Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈತರ ವಿಮೆ ಹಣ ಕಟ್ಟದ ಸ್ವಸಹಾಯ ಸೊಸೈಟಿಯ...

ರೈತರ ವಿಮೆ ಹಣ ಕಟ್ಟದ ಸ್ವಸಹಾಯ ಸೊಸೈಟಿಯ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Sept 2026 3:05 PM IST
share
ರೈತರ ವಿಮೆ ಹಣ ಕಟ್ಟದ ಸ್ವಸಹಾಯ ಸೊಸೈಟಿಯ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು, ಸೆ.8: ದೇವರ ಹಿಪ್ಪರಗಿ ತಾಲೂಕಿನ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ ವಿಚಾರದಲ್ಲಿ ನಿರ್ಲಕ್ಷ ತೋರಿರುವ ಸ್ವಸಹಾಯ ಸೊಸೈಟಿಯ ಕಾರ್ಯದರ್ಶಿಯನ್ನು ವಜಾಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ಮಂಗಳವಾರ ಬೆಬೆಳಗ್ಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ, ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲಕರ ಜೊತೆ ಮಾತುಕತೆ ನಡೆಸಿ, ಅವರ ಸಮಸ್ಯೆ ಆಲಿಸಿದರು.

ದೇವರ ಹಿಪ್ಪರಗಿಯ ರೈತರೊಬ್ಬರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ನಾವು ಬೆಳೆ ವಿಮೆಗೆ ಸ್ವಸಹಾಯ ಸೊಸೈಟಿಗೆ ಹಣ ಕಟ್ಟಿದ್ದು, ಅವರು ಡಿಸಿಸಿ ಬ್ಯಾಂಕಿಗೆ ಹಣ ಪಾವತಿ ಮಾಡದ ಕಾರಣ ನಮ್ಮ ವಿಮೆ ತಿರಸ್ಕೃತಗೊಂಡಿದೆ ಎಂದು ನಮಗೆ ಮೆಸೇಜ್ ಬಂದಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ರೈತರು ಹಣ ಪಾವತಿ ಮಾಡಿರುವ ಪಟ್ಟಿ ಪರಿಶೀಲಿಸಿದ ಸಿಎಂ, ಕೂಡಲೇ ನಿರ್ಲಕ್ಷ ತೋರಿರುವ ಅಧಿಕಾರಿಯನ್ನು ವಜಾಗೊಳಿಸುವಂತೆ ಸೂಚನೆ ನೀಡಿದರು.

ಖುದ್ದಾಗಿ ತೂಕ ಪರಿಶೀಲನೆ:

ನೀವು ಈರುಳ್ಳಿ ತರಬೇಕಾದರೆ ಪೊಲೀಸರು ತಡೆದು ಹಣ ಪಡೆಯುತ್ತಾರಾ? ರೈತರಿಗೆ ಸರಿಯಾದ ಸಮಯಕ್ಕೆ ಹಣ ನೀಡುತ್ತಾರೆಯೇ? ರೈತರಿಂದ ಮಾರುಕಟ್ಟೆಯವರು ಕಮಿಷನ್ ಏನಾದರೂ ಪಡೆಯುತ್ತಾರಾ? ಪ್ರತಿ ಎಕರೆಗೆ ಎಷ್ಟು ಖರ್ಚು ಆಗುತ್ತದೆ? ನಿಮ್ಮ ಬೆಳೆಯ ತೂಕ ಸರಿಯಾಗಿ ಮಾಡುತ್ತಿದ್ದಾರಾ? ಎಂದು ರೈತರನ್ನು ವಿಚಾರಿಸಿ, ಮಾಹಿತಿ ಪಡೆದರು. ತಾವೇ ಖುದ್ದಾಗಿ ಈರುಳ್ಳಿ ತೂಕವನ್ನು ಪರಿಶೀಲನೆ ನಡೆಸಿದರು.

ಕಲಬುರಗಿ, ಬೀದರ್, ವಿಜಯಪುರ ಮಾರುಕಟ್ಟೆಯಲ್ಲಿ 8ರಿಂದ 10 ರೂ. ಕಮಿಷನ್ ಪಡೆಯುತ್ತಾರೆ. ಯಶವಂತಪುರ ಮಾರುಕಟ್ಟೆಯಲ್ಲಿ ರೈತರಿಂದ ಕಮಿಷನ್ ಪಡೆಯುವುದಿಲ್ಲ. ಹೀಗಾಗಿ ನಾವು ಇಲ್ಲಿಗೆ ತಂದು ಹಾಕುತ್ತೇವೆ ಎಂದು ರೈತರು ಮಾಹಿತಿ ನೀಡಿದರು.

