Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ...

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ : ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Feb 2025 10:06 PM IST
share
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : "ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ ನಿಲುವಿನ ಬಗ್ಗೆ ಚರ್ಚೆಯಾಗುತ್ತಿದೆಯಲ್ಲ ಎಂದು ಕೇಳಿದಾಗ, "ನಾನು ನೊಣವಿನಕೆರೆ ಮಠಕ್ಕೆ ಹೋಗುತ್ತೇನೆ. ಅದಕ್ಕೆ ನಮ್ಮವರು, 'ನೀವು ನಮ್ಮ ಮಠಕ್ಕೆ ಬರುವುದಿಲ್ಲ, ಅಲ್ಲಿಗೆ ಹೋಗುತ್ತೀರಲ್ಲಾ' ಎಂದು ಕೇಳುತ್ತಾರೆ. ನನ್ನ ನಂಬಿಕೆ ಇದ್ದ ಕಡೆ ನಾನು ಹೋಗುತ್ತೇನೆ. ನನಗೆ ಎಲ್ಲಿ ಒಳ್ಳೆಯದಾಗುತ್ತದೆ ಎಂದು ಅನಿಸುತ್ತದೆಯೋ ಅಲ್ಲಿಗೆ ಹೋಗುತ್ತೇನೆ. ನನ್ನ ನಂಬಿಕೆ ನನ್ನದು" ಎಂದು ಹೇಳಿದರು.

"ನನ್ನ ಕ್ಷೇತ್ರದಲ್ಲಿ ನನಗೆ ಮತ ಹಾಕಿರುವವರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಹೆಚ್ಚಾಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಶೇಕಡಾ 99 ರಷ್ಟು ಬ್ರಾಹ್ಮಣ ಸಮುದಾಯದವರು ನನಗೆ ಮತ ಹಾಕುತ್ತಾರೆ. ಹೀಗಾಗಿ ಬ್ರಾಹ್ಮಣರೆಲ್ಲರೂ ಬಿಜೆಪಿಗೇ ಮತ ಹಾಕುತ್ತಾರೆ ಎಂದು ಹೇಳಲು ಸಾಧ್ಯವೇ? ನಾನು ಎಂದಿಗೂ ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ. ನೀತಿ ಮೇಲೆ ರಾಜಕಾರಣ ಮಾಡುತ್ತೇನೆ" ಎಂದು ಹೇಳಿದರು.

"ಕಾಂಗ್ರೆಸ್ ಪಕ್ಷ ಎಂದರೆ ಎಲ್ಲಾ ಧರ್ಮಗಳ ಸಮಾಗಮ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವುದು ನಮ್ಮ ಪಕ್ಷದ ಸಿದ್ಧಾಂತ. ನಾವು ಅಧಿಕಾರ, ಸ್ಥಾನಮಾನ ನೀಡುವಾಗ ಎಲ್ಲರನ್ನು ಪರಿಗಣಿಸಿಯೇ ನೀಡುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಹಾಗೆಂದು ನಾವು ಧಾರ್ಮಿಕ ದತ್ತಿ ಇಲಾಖೆ ಮುಚ್ಚಿದ್ದೇವೆಯೇ? ಬಿಜೆಪಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಬೋರ್ಡ್ ಮುಚ್ಚಲಿಲ್ಲ ಯಾಕೆ? ಅವರು ಬೇರೆಯವರಿಗೆ ಟಿಕೆಟ್ ನೀಡದೆ ಇರಬಹುದು, ಆದರೆ ಕ್ರೈಸ್ತ ಅಭಿವೃದ್ಧಿ ಮಂಡಳಿ ಮುಚ್ಚಿದ್ದಾರಾ? ಇಲ್ಲ. ಇದಕ್ಕೆ ಕಾರಣ ನಮ್ಮ ಸಂವಿಧಾನ. ನಮ್ಮ ದೇಶದಲ್ಲಿ ಎಲ್ಲಾ ಧರ್ಮಕ್ಕೂ ಸಮಾನ ಅವಕಾಶ ನೀಡಲಾಗಿದೆ. ಅವರೆಲ್ಲ ಬೇರೆ ನೀರು ಕುಡಿಯಲು ಸಾಧ್ಯವೇ? ಈ ಭೂಮಿಗೆ, ಗಾಳಿಗೆ ಜಾತಿ, ಧರ್ಮದ ತಾರತಮ್ಯ ಇದೆಯೇ?" ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ದೊಡ್ಡ ಶಿವಭಕ್ತರು:

