Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೆಣ್ಣು ಮಕ್ಕಳನ್ನು ಅವಹೇಳನ ಮಾಡಿದ್ದ...

ಹೆಣ್ಣು ಮಕ್ಕಳನ್ನು ಅವಹೇಳನ ಮಾಡಿದ್ದ ವ್ಯಕ್ತಿಯನ್ನೇಗೆ ಸಮರ್ಥಿಸಿಕೊಳ್ತೀರಿ : ಎಚ್‌ಡಿಕೆ. ಆರ್.ಅಶೋಕ್‍ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ15 Sept 2024 9:23 PM IST
share
ಹೆಣ್ಣು ಮಕ್ಕಳನ್ನು ಅವಹೇಳನ ಮಾಡಿದ್ದ ವ್ಯಕ್ತಿಯನ್ನೇಗೆ ಸಮರ್ಥಿಸಿಕೊಳ್ತೀರಿ : ಎಚ್‌ಡಿಕೆ. ಆರ್.ಅಶೋಕ್‍ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರಶ್ನೆ

ಬೆಂಗಳೂರು : ‘ನಿಮ್ಮ ಸಮುದಾಯದ ಹಾಗೂ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಯನ್ನು ನೀವು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ’ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪರೋಕ್ಷವಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್‍ಗೆ ತಿರುಗೇಟು ನೀಡಿದ್ದಾರೆ.

ರವಿವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಶಾಸಕ ಮುನಿರತ್ನ ಮಾಡಿರುವ ಕೃತ್ಯವನ್ನು ಕಾಂಗ್ರೆಸ್ ಪಕ್ಷದ ನಾಯಕರೇನಾದರೂ ಮಾಡಿದ್ದರೆ, ನಿಮ್ಮ ಮಾತುಗಳು ಯಾವ ರೀತಿ ಇರುತ್ತಿದ್ದವು? ಇದಕ್ಕೆ ರಾಜಕೀಯವನ್ನು ಬೆರೆಸಬೇಡಿ, ನಿಮ್ಮ ಪಕ್ಷ ಇದಕ್ಕೆ ಬೆಂಬಲವಾಗಿ ನಿಂತಿದ್ದೀಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.

‘ವಿಪಕ್ಷ ನಾಯಕರು ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಘಟನೆಯ ಎಲ್ಲ ವಿವರಗಳು ತೆರೆದ ಪುಸ್ತಕದಂತೆ ಇರುವಾಗ ಸಮರ್ಥನೆ ಮಾಡಿಕೊಳ್ಳುವುದು ಸರಿಯೇ. ನಾವುಗಳು ಯಾರು ಮುನಿರತ್ನಗೆ ಕೆಟ್ಟ ಮಾತುಗಳನ್ನು ಹಾಡಿ ಹಾಗೂ ಕಮಿಷನ್ ತೆಗೆದುಕೊಳ್ಳಿ ಎಂದು ಹೇಳಿರಲಿಲ್ಲ. ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ ಸಹಿಸಲು ಆಗುವುದಿಲ್ಲ. ಜಾತಿ-ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳನ್ನು ಸಹಿಸಲು ಆಗುವುದಿಲ್ಲ’ ಎಂದು ಹೇಳಿದರು.

‘ರಾಜಕೀಯ ದ್ವೇಷದಿಂದ ಮುನಿರತ್ನ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೋಡಿದರೆ ದ್ವೇಷಕ್ಕೂ ಮತ್ತು ರಾಜಕೀಯಕ್ಕೂ ಎಲ್ಲಿಯ ಸಂಬಂಧ. ನಾವು ಯಾರೂ ನಿಂದನೆ ಮಾಡಿ ಎಂದು ಅವರಿಗೆ ಹೇಳಿಲ್ಲ. ದೂರು ಕೊಟ್ಟ ನಂತರ ಘಟನೆಯ ಬಗ್ಗೆ ನಮಗೆ ತಿಳಿಯಿತು. ಪೊಲೀಸರು ಮುನಿರತ್ನರನ್ನು ಬಂಧಿಸಿದ್ದು, ಮಿಕ್ಕ ಸಂಗತಿಗಳು ವಿಚಾರಣೆ ಬಳಿಕ ತಿಳಿಯುತ್ತವೆ ಎಂದು ನುಡಿದರು.