ಈ ಬಾರಿ ಮಳೆ ಕೊರತೆಯಿಂದಾಗಿ ಇಳುವರಿ ಕಡಿಮೆಯಾಗಿದೆ. ಎಕರೆಗೆ 150-200 ಪ್ಯಾಕೆಟ್ ಈರುಳ್ಳಿ ಬರುತ್ತದೆ. ಆದರೆ ಈ ಬಾರಿ ಕೇವಲ 50 ಪ್ಯಾಕೆಟ್ ಮಾತ್ರ ಸಿಕ್ಕಿದೆ ಎಂದು ವಿವರಿಸಿದರು. ಮಳೆ ಹೆಚ್ಚಾದರೆ ಈರುಳ್ಳಿ ಜಮೀನಿನಲ್ಲೇ ಕೊಳೆಯುತ್ತದೆ ಆಗ ಸರಿಯಾದ ಬೆಲೆ ಸಿಗುವುದಿಲ್ಲ. ಅದನ್ನು ಮಾರುಕಟ್ಟೆಗೆ ತಂದು ಹಾಕಲು ಆಗುವ ಖರ್ಚಿನಷ್ಟು ಹಣ ಸಿಗುವುದಿಲ್ಲ ಎಂದು ರೈತರು ವಿವರಿಸಿದರು.

ಬೆಳೆ ವಿಮೆ ಸಿಕ್ಕಿಲ್ಲ ಎಂದು ಅಳಲು

ಬೆಳೆಗೆ ವಿಮೆ ಮಾಡಿಸುವುದಿಲ್ಲವೇ ಎಂದು ಸಿಎಂ ಕೇಳಿದಾಗ, ನಾವು ಹೆಕ್ಟೆರ್ ಗೆ 6,500 ರೂ. ವಿಮೆ ಕಟ್ಟಿದ್ದರೂ ನಮಗೆ ಏನೂ ಸಿಕ್ಕಿಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೈತ ತಮ್ಮ ನೋವು ತೋಡಿಕೊಂಡರು. ರೈತರ ಮಾಹಿತಿ ಪಡೆಯುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಕಾರ್ಯವೈಖರಿ ಶ್ಲಾಘಿಸಿದ ರೈತರು

ಕಳೆದ 30 ವರ್ಷಗಳಲ್ಲಿ ಯಾವುದೇ ಸಚಿವರು, ಮುಖ್ಯಮಂತ್ರಿ ಮಾರುಕಟ್ಟೆಗೆ ಬಂದು ರೈತರ ಸಮಸ್ಯೆಗಳನ್ನು ವಿಚಾರಿಸಿರಲಿಲ್ಲ. ನೀವು ಬಂದು ಪರಿಸ್ಥಿತಿ ಪರಿಶೀಲನೆ ಮಾಡುತ್ತಿರುವುದು ಬಹಳ ಸಂತೋಷ ತಂದಿದೆ ಎಂದು ರೈತರು ಸಿಎಂ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಹೆಚ್ಚು ಹಣ ಪಡೆದರೆ ಹೇಳಿ ಮಟ್ಟ ಹಾಕುವೆ

ಮಾರುಕಟ್ಟೆಯಲ್ಲಿನ ಮಂಡಿ ವರ್ತಕರೊಂದಿಗೆ ಮಾತುಕತೆ ನಡೆಸಿದ ಸಿಎಂ, "ನೀವು ಎಪಿಎಂಸಿಗೆ ಎಷ್ಟು ಪಾವತಿ ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ವರ್ತಕರು ನೂರು ರೂ.ಗೆ 60 ಪೈಸೆ ಪಾವತಿ ಮಾಡುತ್ತೇವೆ ಎಂದರು. ಬೇರೆ ವರ್ತಕ 1 ರೂ. ಪಾವತಿ ಮಾಡುತ್ತಿರುವುದಾಗಿ ತಿಳಿಸಿದರು. ಆ ರೀತಿ ಏನಾದರೂ ಹೆಚ್ಚು ಹಣ ಪಡೆದರೆ ನನಗೆ ಹೇಳಿ ಅವರನ್ನು ನಾನು ಮಟ್ಟ ಹಾಕುತ್ತೇನೆ" ಎಂದು ಹೇಳಿದರು.

ರೈತರಿಂದ ನೇರ ಖರೀದಿ ವೇಳೆ ತೂಕ ಮೋಸ ಆಗದಂತೆ ಕ್ರಮ

ಕೆಲವರು ಎಪಿಎಂಸಿ ಮಾರುಕಟ್ಟೆಗೆ ಬರುವುದಿಲ್ಲ ನೇರವಾಗಿ ರೈತರಿಂದ ಖರೀದಿ ಮಾಡುತ್ತಾರೆ. ಅಲ್ಲಿ ಒಂದು ಬೆಲೆ ನಿಗದಿ ಮಾಡಿ ತೂಕ ಹೆಚ್ಚು ಕಮ್ಮಿ ಮಾಡಿ ತೆಗೆದುಕೊಂಡು ಹೋಗುತ್ತಾರೆ ಎಂದು ಹೇಳಿದರು. ಆಗ ಸಿಎಂ, ಈ ರೀತಿ ರೈತರಿಂದ ನೇರವಾಗಿ ಖರೀದಿ ಮಾಡುವವರು ತೂಕದಲ್ಲಿ ಹೆಚ್ಚು ಕಮ್ಮಿ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೂಡ್ಲಿಗಿಯ ರೈತನ ಮನೆಗೆ ವಿದ್ಯುತ್ ಸಂಪರ್ಕದ ಭರವಸೆ

