Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸಂಚಾರ ದಟ್ಟಣೆ’ ನಿಯಂತ್ರಣಕ್ಕೆ ಟನಲ್...

‘ಸಂಚಾರ ದಟ್ಟಣೆ’ ನಿಯಂತ್ರಣಕ್ಕೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆ ಪರಿಹಾರ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ13 March 2025 6:20 PM IST
share
‘ಸಂಚಾರ ದಟ್ಟಣೆ’ ನಿಯಂತ್ರಣಕ್ಕೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆ ಪರಿಹಾರ : ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯ ಸುಧಾಮ್ ದಾಸ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಗಂಭೀರವಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಬೆಂಗಳೂರು, ಹೊಸದಿಲ್ಲಿಯ ರೀತಿ ಯೋಜಿತ ನಗರವಲ್ಲ. ಮಲ್ಲೇಶ್ವರ, ಜಯನಗರ, ಇಂದಿರಾ ನಗರದಂತಹ ಕೆಲ ಬಡಾವಣೆಗಳು ಮಾತ್ರ ಯೋಜಿತವಾಗಿ ರೂಪುಗೊಂಡಿವೆ ಎಂದರು.

ಈ ಹಿಂದೆ ಬಿಎಂಐಸಿಪಿ ರಸ್ತೆ ಆದ ಕಾರಣ ಸಂಚಾರ ದಟ್ಟಣೆ ಸ್ವಲ್ಪ ಮಟ್ಟಿಗೆ ನಿಯಂತ್ರಣವಾಗಿದೆ. ಇಲ್ಲದಿದ್ದರೆ ಪರಿಸ್ಥಿತಿ ಇನ್ನು ಹದಗೆಡುತ್ತಿತ್ತು. ಈಗ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪಿಆರ್‌ಆರ್ ಯೋಜನೆ ಮಾಡಲು 2006ರಲ್ಲಿ ಅಧಿಸೂಚನೆ ಹೊರಡಿಸಿದ್ದರೂ ನಂತರ ಅದು ಮುಂದಕ್ಕೆ ಸಾಗಲಿಲ್ಲ. ಆಗಲೇ ಮಾಡಿದ್ದರೆ 2-3 ಸಾವಿರ ಕೋಟಿಯಲ್ಲಿ ಯೋಜನೆ ಪೂರ್ಣಗೊಳ್ಳುತ್ತಿತ್ತು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಈಗ ಪಿಆರ್‌ಆರ್ ಯೋಜನೆಗೆ ಹುಡ್ಕೋ ಮೂಲಕ 26 ಸಾವಿರ ಕೋಟಿ ರೂ. ಸಾಲ ಪಡೆದು ರೈತರನ್ನು ಒಪ್ಪಿಸಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮಾಡಲು ಮುಂದಾಗಿದ್ದೇವೆ. ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ರಸ್ತೆ ಅಗಲೀಕರಣ ಮಾಡಬಹುದೆ, ಅಥವಾ ಬೇರೆ ಅವಕಾಶಗಳಿವೆಯೇ ಎಂದು ಆಲೋಚನೆ ಮಾಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಈ ಹಿಂದೆ ಕೆ.ಜೆ.ಜಾರ್ಜ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಸ್ಟೀಲ್ ಬ್ರಿಡ್ಜ್ ಮಾಡಲು ಹೋದಾಗ ಗಲಾಟೆ ಮಾಡಿ ಜನ ಅದನ್ನು ನಿಲ್ಲಿಸಿದರು. ಈಗ ಅದರ ತೊಂದರೆ ಅನುಭವಿಸುತ್ತಿದ್ದೇವೆ. ಈಗ ಈ ಸಮಸ್ಯೆಗೆ ಪರಿಹಾರವಾಗಿ ಬೆಂಗಳೂರು ನಗರದ ಪೂರ್ವದಿಂದ ಪಶ್ಚಿಮಕ್ಕೆ(17 ಕಿ.ಮೀ.), ದಕ್ಷಿಣದಿಂದ ಉತ್ತರಕ್ಕೆ (23 ಕಿ.ಮೀ.) 40 ಕಿ.ಮೀ. ಉದ್ದದ ಸುರಂಗ ರಸ್ತೆ ಮಾಡಲು ಹೊರಟಿದ್ದೇವೆ. ಬೆಂಗಳೂರು ನಗರದಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಇದರ ಮೊದಲ ಹಂತದ ಯೋಜನೆಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುತ್ತಿದೆ. ಅತಿಲೋಕ್ ಇಂಜಿನಿಯರಿಂಗ್ ಸಂಸ್ಥೆ ಡಿಪಿಆರ್ ಸಿದ್ಧಪಡಿಸಿದ್ದು, ಸರಕಾರ ಅದಕ್ಕೆ ಅನುಮತಿ ನೀಡಿದೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

