Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೇವಾದಳದವರಿಗೂ ತಾಲೂಕು, ಜಿಲ್ಲಾ...

ಸೇವಾದಳದವರಿಗೂ ತಾಲೂಕು, ಜಿಲ್ಲಾ ಮಟ್ಟದಲ್ಲಿ ಅಧಿಕಾರ : ಡಿ.ಕೆ.ಶಿವಕುಮಾರ್

ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ13 April 2025 10:29 PM IST
share
ಸೇವಾದಳದವರಿಗೂ ತಾಲೂಕು, ಜಿಲ್ಲಾ ಮಟ್ಟದಲ್ಲಿ ಅಧಿಕಾರ : ಡಿ.ಕೆ.ಶಿವಕುಮಾರ್


ಬೆಂಗಳೂರು : ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ರವಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜವು ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ ದಶರಥ ಮಹಾರಾಜನಿಂಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಅದೇ ರೀತಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭ. ಇದನ್ನು ಸೇವಾದಳದ ಎಲ್ಲಾ ಕಾರ್ಯಕರ್ತರು ತಲೆಯಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ದೇಶದ ಭದ್ರತೆ ಉದ್ದೇಶದಿಂದ ಸ್ಥಾಪನೆಯಾದ ವಿಭಾಗ ಸೇವಾದಳ. ನೆಹರೂ ಅವರ ಅವಧಿಯಲ್ಲಿ ಪ್ರಾರಂಭವಾಗಿ ಈಗ ಮಲ್ಲಿಕಾರ್ಜುನ ಖರ್ಗೆ ಅವಧಿವರೆಗೆ ನಡೆದುಕೊಂಡು ಬಂದಿದೆ. ಸೇವಾದಳ ಕಾಂಗ್ರೆಸ್ ಪಕ್ಷದ ಕಡೆಯ ಅಂಗ, ನಮ್ಮನ್ನು ಗುರುತಿಸುವುದಿಲ್ಲ ಎಂಬ ಆಲೋಚನೆಯನ್ನು ನಿಮ್ಮ ತಲೆಯಿಂದ ಕಿತ್ತೊಗೆಯಬೇಕು. ನಿಮ್ಮಲ್ಲಿ ನಾಯಕತ್ವದ ಗುಣ ಇದೆ ಎಂದು ನೆಹರೂ ಹಾಗೂ ಇಂದಿರಾ ಗಾಂಧಿ ಅವರೇ ಸೇವಾದಳದ ಅಧ್ಯಕ್ಷ ಸ್ಥಾನ ವಹಿಸಿದ್ದರು ಎಂದು ಅವರು ಸ್ಮರಿಸಿದರು.

