Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾರ್ವಜನಿಕರನ್ನು ಪದೇ, ಪದೇ ಕಚೇರಿಗೆ...

ಸಾರ್ವಜನಿಕರನ್ನು ಪದೇ, ಪದೇ ಕಚೇರಿಗೆ ಅಲೆಸಬೇಡಿ: ಸರಕಾರಿ ನೌಕರರಿಗೆ ಡಿ.ಕೆ.ಶಿವಕುಮಾರ್ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ21 April 2025 4:31 PM IST
share
ಸಾರ್ವಜನಿಕರನ್ನು ಪದೇ, ಪದೇ ಕಚೇರಿಗೆ ಅಲೆಸಬೇಡಿ: ಸರಕಾರಿ ನೌಕರರಿಗೆ ಡಿ.ಕೆ.ಶಿವಕುಮಾರ್ ಕಿವಿಮಾತು

ಬೆಂಗಳೂರು: “ದೇವರು ಹಾಗೂ ನಮ್ಮ ಮಧ್ಯೆ ಅರ್ಚಕ ಇರುತ್ತಾನೆ. ಅದೇ ರೀತಿ ಸರಕಾರ ಹಾಗೂ ಜನರ ನಡುವೆ ಸರಕಾರಿ ನೌಕರರು ಇರುತ್ತಾರೆ. ನೀವು ಕೆಲಸಕ್ಕಾಗಿ ಜನರನ್ನು ಪದೇ, ಪದೇ ಕಚೇರಿಗೆ ತಿರುಗಿಸುವ ಕೆಲಸ ಮಾಡಬಾರದು. ಧನಾತ್ಮಕವಾಗಿ ಕೆಲಸ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರಕಾರಿ ನೌಕರರಿಗೆ ಕಿವಿಮಾತು ಹೇಳಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ- 2025 ಮತ್ತು ರಾಜ್ಯ ಮಟ್ಟದ ʼಸರ್ವೋತ್ತಮ ಸೇವಾʼ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

“ಸರಕಾರಿ ನೌಕರನಿಗೆ ಕೆಲಸವಾಗುವ ಬಗ್ಗೆ ತಿಳಿದಿರುತ್ತದೆ. ಆದರೂ ಸಾರ್ವಜನಿಕರನ್ನು ತಿರುಗಿಸುತ್ತಾರೆ. ಕೆಲವರಿಗೆ ಬರೀ ಕೊಕ್ಕೆ ಹಾಕುವುದೇ ಕೆಲಸ. ಕೆಲಸ ಆಗುವಂತಿದ್ದರೂ ಆ ದಾಖಲೆ, ಈ ದಾಖಲೆ ತೆಗೆದುಕೊಂಡು ಬಾ ಎಂದು ತಿರುಗಿಸುತ್ತಾರೆ. ಸಾರ್ವಜನಿಕರು ಸಲಾಂ ಹೊಡೆಯಬೇಕು, ಕಡಲೆ ಕಾಯಿ, ಹಣ್ಣು, ಕೋಳಿ ತಂದುಕೊಡಬೇಕು ಎನ್ನುವ ಧೋರಣೆ ಹೊಂದಿರುತ್ತಾರೆ. ಇಂತಹ ಸನ್ನಿವೇಶಗಳನ್ನು ಈ ಹಿಂದೆ ಗ್ರಾಮೀಣ ಭಾಗದಲ್ಲಿ ನೋಡಿದ್ದೇನೆ. ಇದರ ಬಗ್ಗೆ ರಾಜಕಾರಣದ ಜೀವನದಲ್ಲಿರುವ ನನಗೂ ಅನುಭವಕ್ಕೆ ಬಂದಿದೆ. ನೀವು ಈ ರೀತಿ ಕೆಲಸ ಮಾಡಬಾರದು” ಎಂದರು.

“ಹಣ ಇದ್ದರೆ ಕುಟುಂಬವನ್ನು ಮಾತ್ರ ಪೋಷಿಸುತ್ತೇವೆ. ಅಧಿಕಾರ ಇದ್ದರೆ ಜನಸಾಮಾನ್ಯರಿಗೂ ಸಹಾಯ ಮಾಡುವ ಅವಕಾಶ ದೊರೆಯತ್ತದೆ. ಇಂತಹ ಸದಾವಕಾಶ ಸರಕಾರಿ ನೌಕರರಿಗೆ ದೊರೆತಿದೆ. ರಾಜ್ಯದಲ್ಲಿ ಸುಮಾರು 12.5 ಲಕ್ಷ ಸರಕಾರಿ ನೌಕರರು ಇದ್ದೀರಿ. ಯಾರಿಗೂ ಸಿಗದಂತಹ ಅವಕಾಶ ನಿಮಗೆ ಸಿಕ್ಕಿದೆ. 50- 100 ಹುದ್ದೆಗಳಿಗೆ ಲಕ್ಷಾಂತರ ಜನರು ಅರ್ಜಿ ಹಾಕುತ್ತಾರೆ. ಇಂತಹ ಸ್ಪರ್ಧೆಯ ನಡುವೆ ನಿಮಗೆ ಸಿಕ್ಕಿರುವ ಅವಕಾಶ ಸರಿಯಾಗಿ ಬಳಸಿಕೊಳ್ಳಿ” ಎಂದು ಹೇಳಿದರು.

