Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪರಿಷತ್ ಸದಸ್ಯರ ನೇತೃತ್ವದಲ್ಲಿ ‘ಕೆರೆ...

ಪರಿಷತ್ ಸದಸ್ಯರ ನೇತೃತ್ವದಲ್ಲಿ ‘ಕೆರೆ ಅಧ್ಯಯನ ಸಮಿತಿ' : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Jun 2025 8:40 PM IST
share
ಪರಿಷತ್ ಸದಸ್ಯರ ನೇತೃತ್ವದಲ್ಲಿ ‘ಕೆರೆ ಅಧ್ಯಯನ ಸಮಿತಿ : ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯ ತಡೆಗಟ್ಟುವ ಕುರಿತು ಅಧ್ಯಯನ ನಡೆಸಲು ಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಬುಧವಾರ ಬನಶಂಕರಿಯಲ್ಲಿನ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸಮಿತಿಯು ನಗರದಲ್ಲಿನ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ. ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಿಸಬೇಡಿ. ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಮುಂದಕ್ಕೆ ಕಷ್ಟವಾಗಲಿದೆ ಎಂದು ನಿರ್ದೇಶನ ನೀಡಿದರು.

ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ: ನಗರ ಇಷ್ಟು ದೊಡ್ಡದಾಗಿ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ? ನಗರದಲ್ಲಿ ಎಷ್ಟು ಬಾಲ್ಯ ವಿವಾಹಗಳು ನಡೆದಿವೆ ಎನ್ನುವ ಮಾಹಿತಿ ಇದೆಯೇ?. ನಗರದಲ್ಲಿ ವಿದ್ಯಾವಂತರು, ಬುದ್ಧಿವಂತರು, ಸುಶಿಕ್ಷಿತರು ಇದ್ದಾರೆ. ಬೆಂಗಳೂರು ದಿನೇ ದಿನೇ ಬೆಳೆಯುತ್ತಿದೆ. ಗ್ರೇಟರ್ ಬೆಂಗಳೂರು ಆಗಿ ಮಾರ್ಪಾಡಾಗಿದೆ. ಹೊರವಲಯದ ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಳ್ಳುವ ಒತ್ತಡವಿದೆ. ನಗರದ ಸೌಲಭ್ಯಗಳನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ ಎಂದು ಅವರು ಹೇಳಿದರು.

ಆಸಕ್ತಿ ಇದ್ದರೆ ನನ್ನ ಜೊತೆ ಕೆಲಸ ಮಾಡಿ: ‘ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಯಾರ್ಯಾರು ಏನೇನೂ ಮಾಡುತ್ತಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇದೆ. ನನಗೇನೂ ಗೊತ್ತಾಗಲ್ಲ ಅನ್ನುವ ಭ್ರಮೆ ಬೇಡ. ಆತ್ಮಸ್ಥೈರ್ಯ ಕುಂದಿಸಬಾರದು ಎಂದು ನಿಮ್ಮ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿಲ್ಲ. ನನ್ನ ಜೊತೆ ಕೆಲಸ ಮಾಡಲು ಆಸಕ್ತಿ ಇದ್ದರೆ ಇರಬಹುದು, ಇಲ್ಲದಿದ್ದರೆ ಬೇರೆ ಕಡೆಗೆ ನೀವು ಹೊರಡಬಹುದು’ ಎಂದು ಎಚ್ಚರಿಕೆ ನೀಡಿದರು.

‘ಶೈಕ್ಷಣಿಕ ಕ್ಷೇತ್ರಗಳಿಗೆ ಸಿಎಸ್‍ಆರ್ ನಿಧಿಗಳನ್ನು ತರುವ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು ಉದ್ಯಮಿಗಳ ಸಭೆ ಕರೆದು ಚರ್ಚೆ ನಡೆಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಇರುವ ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮಗೊಳಿಸಲು ನಿಗಾವಹಿಸಬೇಕು ಹಾಗೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಬಾಲ್ಯವಿವಾಹದ ಬಗ್ಗೆ ಮಾಹಿತಿ ಇದೆಯೇ?: ಬಾಲ್ಯ ವಿವಾಹ ತಡೆಯಬೇಕು ಎಂದು ಪ್ರತಿಜ್ಞೆ ಸ್ವೀಕಾರ ಮಾಡಿದ್ದೇವೆ. ಆದರೆ, ಬೆಂಗಳೂರು ನಗರದಲ್ಲಿ ಎಷ್ಟೆಷ್ಟು ಬಾಲ್ಯ ವಿವಾಹ ನಡೆದಿದೆ ಅಂತ ನಿಮ್ಮ ಬಳಿ ಮಾಹಿತಿ ಇದೆಯಾ? ಪೊಲೀಸರು ಎಷ್ಟು ಕೇಸ್ ದಾಖಲು ಮಾಡಿದ್ದೀರಿ? ಎಂದು ಶಿವಕುಮಾರ್ ಪ್ರಶ್ನಿಸಿದರು.

ಮಾದಕವಸ್ತು ಮುಕ್ತ ಬೆಂಗಳೂರು: ‘ನಗರದ ಪ್ರತಿಯೊಂದು ಶಾಲಾ, ಕಾಲೇಜುಗಳ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಕುಲಪತಿಗಳ ಸಭೆ ಕರೆದು ಮಾದಕ ವಸ್ತು ನಿಯಂತ್ರಣದ ಬಗ್ಗೆ ತಿಳಿಸಬೇಕು. ಜೊತೆಗೆ ಶಾಲಾ, ಕಾಲೇಜುಗಳ ಹತ್ತಿರ ಅಂಗಡಿಗಳಲ್ಲಿ ಅಥವಾ ಇತರೇ ರೀತಿಯಲ್ಲಿ ಮಾದಕ ವಸ್ತುಗಳ ರವಾನೆ ಬಗ್ಗೆ ಅನುಮಾನ ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು’

-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X