ʼಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ’ ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ: ಸಚಿವ ಎಚ್.ಕೆ. ಪಾಟೀಲ್

ಡಿ.ಕೆ. ಶಿವಕುಮಾರ್
ಬೆಂಗಳೂರು, ಮೇ 28: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್ಫಾಸ್ಟ್ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಸಚಿವ ಎಚ್.ಕೆ. ಪಾಟೀಲ್ ಮಾಧ್ಯಮಗಳಿಗೆ ಹೇಳಿದರು.
ಮುಖ್ಯಮಂತ್ರಿ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಸುಮಾರು ಎರಡು ಗಂಟೆಗಳ ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಮಹತ್ವದ ಚರ್ಚೆ ನಡೆದಿದ್ದು, ಇದೇ ವೇಳೆ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಸಚಿವರಿಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಸಭೆ ಬಳಿಕ ರಾಜ್ಯ ರಾಜಕೀಯದಲ್ಲಿ ತೀವ್ರ ಚಟುವಟಿಕೆಗಳು ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
Next Story




