Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ...

ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ದಾಖಲೆ, ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಎಐ ಬಳಕೆ : ಡಿ.ಕೆ.ಶಿವಕುಮಾರ್

‘ಬಿಬಿಎಂಪಿ ಬಜೆಟ್ ಪೂರ್ವಭಾವಿ ಸಭೆ’

ವಾರ್ತಾಭಾರತಿವಾರ್ತಾಭಾರತಿ24 March 2025 8:25 PM IST
share
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ದಾಖಲೆ, ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಎಐ ಬಳಕೆ : ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರು ನಿವಾಸಿಗಳ ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐ’ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರು, ಸಚಿವರ ಜತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ‘ಎಐ’ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಕಟ್ಟಡವನ್ನು ಎಷ್ಟು ವಿಸ್ತೀರ್ಣ, ಎತ್ತರ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

ಮನೆ, ನಿವೇಶನ ಮಾಲಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇತ್ತೀಚೆಗೆ ಅನೇಕ ದಂಡ ಶುಲ್ಕಗಳ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದೆ. ನಗರದ ವ್ಯಾಪ್ತಿಯ ಎಲ್ಲಾ ಮನೆಗಳು ತೆರಿಗೆ ವ್ಯಾಪ್ತಿಗೆ ಬರಲೇಬೇಕು, ಅವರು ತೆರಿಗೆ ಕಟ್ಟಲೇಬೇಕು. ಇದರಲ್ಲಿ ರಾಜಿಯಾಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಎಪ್ರಿಲ್‍ನಿಂದ ಚಾಲನೆ ದೊರೆಯಲಿದೆ. ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ(ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿರುವ ಖಾಸಗಿ ರಸ್ತೆಗಳನ್ನೂ ಸಹ ಸರಕಾರಿ ರಸ್ತೆಗಳೆಂದು ಘೋಷಣೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು ನಗರದ ಚುನಾಯಿತ ಪ್ರತಿನಿಧಿಗಳು ಬಿಬಿಎಂಪಿ ಬಜೆಟ್ ಬಗ್ಗೆ ಚರ್ಚೆ, ಸಲಹೆ ಸೂಚನೆ ವೇಳೆ ತಮ್ಮ ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್ ಮಂಡಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ದಾಖಲೆಯುತ ಅನುದಾನ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂಪಾಯಿಯಿಂದ 7 ಸಾವಿರ ಕೋಟಿ ರೂ.ಗೆ ಹೆಚ್ಚಳ ಮಾಡಿದೆ. ಎಫ್‍ಎಆರ್, ಜಾಹೀರಾತಿನಿಂದ ಪಾಲಿಕೆಗೆ ಆದಾಯ ಬರುತ್ತದೆ ಎಂದು ಅಂದಾಜು ಮಾಡಲಾಗಿತ್ತು. ನ್ಯಾಯಾಲಯ ಜಾಹೀರಾತು ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದ ಕಾರಣ ಇದರಿಂದ ನಿರೀಕ್ಷಿತ ಆದಾಯ ಕಷ್ಟಸಾಧ್ಯ. ಈ ಬಾರಿಯ ಬಜೆಟ್‍ನಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ. ಇಷ್ಟು ದಿನಗಳ ಕಾಲ ಯಾವುದೇ ಸರಕಾರವೂ ಬೆಂಗಳೂರಿಗೆ ಇಷ್ಟು ಹೆಚ್ಚಿನ ಅನುದಾನ ನೀಡಿರಲಿಲ್ಲ. ಈಗ ಬೆಂಗಳೂರಿಗೆ ಅತಿಹೆಚ್ಚು ಅನುದಾನ ನೀಡಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X