ಪುಟ್ಟರಂಗಪ್ಪ ಅವರನ್ನು ಸದಾ ನೆನೆಯುವೆ

“ಈ ಹಿಂದೆ ಬೆಂಗಳೂರು ಗ್ರಾಮಾಂತರದ ಜಿಲ್ಲಾಧಿಕಾರಿಯಾಗಿ ಚಿತ್ರದುರ್ಗ ಜಿಲ್ಲೆಯ ಪುಟ್ಟರಂಗಪ್ಪ ಇದ್ದರು. ಒಮ್ಮೆ ನಾನು ಚಿತ್ರಮಂದಿರದ ಪರವಾನಗಿ ಪಡೆಯಲು ಹೋಗಿದ್ದೆ. ಇಂದಿರಾಗಾಂಧಿಯವರ ಹತ್ಯೆ ನಡೆದಿತ್ತು. ಆಗ ಅವರು ರಜೆ ಘೋಷಣೆ ಮಾಡಬಹುದು ನಿನಗೆ ತೊಂದರೆಯಾಗುತ್ತದೆ ಎಂದು ಅಂದೇ ಪರವಾನಗಿ ನೀಡಿದರು. ಇಂದೂ ಸಹ ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ. ನೀವು ಸಹಾಯ ಮಾಡಿದರೆ ಸಮಾಜ ಸ್ಮರಣೆ ಮಾಡುತ್ತದೆ. ನೀವು ಇದೇ ರೀತಿ ಕೆಲಸ ಮಾಡಬೇಕು” ಎಂದು ಹೇಳಿದರು.

“ಸರಕಾರಿ ನೌಕರರು ಕೇವಲ ಸೇವಕರಲ್ಲ, ಸಮಾಜ ಸೇವೆ ಮಾಡಲು ಸಿಕ್ಕಿರುವ ಅವಕಾಶ ಎಂದು ನೀವು ತಿಳಿಯಬೇಕು. ಮರಕ್ಕೆ ಬೇರಿನ ಮೇಲೆ, ಮಕ್ಕಳಿಗೆ ತಾಯಿಯ ಮೇಲೆ, ಭಕ್ತನಿಗೆ ದೇವರ ಮೇಲೆ ನಂಬಿಕೆ, ಅದೇ ರೀತಿ ನಾವು ನಿಮ್ಮ ಮೇಲೆಯೇ ನಂಬಿಕೆ ಇಟ್ಟಿರುತ್ತೇವೆ. ನಾವು ಏನೇ ತೀರ್ಮಾನ ಮಾಡಬಹುದು ಆದರೆ ಅದನ್ನು ಜಾರಿಗೆ ತರುವವರು, ನಾವು ಮಾಡಿರುವ ತೀರ್ಮಾನದಲ್ಲಿರುವ ಲೋಪಗಳನ್ನು ತಿಳಿಸುವವರು ನೀವು” ಎಂದರು.

“ಕೆಂಗಲ್ ಹನುಮಂತಯ್ಯ ಅವರು ದೂರಾಲೋಚನೆ ಇಟ್ಟುಕೊಂಡು ಸರಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ನಮ್ಮನ್ನು ಜನರು ಐದು ವರ್ಷಗಳಿಗೊಮ್ಮೆ ಮನೆಗೆ ಕಳಿಸುತ್ತಾರೆ. ಆದರೆ ಸರಕಾರಿ ನೌಕರರು 60 ವರ್ಷದ ತನಕ ಜನಸೇವೆ ಮಾಡಬಹುದು. ಜನರ ಬದುಕಿನಲ್ಲಿ ಬದಲಾವಣೆ ತರುವ ತೀರ್ಮಾನ ಮಾಡಿದ್ದೇನೆ ಎಂದು ನಿಮಗೆ ಅನ್ನಿಸಬೇಕು. ಕಾನೂನಿನ ವಿರುದ್ದ ನೀವು ಕೆಲಸ ಮಾಡಿ ಎಂದು ಹೇಳುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಜನಪರವಾಗಿ ಆಲೋಚಿಸಿ” ಎಂದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X