Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ...

ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‍ಗಳ ರಚನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Jun 2025 11:03 PM IST
share
ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‍ಗಳ ರಚನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಮಕ್ಕಳಲ್ಲಿ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ, ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ರಚನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೂ.5ರಂದು ವಿಶ್ವ ಪರಿಸರ ದಿನ ಹಿನ್ನೆಲೆಯಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಓರ್ವ ಶಿಕ್ಷಕರು ಹಾಗೂ ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಕ್ಲಬ್ ರಚಿಸಲಾಗುವುದು. ಇವರಿಗೆ ಅಗತ್ಯವಾದ ಪ್ರಮಾಣಪತ್ರ, ಬ್ಯಾಡ್ಜ್ ಗಳನ್ನು ನಾವು ನೀಡುತ್ತೇವೆ ಎಂದು ತಿಳಿಸಿದರು.

ದೇಶದಲ್ಲಿ ಮುಂಬೈ, ಚೆನ್ನೈ ಹಾಗೂ ಬೆಂಗಳೂರು ಮೂರು ನಗರಗಳು ಹವಾಮಾನ ಕಾರ್ಯ ಯೋಜನೆಯಲ್ಲಿ ತೊಡಗಿಸಿಕೊಂಡಿವೆ. ಇದರ ಭಾಗವಾಗಿ ನಾವು ಹೊಸ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಜಿಬಿಎ ವ್ಯಾಪ್ತಿಯಲ್ಲಿ 6 ಸಾವಿರ ಶಾಲೆಗಳಿದ್ದು, ಇದರಲ್ಲಿ 4500 ಖಾಸಗಿ ಹಾಗೂ 1500 ಸರಕಾರಿ ಶಾಲೆಗಳಿವೆ. ಈ ಎಲ್ಲ ಶಾಲೆಗಳು ಈ ಯೋಜನೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ. ಇದಕ್ಕೆ ಈಗಾಗಲೇ 650 ಶಾಲೆಗಳು ಹಾಗೂ ಪಿಯು ಕಾಲೇಜುಗಳು ಒಪ್ಪಿಗೆ ನೀಡಿವೆ. ಈಗಾಗಲೇ 18 ಕ್ಲಬ್ ಗಳು ರಚನೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.

ಈ ಕ್ಲಬ್ ಗಳನ್ನು ರಚಿಸಲು ಸಾರ್ವಜನಿಕ ಸಂಘ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು. ಇವುಗಳ ನೋಂದಣಿಗೆ ಜೂ.6 ರಂದು ವೆಬ್ ಸೈಟ್ ಅನಾವರಣ ಗೊಳಿಸಲಾಗುವುದು. ಇದರಲ್ಲಿ ಭಾಗವಹಿಸುವವರಿಗೆ ಬ್ಲೂ, ಗ್ರೀನ್ ಅವಾರ್ಡ್ ಗಳನ್ನು ನೀಡಲಾಗುವುದು ಎಂದು ಶಿವಕುಮಾರ್ ಹೇಳಿದರು.

ಈ ಕ್ಲಬ್ ಗಳು ಹಸಿರು ಇಂಧನ, ಘನ ತ್ಯಾಜ್ಯ ನಿರ್ವಹಣೆ, ಗಾಳಿ ಗುಣಮಟ್ಟ, ತ್ಯಾಜ್ಯ ನೀರು, ಮಳೆನೀರು, ನಗರ ಯೋಜನೆ, ವಿಪತ್ತು ನಿರ್ವಹಣೆ ವಿಚಾರಗಳು ಒಳಗೊಂಡಿರುತ್ತದೆ. ಈ ವಿಚಾರಗಳ ಮೇಲೆ ಪ್ರಶಸ್ತಿಯನ್ನು ನೀಡಲಾಗುವುದು. 175 ಮಂದಿ, ಸಂಘ ಸಂಸ್ಥೆಗಳು ಈ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ಪ್ರಶಸ್ತಿ ಆಯ್ಕೆಗೆ 15 ತೀರ್ಪುಗಾರರ ತಂಡವನ್ನು ನೇಮಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಜೂ.6ರಂದು ಸಂಜೆ ನೆಹರೂ ತಾರಾಲಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ವಸ್ತು ಪ್ರದರ್ಶನವನ್ನು ನಾವು ಆಯೋಜಿಸಿದ್ದೇವೆ. ಮುಂದಿನ ದಿನಗಳಲ್ಲಿ ಈ ಕ್ಲಬ್ ಮೂಲಕ ರಸಪ್ರಶ್ನೆ, ಚರ್ಚಾ ಸ್ಪರ್ಧೆ ಆಯೋಜಿಸಿ, ಮಕ್ಕಳಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.

ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಆದ್ಯತೆ ನೀಡುತ್ತಿದ್ದು, ಸಾರಿಗೆ ಇಲಾಖೆಯಲ್ಲಿ ಸಾವಿರಾರು ಬಸ್ ಖರೀದಿ ಮಾಡಲಾಗಿದೆ. ಇನ್ನು ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡಲಾಗುತ್ತಿವೆ. ನಾನು ಬೆಂಗಳೂರು ಸಚಿವನಾದ ಬಳಿಕ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಶಾಲೆಗಳ ಸಹಯೋಗದಲ್ಲಿ ಮಕ್ಕಳ ಕೈಯಲ್ಲಿ ಮರ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅವರು ತಿಳಿಸಿದರು.

