತ ನಿರ್ದೇಶನ ನೀಡಲು ನೆರವಾಗಲಿದೆ. ಒಟ್ಟಿನಲ್ಲಿ ಇದೊಂದು ಅತ್ಯಾಧುನಿಕ ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣಾ ಘಟಕವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಆಯುಕ್ತ ಗುರುದತ್ ಹೆಗಡೆ, ಎನ್‍ಎಚ್‍ಎಂ ನಿರ್ದೇಶಕ ಅವಿನಾಶ್ ಮೆನನ್, ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ. ರಜನಿ ಉಪಸ್ಥಿತರಿದ್ದರು.

ಭಾರತವು ಸಾಂಕ್ರಾಮಿಕ ರೋಗಗಳು ಮತ್ತು ಪ್ರಕೃತಿ ವಿಕೋಪಗಳು ಸೇರಿದಂತೆ ವಿವಿಧ ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಅತೀ ಹೆಚ್ಚು ಅಪಾಯಕ್ಕೊಳಗಾಗುವ ರಾಷ್ಟ್ರವಾಗಿದೆ. ಕೋವಿಡ್-19 ಮಹಾಮಾರಿಯು ಆರೋಗ್ಯ ವ್ಯವಸ್ಥೆಯ ಮೇಲ್ವಿಚಾರಣೆ ಮತ್ತು ತ್ವರಿತ ಪ್ರತಿಕ್ರಿಯೆ ವ್ಯವಸ್ಥೆಯಲ್ಲಿದ್ದ ಅಗತ್ಯತೆಗಳನ್ನು ಎತ್ತಿ ತೋರಿಸಿತ್ತು. ಈ ಸವಾಲುಗಳನ್ನು ಎದುರಿಸಲು ಕೇಂದ್ರ ಸರಕಾರ 'ಪ್ರಧಾನಮಂತ್ರಿ ಆಯುಷ್ಮಾ ನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್' ಅಡಿಯಲ್ಲಿ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಸ್ಥಾಪಿಸಿದೆ. ಇಂತಹ ಅತ್ಯಾಧುನಿಕ ಕೇಂದ್ರವನ್ನು ಸ್ಥಾಪಿಸಿ ಕಾರ್ಯಾರಂಭಗೊಳಿಸಿರುವ ದೇಶದ ಮೊದಲ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.

ಕೇಂದ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳು: ಕೇಂದ್ರವು ಉನ್ನತ ಗುಣಮಟ್ಟದ ವೀಡಿಯೋ ವಾಲ್, ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆ, ಡೇಟಾ ಸರ್ವರ್, ನೆಟ್‍ವರ್ಕ್ ವ್ಯವಸ್ಥೆ ಮತ್ತು ನೈಜ-ಸಮಯದ ಡ್ಯಾಶ್‍ಬೋರ್ಡ್‍ಗಳನ್ನು ಹೊಂದಿದೆ. ತುರ್ತು ಕರೆ ನಿರ್ವಹಣೆ ಮತ್ತು ಸಂಪೂರ್ಣ ಮೇಲ್ವಿಚಾರಣೆಗೆ ಬೇಕಾದ ಎಲ್ಲ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ.ರಜನಿ ತಿಳಿಸಿದರು.

Tags

Dinesh Gundu Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X