Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲ್ಲರಿಗೂ ಸೌಲಭ್ಯ ದೊರಕಿಸಲು ಸಮೀಕ್ಷೆ:...

ಎಲ್ಲರಿಗೂ ಸೌಲಭ್ಯ ದೊರಕಿಸಲು ಸಮೀಕ್ಷೆ: ಡಿ.ಕೆ.ಸುರೇಶ್

ವಾರ್ತಾಭಾರತಿವಾರ್ತಾಭಾರತಿ29 Sept 2025 7:46 PM IST
share
ಎಲ್ಲರಿಗೂ ಸೌಲಭ್ಯ ದೊರಕಿಸಲು ಸಮೀಕ್ಷೆ: ಡಿ.ಕೆ.ಸುರೇಶ್

ಬೆಂಗಳೂರು, ಸೆ. 29: ‘ಮೀಸಲಾತಿ ಹಾಗೂ ಎಲ್ಲ ಸರಕಾರಿ ಸೌಲಭ್ಯಗಳು ಕೇವಲ ಸಿಕ್ಕವರಿಗೇ ಸಿಗಬಾರದು. ಇದನ್ನು ಎಲ್ಲರಿಗೂ ದೊರೆಯುವಂತೆ ಮಾಡಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಬಹಳ ಪ್ರಮುಖ ಪಾತ್ರವಹಿಸುತ್ತದೆ’ ಎಂದು ಬಮುಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ವಿವರಣೆ ನೀಡಿದ್ದಾರೆ.

ಸೋಮವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಗೊಂದಲದಿಂದ ಕೂಡಿದೆ ಎನ್ನುವ ಆರೋಪಗಳನ್ನು ಗಮನಿಸುತ್ತಿದ್ದು, ನಾವು ಸೌಲಭ್ಯ ಇಲ್ಲದವರ ಸ್ಥಿತಿಗತಿಯನ್ನು ಮಾತ್ರ ನೋಡುತ್ತಿದ್ದೇವೆ. ಬಡಜನರ ಮಾಹಿತಿ ಸಂಗ್ರಹಿಸಿ ಅವರನ್ನು ಮೇಲಕ್ಕೆತ್ತಲು ಯಾವ ಕಾರ್ಯಕ್ರಮಗಳನ್ನು ಸರಕಾರ ಜಾರಿಗೆ ತರಬೇಕು ಎಂಬುದಾಗಿ ಆಲೋಚನೆ ಮಾಡಲಾಗುತ್ತದೆ. ಸಮೀಕ್ಷೆಯಿಂದ ಎಲ್ಲರಿಗೂ ಒಳ್ಳೆಯದಾಗಲಿದೆ ಎಂದು ನುಡಿದರು.

ಗ್ರಾಮೀಣ ಹಾಗೂ ನಗರ ಭಾಗದ ಜನರು ಇದರಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕು. ಸಮೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ. ಆದರೆ, ಬಿಜೆಪಿಯವರು ಗೊಂದಲ ಮಾಡುತ್ತಿದ್ದಾರೆ. ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ. ಸಮೀಕ್ಷೆಯಲ್ಲಿ ಆಯೋಗ ಕೇಳಿರುವ ಎಲ್ಲ ಮಾಹಿತಿಗಳಿಗೆ ಉತ್ತರಿಸಬೇಕು ಎನ್ನುವುದು ಕಡ್ಡಾಯವಲ್ಲ. ಒಟ್ಟು 60 ಪ್ರಶ್ನೆಗಳನ್ನು ಕೇಳಲಾಗಿದೆ. ಅದರಲ್ಲಿ ಸಮಂಜಸವಲ್ಲದ ಪ್ರಶ್ನೆಗಳಿಗೆ ಉತ್ತರಿಸಬಹುದು, ಇರದೆಯೂ ಇರಬಹುದು ಎಂದರು.

ಸಂಬಳ, ಒಡವೆಗಳ ಮಾಹಿತಿ ಬಗ್ಗೆ ಕೇಳಲಾಗಿದೆ ಎಂದರೆ, ಬಡವರೋ ಅಥವಾ ಬಲ್ಲಿದರೋ ಎಂದು ತಿಳಿಯಲು ಈ ರೀತಿ ಮಾಡಲಾಗಿದೆ. ಚಿನ್ನ ಎಂಬುದು ಬಡವರಿಗೆ ಕನಸಿನ ಮಾತು. ಚಿನ್ನ ಇಟ್ಟಿರುವವರು ಇದರ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಹೊರತು. ಇಲ್ಲದವರು ಸುಮ್ಮನೆ ಇದ್ದಾರೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರವೂ ಜಾತಿಗಣತಿ ನಡೆಸುತ್ತೇವೆಂದು ಕರೆ ನೀಡಿದೆ. ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಎಸ್ ನಾಯಕರುಗಳು ನಾವು ಹಿಂದೂ ಜಾತಿಗೆ ಸೇರಿದವರು ಎಂದು ಅವರ ಕಾರ್ಯಕರ್ತರಿಗೆ ಕರೆ ನೀಡಲಿ. ಎಲ್ಲ ಜಾತಿ, ಧರ್ಮದವರನ್ನು ಸಮಾನವಾಗಿ ತೆಗೆದುಕೊಂಡು ಹೋಗುತ್ತಾರೆ ಎಂದಾದರೆ ‘ಹಿಂದೂ’ ಎಂದೇ ಬರೆಸಲು ಅಭಿಯಾನ ನಡೆಸಲಿ, ಒತ್ತಾಯ ಮಾಡಲಿ ಎಂದು ಹೇಳಿದರು.

‘ಜಾತಿ, ಧರ್ಮ ಒಡೆಯಲಾಗುತ್ತಿದೆ ಎಂದು ಪದೇ, ಪದೇ ಆರೋಪ ಮಾಡುತ್ತಿದ್ದಾರಲ್ಲವೇ? ಹಾಗಾದರೆ ನಾವು ಭಾರತೀಯರು, ಹಿಂದೂಗಳು ಮಾತ್ರ ಎಂದು ಹೇಳಲಿ. ಸಮೀಕ್ಷೆಯನ್ನು ವಿರೋಧ ಮಾಡುತ್ತಿರುವವರು ