Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ನೂತನ ವಿವಿ ವಿಲೀನ’ ರದ್ದು...

‘ನೂತನ ವಿವಿ ವಿಲೀನ’ ರದ್ದು ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 March 2025 12:20 AM IST
share
‘ನೂತನ ವಿವಿ ವಿಲೀನ’ ರದ್ದು ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಜೆಪಿ ಸರಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ರದ್ದು ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವಧಿಯಲ್ಲಿ ಡಾ.ಅಶ್ವತ್ಥ್ ನಾರಾಯಣ ಉನ್ನತ ಶಿಕ್ಷಣ ಸಚಿವರಾಗಿದ್ದಾಗ, ಅವರ ಪರಿಕಲ್ಪನೆ ಮೇಲೆ ಹೊಸ ವಿವಿಗಳನ್ನು ಸ್ಥಾಪಿಸಿದ್ದಾರೆ. ನಾವು ಖಾಸಗಿ ವಿವಿ ಮಾಡಬೇಕಾದರೂ ಕೆಲವು ಮಾನದಂಡಗಳನ್ನು ನಿಗದಿ ಮಾಡಿದ್ದೇವೆ ಎಂದರು.

ವಿದ್ಯಾರ್ಥಿಗಳಿಗೂ ವಿವಿಗಳಿಗೂ ಏನು ಸಂಬಂಧ? ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಅದೇ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸುತ್ತಾರೆ. ಆದರೆ ಮೈಸೂರು ವಿವಿ, ಮಂಡ್ಯ ವಿವಿ, ಚಾಮರಾಜನಗರ ವಿವಿಗಳನ್ನೇ ಉದಾಹರಣೆಯಾಗಿ ತೆಗೆದುಕೊಂಡು ನೋಡುವುದಾದರೆ, ವಿದ್ಯಾರ್ಥಿಗಳು ಮೈಸೂರು ವಿವಿ ಹೆಸರಲ್ಲಿ ಪದವಿ ಪಡೆಯುದಕ್ಕೂ, ಬೇರೆ ಇತರೆ ವಿವಿ ಹೆಸರಲ್ಲಿ ಪದವಿ ಪ್ರಮಾಣಪತ್ರ ಪಡೆಯುವುದಕ್ಕೆ ಎಷ್ಟು ವ್ಯತ್ಯಾಸವಿದೆ ಎಂದು ವಿವರಿಸಿದರು.

ಬಿಎಸ್‍ವೈ ಪುತ್ರ ಸದನದಲ್ಲಿದ್ದಾರೆ. ಅವರ ಸಹೋದರಿಯ ಪುತ್ರ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಲು ಮುಂದಾದಾಗ. ಅವರು ಪಿಇಎಸ್ ಶಿಕ್ಷಣ ಸಂಸ್ಧೆಯಲ್ಲಿ ಓದಿದ್ದರು. ಅದು ಉತ್ತಮ ಸಂಸ್ಥೆಯಾದರೂ ಅದು ಅಧಿಕೃತ ವಿವಿಯಲ್ಲ ಎಂಬ ಕಾರಣಕ್ಕೆ ಅವರಿಗೆ ವಿದೇಶಿ ವಿವಿಯಲ್ಲಿ ಪ್ರವೇಶಾತಿ ನಿರಾಕರಿಸಲಾಗಿತ್ತು. ಎಸ್.ಎಂ.ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ಅನೇಕ ಪ್ರಯತ್ನಗಳನ್ನು ಮಾಡಿ ಕೊನೆಗೆ ಅಲ್ಲಿ ಪ್ರವೇಶಾತಿ ಸಿಕ್ಕಿತು. ಇದು ಒಂದು ಉದಾಹರಣೆಯಷ್ಟೇ. ಬೆಂಗಳೂರು, ಮೈಸೂರು ವಿವಿಗಳು ಪ್ರತಿಷ್ಠಿತ ವಿವಿಗಳಾಗಿವೆ. ಈ ವಿವಿಗಳ ಜಾರಿ ಕಾರ್ಯಸಾಧುವಲ್ಲ ಎಂದು ವಿಲೀನ ಮಾಡುತ್ತಿದ್ದೇವೆ ಅಷ್ಟೇ. ಈ ವಿಚಾರವಾಗಿ ನಾವು ಸಮಿತಿಯನ್ನು ರಚಿಸಿ ಅಧ್ಯಯನ ನಡೆಸಿದ್ದೇವೆ ಎಂದು ಹೇಳಿದರು.