ಸೇವಾದಳದವರು ಹಾಕುವ ಗಾಂಧಿ ಟೋಪಿಯನ್ನು ಎಲ್ಲಾ ನಾಯಕರು ಹಾಕುತ್ತಾರೆ. ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರೂ ಇದನ್ನು ಧರಿಸಿದ್ದರು. ಬೇರೆ ನಾಯಕರ ಜತೆಗೆ ನೀವು ಸರಿಸಮಾನರು. ಬಿ.ಕೆ.ಹರಿಪ್ರಸಾದ್ ಅವರು ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಸಂಸತ್ ಸದಸ್ಯರಾಗಿದ್ದಾರೆ. ಇನ್ನು ಅನೇಕರು ಸೇವಾದಳದಲ್ಲಿ ಕೆಲಸ ಮಾಡಿದ್ದಾರೆ. ಅವರು ಶಾಸಕರು, ಮಂತ್ರಿಗಳಾಗಿ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ನೀವು ಶಾಸಕರು, ಮಂತ್ರಿ, ಮುಖ್ಯಮಂತ್ರಿ ಆಗಬಹುದು. ನೀವು ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಒಳ್ಳೆಯ ಕಾಲ ಬರುತ್ತಿದೆ. ಬ್ಲಾಕ್ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಇಂದು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಜಿಲ್ಲಾ ಕಾಂಗ್ರೆಸ್ ಗೆ ಹೊಸ ಸ್ವರೂಪ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ನುಡಿದರು.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಆಯ್ಕೆ ಸಮಿತಿಯು ಸೇವಾದಳ ಸೇರಿದಂತೆ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ಅಭಿಪ್ರಾಯ ಸ್ವೀಕರಿಸುವ ಕೆಲಸ ಮಾಡಲಿದೆ. ನಿಮ್ಮ ಸೇವೆಯನ್ನು ನಾವು ಗಮನದಲ್ಲಿಟ್ಟುಕೊಂಡಿದ್ದೇವೆ. ಸೇವಾದಳದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಭಾರತ ಜೋಡೋ ಸಂದರ್ಭದಲ್ಲಿ ನಾವು ಅನೇಕ ಜಾಗಗಳನ್ನು ಗುರುತಿಸಿದ್ದು, ಶಾಶ್ವತ ಕಾಂಗ್ರೆಸ್ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ಮಂಗಳೂರಿನಲ್ಲೂ ಜಾಗ ನೋಡಿದ್ದೇವೆ. ಇದರ ಜವಾಬ್ದಾರಿಯನ್ನು ಸೇವಾದಳದವರಿಗೂ ವಹಿಸಲಾಗುವುದು ಎಂದು ಅವರು ಹೇಳಿದರು.

ನಾವು ಈಗ ಬುದ್ಧಿ ಕಲಿತು ನಮ್ಮ ಆಧಾರಸ್ತಂಭಗಳನ್ನು ಹೇಗೆ ಬೆಳಸಬೇಕು ಎಂದು ಆಲೋಚಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿ ವಿಚಾರದಲ್ಲೂ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಸಂಗ್ರಹಿಸಲು, ಅವರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಅವರೇ ರಾಜ್ಯಕ್ಕೆ ಬಂದು ಜಿಲ್ಲಾಧ್ಯಕ್ಷರ ಜತೆ ನೇರವಾಗಿ ಚರ್ಚೆ ಮಾಡಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಸೇವಾದಳದವರು ಒಂದು ತಂಡ ರಚನೆ ಮಾಡಿ ಪ್ರತಿ ಜಿಲ್ಲೆಗೆ ಹೋಗಿ ಅಲ್ಲಿ ಸೇವಾದಳ ಹೊರತಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದ ಧ್ವಜಾರೋಹಣ, ರಾಷ್ಟ್ರಗೀತೆ, ವಂದೇ ಮಾತರಂ ಗೀತೆ ಗಾಯನ ಸೇರಿದಂತೆ ಇತರೆ ಅಂಶಗಳ ತರಬೇತಿ ನೀಡಬೇಕು ಎಂದು ಸೇವಾದಳದ ಅಧ್ಯಕ್ಷ ರಾಮಚಂದ್ರಪ್ಪ ಅವರಿಗೆ ಸೂಚಿಸುತ್ತೇನೆ. ಈ ರೀತಿ ಮಾಡಿದಾಗ ಬೇರೆ ಕಾರ್ಯಕರ್ತರು ಸೇವಾದಳದ ಜತೆ ಬೆರೆಯುತ್ತಾರೆ ಎಂದು ಅವರು ಸಲಹೆ ನೀಡಿದರು.

ನಮ್ಮ ಸರಕಾರ ಪ್ರತಿ ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳ ಮೂಲಕ ವರ್ಷಕ್ಕೆ 52 ಸಾವಿರ ಕೋಟಿ ರೂ. ಒದಗಿಸುತ್ತಿದೆ. ಯಾರು ಏನೇ ಕೂಗಾಡಲಿ ರಾಜ್ಯದಲ್ಲಿ ಮತ್ತೆ ನಿಮ್ಮ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಸಮ್ಮೇಳನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಮುಖಂಡರಾದ ಮುರಳೀಧರ್ ಹಾಲಪ್ಪ, ಮದನ್ ಪಟೇಲ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X