Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 55 ಲಕ್ಷ ಸರಕಾರಿ ಶಾಲಾ ಮಕ್ಕಳ ಮಾನಸಿಕ,...

55 ಲಕ್ಷ ಸರಕಾರಿ ಶಾಲಾ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ʼರಾಗಿ ಮಾಲ್ಟ್ʼ ವಿತರಣೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Feb 2024 2:30 PM IST
share
  • 55 ಲಕ್ಷ ಸರಕಾರಿ ಶಾಲಾ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ʼರಾಗಿ ಮಾಲ್ಟ್ʼ ವಿತರಣೆ :  ಸಿಎಂ ಸಿದ್ದರಾಮಯ್ಯ
  • 55 ಲಕ್ಷ ಸರಕಾರಿ ಶಾಲಾ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ʼರಾಗಿ ಮಾಲ್ಟ್ʼ ವಿತರಣೆ :  ಸಿಎಂ ಸಿದ್ದರಾಮಯ್ಯ

ಬೆಂಗಳೂರು: 55 ಲಕ್ಷ ಸರಿ ಶಾಲಾ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

2013 ರಲ್ಲಿ ನಮ್ಮ ಸರಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. ಕೆೆಎಂಎಫ್ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆೆಎಂಎಫ್ ಗೆ ನೀಡುತ್ತದೆ. ಆ ಮೂಲಕ ಕೆೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದ್ದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದು ವಿವರಿಸಿದರು.

ಈಗ ಅತ್ಯಂತ ಪೌಷ್ಠಿಕವಾದ ʼರಾಗಿ ಮಾಲ್ಟ್ʼ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇ ಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎನ್ನುತ್ತಾ ಬುದ್ದ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು.

ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್ ಗಳೂ ಈಗ ಮೌಡ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಡ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಡ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X