ಇನ್ನು ಬೆಂಗಳೂರಿನಲ್ಲಿ ಹೊಸ ಪ್ರಯೋಗದ ಮೂಲಕ ಎಲ್ಲೆಲ್ಲಿ ಹೊಸ ಮೆಟ್ರೋ ಮಾರ್ಗಗಳು ಬರುತ್ತಿವೆಯೋ ಅಲ್ಲಿ 44.3 ಕಿ.ಮೀ. ಉದ್ಧದ ಡಬಲ್ ಡೆಕ್ಕರ್ ಮೇಲ್ಸೆತುವೆ ಮೂಲಕ ಮೇಲ್ಸೆತುವೆ ಹಾಗೂ ಮೆಟ್ರೋ ಮಾರ್ಗ ಮಾಡಲಾಗುತ್ತಿದೆ. ಈ ಯೋಜನೆಗೆ ಪಾಲಿಕೆ ಹಾಗೂ ಬಿಎಂಆರ್‍ಸಿಎಲ್ 50:50 ಅನುಪಾತದಲ್ಲಿ ವೆಚ್ಚ ಭರಿಸಲಿವೆ. ಪ್ರತಿ ಕಿ.ಮೀ.ಗೆ 120 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆಗೆ ಒಟ್ಟು 9 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಇನ್ನು ಸಿಗ್ನಲ್ ಮುಕ್ತ ಎಲಿವೇಟೆಡ್ ಕಾರಿಡಾರ್ ಮೂಲಕ ವಾಹನ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ. ಗಾಳಿ ಆಂಜನೇಯಸ್ವಾಮಿ ದೇವಾಲಯದ ಬಳಿ ರಾಜಕಾಲುವೆ ಮೇಲೆ ರಸ್ತೆ ಮಾಡಿರುವ ರೀತಿಯಲ್ಲಿ ರಸ್ತೆ ಮಾಡಲು ಎನ್‍ಜಿಟಿಯಿಂದ ಅನುಮತಿ ಸಿಗುತ್ತಿಲ್ಲ. ಹೀಗಾಗಿ ರಾಜಕಾಲುವೆ ಅಕ್ಕಪಕ್ಕದ ಬಫರ್ ಪ್ರದೇಶದಲ್ಲಿ 50 ಅಡಿಯ 300 ಕಿ.ಮೀ. ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇದಕ್ಕಾಗಿ 3 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಐಟಿಪಿಎಲ್, ಥಣಿಸಂಧ್ರ, ಆರ್.ಆರ್.ನಗರ ಸೇರಿದಂತೆ ಇತರೆ ಭಾಗಗಳಲ್ಲಿ ಟಿಡಿಆರ್ ನೀಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಹೆಬ್ಬಾಳದಿಂದ ಹೆಣ್ಣೂರು ಮಾರ್ಗದಲ್ಲಿ 7.8 ಕಿ.ಮೀ. ರಸ್ತೆ ನಿರ್ಮಾಣಕ್ಕೆ ನೋಟಿಫಿಕೇಶನ್ ಕೂಡ ಹೊರಡಿಸಲಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ 320 ಕಿ.ಮೀ. ಹೊಸ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ವಿವರಣೆ ನೀಡಿದರು.

1682 ಕಿ.ಮೀ. ಉದ್ದದಷ್ಟು ರಸ್ತೆಗಳನ್ನು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದ್ದು, 30 ವರ್ಷಗಳ ಕಾಲ ಬಾಳಿಕೆ ಬರುವ ನಿರ್ವಹಣೆ ಮುಕ್ತ ರಸ್ತೆಗಳನ್ನು ಮಾಡಲಾಗಿದೆ. ಈ ಯೋಜನೆಗಳಿಗೆ 9 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇನ್ನು 850 ಕಿ.ಮೀ. ಉದ್ದದ ಮಳೆನೀರುಗಾಲುವೆಗಾಗಿ ವಿಶ್ವಬ್ಯಾಂಕ್‍ನಿಂದ 2 ಸಾವಿರ ಕೋಟಿ ಹಣ ಪಡೆಯಲಾಗಿದೆ. ಈ ಪೈಕಿ 480 ಕಿ.ಮೀ. ಪೂರ್ಣಗೊಂಡಿದ್ದು, 175 ಕಿ.ಮೀ. ಉದ್ದದ ಕಾಮಗಾರಿ ನಡೆಯುತ್ತಿದೆ. ಉಳಿದ 173 ಕಿ.ಮೀ. ಉದ್ದದ ಕಾಮಗಾರಿ ಮುಂದೆ ಕೈಗೆತ್ತಿಕೊಳ್ಳುತ್ತೇವೆ. ಆ ಮೂಲಕ ಬೆಂಗಳೂರಿನಲ್ಲಿ ಪೂರ್ಣಪ್ರಮಾಣದಲ್ಲಿ ಯೋಜನೆ ಮುಕ್ತಾಯವಾಗಲಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X