Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮತಗಳ್ಳತನದ ಬಗ್ಗೆ ಮೊದಲು ಪತ್ತೆ...

ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೆ ಕರ್ನಾಟಕದಲ್ಲಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ10 Nov 2025 7:06 PM IST
share
ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೆ ಕರ್ನಾಟಕದಲ್ಲಿ: ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ಚುನಾವಣೆಗಳಲ್ಲಿ ಮತ ಕಳ್ಳತನ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೆ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ಹೊಸದಿಲ್ಲಿಯಲ್ಲಿರುವ ಎಐಸಿಸಿ ಕಚೇರಿಯ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಸಂಗ್ರಹಿಸಿರುವ 1.12 ಕೋಟಿ ಸಹಿಗಳನ್ನು ಸಂಗ್ರಹಿಸಲಾದ ದಾಖಲೆಗಳನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದ್ದೇವೆ ಎಂದು ಹೇಳಿದರು.

ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಎಐಸಿಸಿ ಸಂಶೋಧನಾ ವಿಭಾಗ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು ಎಂದು ಅವರು ವಿವರಿಸಿದರು.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಮುಖ್ಯಮಂತ್ರಿ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್‍ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಸತ್ಯಶೋಧನೆ ಮಾಡಿದವು. ಯಾವ ಸರಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೆ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು ಎಂದು ಅವರು ಹೇಳಿದರು.

ಕುಮಾರಸ್ವಾಮಿ ಭಯೋತ್ಪಾದಕರ ಒಂದು ಭಾಗವೇ?: ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಕುಮಾರಸ್ವಾಮಿ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ ಎಂದು ತಿರುಗೇಟು ನೀಡಿದರು.

ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ: ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೆ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಪೋಹಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X