ಕಸ ವಿಲೇವಾರಿಗೆ ಕಾರ್ಯಕ್ರಮ: ಜೂ.6ರಂದು ಸ್ವಚ್ಛ ಬೆಂಗಳೂರು ಯೋಜನೆ ಹಾಗೂ ಕಾರ್ಯಯೋಜನೆ ಘೋಷಣೆ ಮಾಡಲಾಗುವುದು. ಬೆಂಗಳೂರಿನಲ್ಲಿರುವ ಕಸವನ್ನು ಒಂದು ಬಾರಿಗೆ ತೆಗೆಯಬೇಕು ಎಂದು ತೀರ್ಮಾನಿಸಲಾಗಿದೆ. ಕಸವಿರುವ ಜಾಗದ ಬಗ್ಗೆ ಸಾರ್ವಜನಿಕರು ಜಿಬಿಎ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಈ ಮಾಹಿತಿ ಬಂದ ನಂತರ ಅಧಿಕಾರಿಗಳು ಕಸ ವಿಲೇವಾರಿ ಮಾಡಲಿದ್ದಾರೆ. ಇನ್ನು ರಸ್ತೆ ಬದಿಯಲ್ಲಿ ಕಸ ತಂದು ಸುರಿಯುವುದನ್ನು ತಪ್ಪಿಸಲು ಹೆಚ್ಚು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಇನ್ನು ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

2023-24ನೇ ಸಾಲಿನಲ್ಲಿ 19 ಹೊಸ ಪಾರ್ಕ್ ಅಭಿವೃದ್ಧಿ ಮಾಡಿ, 47 ಪಾರ್ಕ್ ಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವೆ. 19 ಕೆರೆಗಳ ಅಭಿವೃದ್ಧಿ ಮಾಡಿ, 40 ಕೆರೆಗಳಿಗೆ ಬೇಲಿ ಹಾಕಲಾಗಿದೆ. ಇದಕ್ಕಾಗಿ 34.50 ಕೋಟಿ ರೂ.ವೆಚ್ಚ ಮಾಡಲಾಗಿದೆ. ಕೆರೆಗಳ ಅಭಿವೃದ್ಧಿಗೆ 55 ಕೋಟಿ ರೂ.ವೆಚ್ಚ ಮಾಡುತ್ತಿದ್ದು, ಜುಲೈ ವೇಳೆಗೆ 4 ಕೆರೆಗಳ ಅಭಿವೃದ್ಧಿ ಪೂರ್ಣಗೊಳ್ಳಲಿದೆ. 2025-26ನೇ ಸಾಲಿನಲ್ಲಿ ಉದ್ಯಾನವನಗಳ ಮೇಲ್ದರ್ಜೆಗೆ ಏರಿಸಲು 80 ಕೋಟಿ ರೂ. ಮೀಸಲಿಡಲಾಗಿದೆ. ಕೆರೆಗಳ ಅಭಿವೃದ್ಧಿಗೆ 250 ಕೋಟಿ ರೂ.ಮೀಸಲಿಡಲಾಗಿದೆ ಎಂದು ಅವರು ಹೇಳಿದರು.

ನ್ಯಾಯಾಲಯದ ನಿರ್ದೇಶನ ಮೇರೆಗೆ ನಗರದಲ್ಲಿ ಮರಗಣತಿ ಮಾಡಲು ತೀರ್ಮಾನಿಸಿದ್ದು, ಮಹದೇವಪುರ ಹಾಗೂ ಬೊಮ್ಮನಹಳ್ಳಿಯಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೊಂದು ವಾರ್ಡಿಗೆ 1 ಕೋಟಿ ರೂ. ಮೀಸಲಿಟ್ಟು ಬೆಂಗಳೂರು ಗ್ರೀನ್ ವಾರ್ಡ್ ಆಗಿ ಮಾಡಲಾಗುವುದು. ಈಗಾಗಲೇ ನಾವು 6.50 ಲಕ್ಷ ಮರಗಳನ್ನು ಗುರುತಿಸಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಈ ಕ್ಲಬ್ ಗಳ ಕಾರ್ಯಚಟುವಟಿಕೆ ಮೇಲ್ವಿಚಾರಣೆ ಮಾಡಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಮೇಲ್ವಿಚಾರಣೆಗೆ ಅಧಿಕಾರಿಗಳ ತಂಡ ನೇಮಿಸಲಾಗಿದೆ. ವಿಶೇಷ ಆಯುಕ್ತರು ಇದರ ಭಾಗವಾಗಿರುತ್ತಾರೆ. ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರ ತಂಡ ಇದರಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನೂರಾರು ಶಾಲೆಗಳನ್ನು ನೋಂದಣಿ ಮಾಡಲಾಗಿದೆ ಎಂದು ತಿಳಿಸಿದರು.

ಕಸದ ಸಮಸ್ಯೆ ಹೆಚ್ಚಾಗಿದ್ದು, ಮಾರ್ಷಲ್ ಗಳು ಏನು ಮಾಡುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಮಾರ್ಷಲ್‍ಗಳು ಅವರ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆ ಇದೆ. ಇಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ. ಅವರಲ್ಲಿ ಜಾಗೃತಿ ಮೂಡಿಸಬೇಕು. ಕಸ ಎಸೆದರೆ ವಿಧಿಸುವ ದಂಡ ಏರಿಕೆ ಮಾಡಲು ಚಿಂತಿಸುತ್ತಿದ್ದೇವೆ. ಖಾಲಿ ನಿವೇಶನಗಳ ಮಾಲಕರಿಗೆ ತಮ್ಮ ನಿವೇಶನ ಸ್ವಚ್ಛವಾಗಿಟ್ಟುಕೊಳ್ಳಲು ಸೂಚಿಸಲಾಗುವುದು. ನಗರದಲ್ಲಿ ನಿತ್ಯ 6 ಸಾವಿರ ಟನ್ ಕಸ ಉತ್ಪತ್ತಿಯಾಗುತ್ತಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X