ಬಿ.ಆರ್.ಪಾಟೀಲ್ ಯಾವ ಉದ್ದೇಶದಿಂದ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ, ಅವರ ಹೇಳಿಕೆ ಸರಿಯಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು : ಶಾಸಕ ಬಿ.ಆರ್.ಪಾಟೀಲ್ ಯಾವ ಉದ್ದೇಶದಿಂದ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಆದರೆ, ಅವರ ಹೇಳಿಕೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿ.ಆರ್ ಪಾಟೀಲ್ ಆಡಿಯೋ ವೈರಲ್ ಸಂಬಂಧ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರ ಸಿಂ ಗಮನಕ್ಕೆ ಬಂದಿದ್ದು, ಅವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಪಾರದರ್ಶಕವಾಗಿ ವಸತಿ ಯೋಜನೆಯಡಿ ಮನೆ ಹಂಚಿಕೆಯಾಗುವಾಗ ಫಲಾನುಭವಿ ಹಣ ನೀಡಲು ಹೇಗೆ ಸಾಧ್ಯ?. ಮನೆ ಹಂಚಿಕೆ ನಿರ್ಧಾರ ತೆಗೆದುಕೊಳ್ಳುವವರು ಪಂಚಾಯ್ತಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಎಂದು ತಿಳಿಸಿದ್ದಾರೆ.
ಶಾಸಕರು ಯಾವ ಉದ್ದೇಶದಲ್ಲಿ ಹೇಳಿದ್ದಾರೋ ಇದು ಸರಿ ಇಲ್ಲ. ನಾನಿದನ್ನು ಖಂಡಿಸುತ್ತೇನೆ. ನಮ್ಮ ಸರಕಾರದಲ್ಲಿ ಇಂತಹ ವಿಚಾರ ಇಲ್ಲ. ಈ ವಿಚಾರವಾಗಿ ನಾನು ಹಾಗೂ ಸಿಎಂ, ಶಾಸಕರ ಜೊತೆ ಮಾತನಾಡುತ್ತೇವೆ" ಎಂದು ತಿಳಿಸಿದರು.
Next Story





