Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯ ಬಜೆಟ್‌ | ಬಿಜೆಪಿಯವರು ಸುಳ್ಳು...

ರಾಜ್ಯ ಬಜೆಟ್‌ | ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ8 March 2025 7:33 PM IST
share
ರಾಜ್ಯ ಬಜೆಟ್‌ |  ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ? ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರು, ಬಿಜೆಪಿಯವರು ಈ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ಹೇಳುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ‘ಅವರು ಹೇಳಲಿ. ಪಾಪ ಅವರಾದರೂ ಏನು ಮಾಡುತ್ತಾರೆ. ಈ ರೀತಿ ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ? ಎಂದರು.

ನಮ್ಮ ಬಜೆಟ್ ಅನ್ನು ಅವರು ಕಣ್ಣಾರೆ ಓದಿದ್ದು, ಕಿವಿಯಾರೆ ಕೇಳಿದ್ದು, ಬಾಯಲ್ಲಿ ಇನ್ನೇನು ಹೇಳಲು ಸಾಧ್ಯ? ಕಣ್ಣು ಕಿವಿಯಲ್ಲಿ ಸುಳ್ಳು ಹೇಳಲು ಆಗುವುದಿಲ್ಲ. ಕೇವಲ ಬಾಯಲ್ಲಿ ಮಾತ್ರ ಸುಳ್ಳು ಹೇಳಲು ಸಾಧ್ಯ. ಹೀಗಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಶಿವಕುಮಾರ್ ತಿರುಗೇಟು ನೀಡಿದರು.

ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಹಾಗೂ ದೇಶಕ್ಕೆ ಮಾದರಿ ಬಜೆಟ್ ಕೊಟ್ಟಿದ್ದಾರೆ. ಮುಂದೆ ಬೇರೆ ಬೇರೆ ರಾಜ್ಯಗಳು ನಮ್ಮ ಬಜೆಟ್ ಪಾಲನೆ ಮಾಡಲಿವೆ. ಈ ಬಜೆಟ್ ಸಮಾಜದ ಎಲ್ಲಾ ವರ್ಗದವರಿಗಾಗಿ ಮಾಡಿರುವ ಬಜೆಟ್. ಈ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗೆ ಹಾಗೂ ಇದಕ್ಕೆ ಸಹಕಾರ ಕೊಟ್ಟ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಜಾರಿ: ಬ್ರ್ಯಾಂಡ್ ಬೆಂಗಳೂರಿನ ಮಹತ್ವದ ಯೋಜನೆಗಳಿಗೆ ಅನುದಾನ ನೀಡಲಾಗಿದೆ. ರಾಜಧಾನಿಯಲ್ಲಿರುವ 1.40 ಕೋಟಿ ಜನರಿಗೆ ಅನುಕೂಲವಾಗಲಿದೆ. ಟನಲ್ ರಸ್ತೆ ಆಗಿಯೇ ಆಗುತ್ತೆ. ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ಮಾಡಲಾಗುವುದು. ಪಾಲಿಕೆ ಹಾಗೂ ಬಿಎಂಆರ್‍ಸಿಎಲ್ ಇದರ ವೆಚ್ಚವನ್ನು 50:50 ಅನುಪಾತದಲ್ಲಿ ಭರಿಸಲಿವೆ ಎಂದು ಅವರು ಮಾಹಿತಿ ನೀಡಿದರು.