"ಈ ಹಿಂದೆ ಎಸ್.ಎಂ ಕೃಷ್ಣ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದಾಗ ಚುನಾವಣೆ ಯಾತ್ರೆಗೆ 'ಪಾಂಚಜನ್ಯ' ಎಂದು ಹೆಸರು ಇಟ್ಟಿದ್ದೆವು. ಆಗ ಕೆಲವರು ಸೋನಿಯಾ ಗಾಂಧಿ ಅವರ ಬಳಿ ಹೋಗಿ ದೂರು ಕೊಟ್ಟರು. ಆದರೆ ಅವರು ಅದಕ್ಕೆ ತಡೆ ನೀಡಲಿಲ್ಲ. ಹಿಂದೂಗಳನ್ನು ಬಿಜೆಪಿ ಹಾಗೂ ಆರೆಸ್ಸೆಸ್ ನವರಿಗೆ ಬಿಟ್ಟುಕೊಟ್ಟಿದ್ದೇವಾ? ದೇವರ ಹೆಸರು ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹಾಗೂ ನನ್ನ ಹೆಸರು ಬದಲಿಸಲು ಆಗುತ್ತದೆಯೇ? ನಮ್ಮ ನಾಯಕ ರಾಹುಲ್ ಗಾಂಧಿ ಅವರು ದೊಡ್ಡ ಶಿವಭಕ್ತರು. ಮುರುಘಾ ಮಠದಲ್ಲಿ ಅವರು ಲಿಂಗ ದೀಕ್ಷೆ ಸ್ವೀಕರಿಸಿದರು" ಎಂದು ವಿವರಿಸಿದರು.

ಧರ್ಮ, ನಂಬಿಕೆ ವಿಚಾರದಲ್ಲಿ ರಾಜಕೀಯ ಬೇಡ:

"ಕುಂಭಮೇಳಕ್ಕೂ ಇದಕ್ಕೂ ಏನು ಸಂಬಂಧ? ನೀರಿಗೆ ಜಾತಿ, ಧರ್ಮ ಇದೆಯಾ? ಕುಂಭಮೇಳ, ಗಂಗಾ, ಕಾವೇರಿ ನಮ್ಮ ಪಾಲಿನ ಪವಿತ್ರ ನದಿಗಳು. ಮೊದಲಿನಿಂದಲೂ ಆಚರಣೆ ಮಾಡಿಕೊಂಡು ಬಂದಿರುವ ಪದ್ಧತಿ ಇದು. ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಧರ್ಮ, ನಂಬಿಕೆ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ನಮ್ಮ ಸ್ಪೀಕರ್ ಸಹ ಕುಂಭಮೇಳಕ್ಕೆ ಹೋಗಬೇಕು ಎಂದು ಹೇಳಿದ್ದರು. ನಾನು ಕುಂಭ ಮೇಳದ ಆಯೋಜನೆಯನ್ನು ನೋಡಿಕೊಂಡು ಬಂದಿದ್ದೇನೆ. ನಾವು ಕಾವೇರಿ ಆರತಿ ಮಾಡಬೇಕು ಎಂದು ತೀರ್ಮಾನಿಸಿದ್ದೇವೆ. ಈ ಹಿನ್ನೆಲೆಯಲ್ಲೂ ಇದನ್ನು ಗಮನಿಸಿದ್ದೇನೆ" ಎಂದು ತಿಳಿಸಿದರು.

ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ ಎಂದು ಕೇಳಿದಾಗ, "ನಾನು ಶಿವರಾತ್ರಿ ಹಬ್ಬದ ಪ್ರಯುಕ್ತ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಇದು ನನ್ನ ಸ್ವಂತ ನಂಬಿಕೆ. ಯಾರೋ ಟ್ವೀಟ್ ಮಾಡುತ್ತಾರೆ, ಯಾರೋ ಮಾತನಾಡುತ್ತಾರೆ ಎಂದು ನಾನು ಎಲ್ಲದಕ್ಕೂ ಉತ್ತರ ನೀಡಲು ಆಗುವುದಿಲ್ಲ" ಎಂದು ತಿಳಿಸಿದರು.

ಟೀಕೆ ಮಾಡುವವರು ಅಧಿವೇಶನದಲ್ಲಿ ಮಾತನಾಡಲಿ :

ಬೆಂಗಳೂರನ್ನು ನೀವು ಚೂರು ಚೂರು ಮಾಡಲು ಹೊರಟಿದ್ದೀರಿ ಎಂದು ಟೀಕೆ ಮಾಡಲಾಗುತ್ತಿದೆ ಎಂದು ಕೇಳಿದಾಗ, "ಟೀಕೆ ಮಾಡುವವರು ವಿಧಾನ ಮಂಡಲ ಅಧಿವೇಶನದಲ್ಲಿ ಬಂದು ಮಾತನಾಡಲಿ, ಅಲ್ಲಿ ಉತ್ತರ ಕೊಡುತ್ತೇನೆ" ಎಂದು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X