ಎಲ್ಲಕ್ಕೂ ರಾಜಕೀಯ ಮಾಡಲು ಆಗುತ್ತದೆಯೇ?: ಇತ್ತೀಚೆಗೆ ನಾನು ಯಾವ ವಿಚಾರದಲ್ಲೂ ಭಾಗಿಯಾಗುತ್ತಿಲ್ಲ. ಈ ವಿಚಾರಗಳು ನನಗೆ ಗೊತ್ತೂ ಇಲ್ಲ, ನನಗೆ ಅವಶ್ಯಕತೆಯೂ ಇಲ್ಲ. ಜನರು ತೀರ್ಪು ಕೊಟ್ಟಿರುವುದನ್ನು ಗೌರವಯುತವಾಗಿ ಸ್ವೀಕಾರ ಮಾಡಿದ್ದೇನೆ. ನನ್ನ ಕೈಲಾದಷ್ಟು ಕೆಲಸವನ್ನು ಜನರಿಗಾಗಿ ಮಾಡುತ್ತಿದ್ದೇನೆ. ನಾನು ರಾಜಕೀಯ ನಾಯಕರಿಂದ ದೂರ ಇದ್ದೇನೆ. ಜನರು ಅವರಿಗೆ ಅವಕಾಶ ಕೊಟ್ಟಿದ್ದಾರೆ, ಕೆಲಸ ಮಾಡಲಿ ಎಂದು ನಾವು ಸುಮ್ಮನಿದ್ದೇವೆ. ದಿನ ಬೆಳಗಾದರೆ, ಕೂತರೂ ನಿಂತರು ರಾಜಕೀಯ ಮಾಡಲು ಆಗುತ್ತದೆಯೇ? ಎಂದು ಅವರು ಪ್ರಶ್ನಿಸಿದರು.

ಸಿನಿಮಾ ನಿರ್ಮಾಣ ಜೆಡಿಎಸ್-ಬಿಜೆಪಿಗೆ ಬಿಟ್ಟಿದ್ದೇವೆ: ‘ಸಿನಿಮಾ ನಿರ್ಮಾಣ ಮತ್ತು ನಿರ್ದೇಶನವನ್ನು ಬಿಜೆಪಿ-ಜೆಡಿಎಸ್‍ನವರಿಗೆ ಬಿಟ್ಟಿದ್ದೇವೆ. ಆಕ್ಷನ್, ಕಟ್ ಎಲ್ಲವನ್ನು ಅವರಿಗೆ ಬಿಟ್ಟಿದ್ದೇವೆ. ಡಿ.ಕೆ. ಸಹೋದರರನ್ನು ನೆನೆಸಿಕೊಳ್ಳದಿದ್ದರೆ ರಾಜಕೀಯವಾಗಿ ರಕ್ಷಣೆ ಸಿಗುವುದಿಲ್ಲ, ಮೇಲೆ ಬರಲು ಸಾಧ್ಯವಿಲ್ಲ. ಏನೇ ಮಾಡಿದರು ಡಿ.ಕೆ.ಸಹೋದರರನ್ನು ಗುರಿಯಾಗಿಸಿಕೊಳ್ಳಬೇಕೆಂದು ಎಲ್ಲರೂ ಹವಣಿಸುತ್ತಿರುತ್ತಾರೆ. ಅವರುಗಳ ರಾಜಕೀಯ ಬೆಳವಣಿಗೆಗೆ ಇದು ಸರಿಯೋ ತಪ್ಪು ಎಂಬ ಚರ್ಚೆ ಅವರಿಗೆ ಬಿಟ್ಟಿದ್ದು. ನಾವು ಗೌರವಯುತವಾಗಿ ಎಲ್ಲವನ್ನೂ ಸ್ವೀಕಾರ ಮಾಡುತ್ತೇವೆ. ಹಾಗೇ ಸಮಯ ಬಂದಾಗ ಅದಕ್ಕೆ ಉತ್ತರವನ್ನೂ ಕೊಡುತ್ತೇವೆ ಎಂದು ಅವರು ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X