Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವೈದ್ಯರಿಗೆ ಅಗತ್ಯ ಸೌಕರ್ಯ ಒದಗಿಸಿಕೊಡಲು...

ವೈದ್ಯರಿಗೆ ಅಗತ್ಯ ಸೌಕರ್ಯ ಒದಗಿಸಿಕೊಡಲು ಸರಕಾರ ಬದ್ಧ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ1 July 2024 10:29 PM IST
share
ವೈದ್ಯರಿಗೆ ಅಗತ್ಯ ಸೌಕರ್ಯ ಒದಗಿಸಿಕೊಡಲು ಸರಕಾರ ಬದ್ಧ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ವೈದ್ಯರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಡಲು ಸರಕಾರ ಬದ್ಧವಾಗಿದೆ. ಒಂದು ಸರಕಾರವಾಗಿ ವೈದ್ಯರನ್ನು ನಾವು ಚೆನ್ನಾಗಿ ನೋಡಿಕೊಂಡರೆ, ನಮ್ಮ ಜನರ ಆರೋಗ್ಯವನ್ನು ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸೋಮವಾರ ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ವೈದ್ಯರನ್ನು ದೈವತ್ವಕ್ಕೆ ಹೊಲಿಸಿರುವುದರ ಹಿನ್ನೆಲೆ ಇದೊಂದು ಸೇವಾ ಮನೋಭಾವದ ಕಾರ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ನಮ್ಮ ಸರಕಾರ ಬಂದ ಬಳಿಕ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಪ್ರಯತ್ನ ಮಾಡಿದ್ದೇವೆ. ಆರಂಭದಲ್ಲಿ ಸರಕಾರಿ ಆಸ್ಪತ್ರೆಗಳಿಗೆ ಔಷಧಿಯೇ ಸರಬರಾಜು ಆಗುತ್ತಿರಲಿಲ್ಲ. ಶೇ.30ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿ ಪೂರೈಕೆಯಾಗುತ್ತಿತ್ತು. ಇದೀಗ ಸಾಕಷ್ಟು ಸುಧಾರಣೆ ತಂದಿದ್ದು, ಶೇ.80ರಷ್ಟು ಔಷಧಿ ಸರಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುತ್ತಿದೆ. ಮುಂಬರುವ ಎರಡು ತಿಂಗಳೊಳಗೆ ಸಂಪೂರ್ಣವಾಗಿ ಔಷಧಿ ಸರಬರಾಜನ್ನು ಸರಿಪಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

30 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆಯಾಗಿರಲಿಲ್ಲ. ಇದೀಗ ಪರಿಷ್ಕರಣೆ ಅಂತಿಮ ಹಂತದಲ್ಲಿದ್ದು, ಒಂದು ತಿಂಗಳ ಒಳಗಾಗಿ ಜಾರಿಗೆ ಬರಲಿದೆ. ವಿಶೇಷವಾಗಿ 8 ವರ್ಷಗಳ ಬಳಿಕ ಆರೋಗ್ಯ ಇಲಾಖೆ ವರ್ಗಾವಣೆಯನ್ನು ಪೂರ್ಣ ಪ್ರಮಾಣದಲ್ಲಿ ಕೌನ್ಸಿಲಿಂಗ್ ಮೂಲಕ ನಡೆಸಲಾಗುತ್ತಿದ್ದು, ಪಾರದರ್ಶಕ ಆಡಳಿತವನ್ನು ಇಲಾಖೆಯಲ್ಲಿ ತರಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಡಯಾಲಿಸಿಸ್ ವ್ಯವಸ್ಥೆಯನ್ನು ಸದೃಢಗೊಳಿಸಲಾಗಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಇಂದು ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಲ್ಲಿ ಸಹಕಾರಿಯಾಗಿದೆ. ನಮ್ಮ ವೈದ್ಯರು ಮನಸ್ಸು ಮಾಡಿದರೆ ರಾಜ್ಯದ ಬಡವರು ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬಹುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಬಿ.ಸಿ.ರಾಯ್ ಅವರು ಪಶ್ಮಿಮ ಬಂಗಾಳ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೂ ಅವರ ವೃತ್ತಿ ಮರೆತಿರಲಿಲ್ಲ. ಅವರ ಜನ್ಮದಿನದಂದು ಆಚರಿಸುವ ವೈದ್ಯರ ದಿನಾಚರಣೆ ಎಲ್ಲ ವೈದ್ಯರಿಗೆ ಪ್ರೇರಣೆಯಾಗಲಿ. ಇನ್ನೂ ಹೆಚ್ಚು ಸೇವಾ ಮನೋಭಾವದೊಂದಿಗೆ ವೈದ್ಯರು ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಂತಾಗಲಿ ಎಂದು ಗುಂಡೂರಾವ್ ಆಶಯ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X