‘ನಾನು ಶಿಕ್ಷಣದ ಮೇಲೆ ಆಸಕ್ತಿ ಹೊಂದಿರುವವನೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದಾಗ. ವಿಪಕ್ಷ ನಾಯಕ ಆರ್.ಅಶೋಕ್ ‘ನಿಮ್ಮ ಡೈಲಾಗ್ ಅನ್ನು ಮತ್ತೊಮ್ಮೆ ಸಂಪೂರ್ಣವಾಗಿ ಹೇಳಿ’ ಎಂದು ಒತ್ತಾಯಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಇದು ಕೇವಲ ಡೈಲಾಗ್ ಅಲ್ಲ. ನೀವು ಕಳುಹಿಸಿದ ತಿಹಾರ್ ಜೈಲಿಂದ ಬಂದ ನಂತರ ನಾನು ಪಕ್ಷದ ಕಚೇರಿಯಲ್ಲಿ ಈ ಮಾತನ್ನು ಹೇಳಿದ್ದೆ. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣ ತಜ್ಞ, ಆಸಕ್ತಿಯಲ್ಲಿ ನಾನು ರಾಜಕಾರಣಿ. ನಾನು ವಿದ್ಯಾರ್ಥಿಯಾಗಿದ್ದಾಗ ಹೆಚ್ಚು ಓದಲಿಲ್ಲ. ಫೈನಲ್ ಇಯರ್ ಡಿಗ್ರಿ ಮಾಡುವಾಗ ಪಕ್ಷ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿತು. ನಂತರ 47ನೆ ವಯಸ್ಸಿಗೆ ಪದವಿ ಮಾಡಿದೆ ಎಂದು ತಿಳಿಸಿದರು.

‘ನನಗೆ ಶಿಕ್ಷಣ ಕ್ಷೇತ್ರದ ಮೇಲೆ ಹೆಚ್ಚು ಆಸಕ್ತಿ ಇದೆ. ಈ ವಿಚಾರದಲ್ಲಿ ನೀವು ಉತ್ತಮ ಸಲಹೆಗಳನ್ನು ಕೊಟ್ಟರೆ ನಾವು ಅದನ್ನು ಪರಿಗಣಿಸುತ್ತೇವೆ. ಈಗ ನಿರ್ಮಿಸಿರುವ ಹೊಸ ವಿವಿಗಳಲ್ಲಿ ಹೋಗಿ ಕೆಲಸ ಮಾಡಲು ಯಾವುದೇ ಪ್ರಾಧ್ಯಾಪಕರು ಮುಂದೆ ಬರುತ್ತಿಲ್ಲ. ಒಬ್ಬರನ್ನು ಉಪಕುಲಪತಿಗಳನ್ನಾಗಿ ಹಾಗೂ ಮತ್ತೊಬ್ಬರನ್ನು ರಿಜಿಸ್ಟ್ರಾರ್ ಮಾಡಿದರೆ ಅದು ವಿಶ್ವ ವಿದ್ಯಾಲಯವಾಗುತ್ತದೆಯೇ? ಎಂದು ಅವರು ಪ್ರಶ್ನಿಸಿದರು.

ನೀವುಗಳು ವಿವಿಯನ್ನು ವಿಭಾಗ ಮಾಡಿದ್ದೀರಿ. ನಾವು ಆ ವಿವಿಗಳನ್ನು ವಜಾಗೊಳಿಸಲು ಆಗುವುದಿಲ್ಲ. ಹೀಗಾಗಿ ನಾವು ಅವುಗಳನ್ನು ಪ್ರಮುಖ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ. ನಮ್ಮ ಹಾಗೂ ನಿಮ್ಮ ನಡುವೆ ಇರುವ ವ್ಯತ್ಯಾಸ ಎಂದರೆ ನೀವು ಜನರನ್ನು ಒಡೆಯುತ್ತೀರಿ, ನಾವು ಜನರನ್ನು ಒಟ್ಟುಗೂಡಿಸುತ್ತೇವೆ ಎಂದು ಪ್ರತಿಪಕ್ಷ ಸದಸ್ಯರ ಕಾಲೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X