Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಾಸನಾಂಬೆ ದರ್ಶನ ಪಡೆದ 19ಲಕ್ಷ ಜನ | ಇದು...

ಹಾಸನಾಂಬೆ ದರ್ಶನ ಪಡೆದ 19ಲಕ್ಷ ಜನ | ಇದು ಸರಕಾರದ ‘ಶಕ್ತಿ ಯೋಜನೆ’ಯ ಸಾಧನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Nov 2024 7:33 PM IST
share
ಹಾಸನಾಂಬೆ ದರ್ಶನ ಪಡೆದ 19ಲಕ್ಷ ಜನ | ಇದು ಸರಕಾರದ ‘ಶಕ್ತಿ ಯೋಜನೆ’ಯ ಸಾಧನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9ಕೋಟಿ ರೂ. ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಹರಿದು ಬಂದಿರುವುದು ಸರಕಾರದ ‘ಶಕ್ತಿ ಯೋಜನೆ’ಯ ಪರಿಣಾಮ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರವಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಇಪ್ಪತ್ತ್ನಾಲ್ಕು ಗಂಟೆ ದೇವಿಯ ದರ್ಶನದ ವ್ಯವಸ್ಥೆ ಅದ್ಬುತವಾಗಿತ್ತು. ಬೀದರ್ ನಿಂದ ಚಾಮರಾಜನಗರದ ವರೆಗೆ, ಬಳ್ಳಾರಿಯಿಂದ ಕೋಲಾರದ ವರೆಗೆ ಮಾತ್ರವಲ್ಲ ವಿವಿಧ ರಾಜ್ಯಗಳ ಭಕ್ತರು, ಬೇರೆ ದೇಶಗಳ ಭಕ್ತರೂ ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದರು’ ಎಂದು ಉಲ್ಲೇಖಿಸಿದ್ದಾರೆ.

ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವುದರಿಂದ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಬರಲು ಸಾಧ್ಯವಾಗಿದೆ. ಇದನ್ನು ನೋಡಿ ಸರಕಾರಕ್ಕೆ ಹೆಮ್ಮೆಯಾಗುತ್ತಿದೆ. ಸಾರ್ಥಕ ಭಾವ ಮೂಡುತ್ತಿದೆ ಎಂದ ಅವರು, ಶಕ್ತಿ ಯೋಜನೆ ಮಹಿಳೆಯರ ಶಕ್ತಿ ವೃದ್ಧಿ ಮಾಡಿರುವುದರ ಜತೆಗೆ ನಮ್ಮ ಧಾರ್ಮಿಕ ಶಕ್ತಿಯನ್ನೂ ಹೆಚ್ಚಿಸಿದೆ ಎಂಬುದು ಸಾಕ್ಷಿ ಎಂದು ಹೇಳಿದ್ದಾರೆ.

‘ಮಾತ್ರವಲ್ಲ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ಅಷ್ಟು ಸಮರ್ಪಕ ವ್ಯವಸ್ಥೆ ಮಾಡಿದೆ. 9 ದಿನಗಳಲ್ಲಿ 19 ರಿಂದ 20 ಲಕ್ಷ ಜನ ದೇವಿಯ ದರ್ಶನ ಪಡೆದಿದ್ದಾರೆಂಬುದು ಸಣ್ಣ ವಿಚಾರವಲ್ಲ. ಸಣ್ಣ-ಪುಟ್ಟ ಘಟನೆಗಳನ್ನು ಹೊರತುಪಡಿಸಿ, ಬಹುತೇಕ ಉತ್ಸವ ಯಶಸ್ವಿಯಾಗಿದೆ. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು. ಜಿಲ್ಲಾಡಳಿತ ಹಾಗೂ ಶ್ರಮಿಸಿದ ಪೌರ ಕಾರ್ಮಿಕರು, ಪೊಲೀಸರು, ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರು, ಹಾಸನದ ನಾಗರಿಕರು ಹಾಗೂ ಎಲ್ಲ ಭಕ್ತರಿಗೂ ಕೃತಜ್ಞರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

‘ಇಷ್ಟು ದೊಡ್ಡ ಸಂಖ್ಯೆಯ ಭಕ್ತರ ಭೇಟಿ ಐತಿಹಾಸಿಕ ದಾಖಲೆ. ಎಲ್ಲರಿಗೂ ನಾವು ವೈಯಕ್ತಿಕವಾಗಿ, ಸರಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಅಹಿತಕರ ಘಟನೆಗಳೂ ನಡೆಯದಂತೆ ಸರಕಾರ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಿದ್ದೇವೆ’ ಎಂದು ಶಿವಕುಮಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X