ಇನ್ನು ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದಷ್ಟು ರಸ್ತೆ ನಿರ್ಮಾಣ ಮಾಡಲಾಗುವುದು. ಈ ಯೋಜನೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಬಫರ್ ರಸ್ತೆ, ಮೇಲ್ಸೇತುವೆ, ಟನಲ್ ರಸ್ತೆ ಗಳ ಮೂಲಕ ಬೆಂಗಳೂರುನಲ್ಲಿ 700-800 ಕಿ.ಮೀ ಉದ್ದದಷ್ಟು ಹೊಸ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಅಭಿವೃದ್ಧಿಗೆ ಇನ್ನೇನು ಅಲೋಚನೆ ಮಾಡಲು ಸಾಧ್ಯ? ಜನರ ಸಮಸ್ಯೆಗೆ ಪರಿಹಾರ ನೀಡಲು ಸರಕಾರ ಸಾಲ ಮಾಡಿಯಾದರೂ ಈ ಯೋಜನೆ ಮಾಡುತ್ತೇವೆ. ಇಡೀ ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದ್ದು, ಈ ನಗರಕ್ಕೆ ನಮ್ಮ ಸರಕಾರ ಆದ್ಯತೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಮನಮೋಹನ್ ಸಿಂಗ್ ಅವರಿಗೆ ಇನ್ನಷ್ಟು ಮಾನ್ಯತೆ ನೀಡಬೇಕು: ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೆಸರು ಇಟ್ಟಿರುವ ಬಗ್ಗೆ ವಿವಾದ ಕೇಳಿಬರುತ್ತಿದೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿಯವರು ದೀನದಯಾಳ್ ಹೆಸರು ಇಡುವಾಗ ನಾವು ಮನಮೋಹನ್ ಸಿಂಗ್ ಹೆಸರು ಇಡಬಾರದೆ? ಎಂದು ಪ್ರಶ್ನಿಸಿದರು.

ಬೆಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ, ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ನೆಲಮಂಗಲ ಮೇಲ್ಸೇತುವೆ, ಜೆ.ಎನ್ ನರ್ಮ್ ಯೋಜನೆ, ನರೇಗಾ, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಆಶಾ ಕಾರ್ಯಕರ್ತ ಯೋಜನೆಯನ್ನು ಮನಮೋಹನ್ ಸಿಂಗ್ ಜಾರಿಗೆ ತಂದರು ಎಂದು ಶಿವಕುಮಾರ್ ವಿವರಿಸಿದರು.

ಬಿಜೆಪಿಯವರು ಇಂತಹ ಯಾವುದಾದರೂ ಒಂದು ಯೋಜನೆ ಮಾಡಿದ್ದಾರಾ? ದೇಶ ಹಾಗೂ ಕರ್ನಾಟಕ ರಾಜ್ಯದ ಕೊಡುಗೆಗೆ ಮನಮೋಹನ್ ಸಿಂಗ್ ಕೊಟ್ಟಿರುವ ಕೊಡುಗೆಗೆ ಅವರಿಗೆ ಇನ್ನಷ್ಟು ಮಾನ್ಯತೆ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಪ್ರತಿಪಾದಿಸಿದರು.

ನೀರಾವರಿ ಇಲಾಖೆಗೆ ಅನುದಾನ ಕಡಿಮೆಯಾಗಿದೆ ಎಂದು ಗಮನ ಸೆಳೆದಾಗ, ನೀರಾವರಿ ಇಲಾಖೆಗೆ ಕಳೆದ ಬಾರಿಗಿಂತ 2 ಸಾವಿರ ಕೋಟಿ ರೂ. ಹೆಚ್ಚಿಗೆ ನೀಡಲಾಗಿದೆ. ನೀರಾವರಿಗೆ ನಾವು ಬೇರೆ ಯೋಜನೆ ರೂಪಿಸಿದ್ದೇವೆ. ಮಧ್ಯದಲ್ಲಿ ಬೇರೆ ಘೋಷಣೆ ಆಗಲಿದೆ, ಮಂಡಳಿಗಳಲ್ಲಿ ಕೆಲವು ತೀರ್ಮಾನ ಮಾಡಿದ್ದೇವೆ. ಅವುಗಳನ್ನು ಮುಂದೆ ತಿಳಿಸುತ್ತೇವೆ ಎಂದು ಶಿವಕುಮಾರ್ ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X