ಕೂಡ್ಲಿಗಿಯ ಹೊಸಹಟ್ಟಿ ಗ್ರಾಮದ ಆಂಜನಪ್ಪ ಎಂಬ ಈರುಳ್ಳಿ ಬೆಳೆದ ರೈತನ ಜೊತೆ ಮಾತನಾಡುತ್ತಿರುವಾಗ, ಬೆಳೆಗೆ ನೀರಿನ ವ್ಯವಸ್ಥೆ ಹೇಗೆ ಎಂದು ಕೇಳಿದರು. ಅದಕ್ಕೆ ರೈತ, ನಾನು ತೋಟದಲ್ಲಿ ಮನೆ ಕಟ್ಟಿಕೊಂಡಿದ್ದು ಅದಕ್ಕೆ ವಿದ್ಯುತ್ ಸಂಪರ್ಕಕ್ಕಾಗಿ ಮೂರು ಬಾರಿ ಅರ್ಜಿ ಹಾಕಿದರೂ ಸಂಪರ್ಕ ಸಿಕ್ಕಿಲ್ಲ. ಕೇವಲ ನನಗೆ ಮಾತ್ರವಲ್ಲ, ಇದೇ ರೀತಿ ಹತ್ತಾರು ಮನೆಗಳಿವೆ ಎಂದು ಸಮಸ್ಯೆ ಹೇಳಿಕೊಂಡರು. ರೈತನ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, "ನಾನು ಪ್ರಜಾಸೇವೆ ಕಾರ್ಯಕ್ರಮ ಮಾಡಿದಾಗ, ಬಂದು ನನಗೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ ಎಂದು ಅರ್ಜಿ ನೀಡಬಾರದೇ ಎಂದರು. ಯೋಚನೆ ಮಾಡುವುದು ಬೇಡ. ಎಲ್ಲರಿಗೂ ವಿದ್ಯುತ್ ಸಂಪರ್ಕ ಸಿಗುವಂತೆ ಮಾಡಲಾಗುವುದು" ಎಂದು ಭರವಸೆ ನೀಡಿದರು.

"ನಿಮ್ಮ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ, 10 ಕೆಜಿ ಅಕ್ಕಿ ಸಿಗುತ್ತಿದೆಯೇ? ಎಂದು ವಿಚಾರಿಸಿದರು. ಆಗ ಗ್ಯಾರಂಟಿ ಯೋಜನೆಗಳು ನಮಗೆ ಸಿಗುತ್ತಿದ್ದು, ಅದರಿಂದ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಕ್ಕಳನ್ನು ಕೆಲಸಕ್ಕೆ ಬಳಸಿದವರನ್ನು ಬಂಧಿಸಿ

ಎಪಿಎಂಸಿ ಮಾರುಕಟ್ಟೆಯಲ್ಲಿ ಮಕ್ಕಳು ಕೂಡ ಕೆಲಸ ಮಾಡುತ್ತಿರುವುದನ್ನು ಗಮನಿಸಿದ ಸಿಎಂ ಸ್ಥಳದಲ್ಲೇ ಕಿಡಿಯಾದರು. "ಮಕ್ಕಳ ಕೈಯಲ್ಲಿ ಕೆಲಸ ಮಾಡಿಸುವವರು ಹಾಗೂ ಕೆಲಸಕ್ಕೆ ಕಳಿಸಿದವರನ್ನು ಸಂಜೆಯೊಳಗೆ ಬಂಧಿಸುವಂತೆ" ಸೂಚನೆ ನೀಡಿದರು.

"ತಕ್ಷಣವೇ ಕ್ರಮ ತೆಗೆದುಕೊಳ್ಳದಿದ್ರೆ ಸಂಬಂಧಪಟ್ಟ ಸರ್ಕಲ್ ಇನ್ ಸ್ಪೆಕ್ಟರ್, ಡಿಎಸ್ಪಿ, ಎಸಿಪಿ ಹಾಗೂ ಡಿಸಿಪಿ ಸೇರಿದಂತೆ ಪೊಲೀಸರನ್ನು ಅಮಾನತುಗೊಳಿಸುವುದಾಗಿ" ಎಚ್ಚರಿಕೆ ನೀಡಿದರು.

Tags

Yeshwanthpur APMC MarketDK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X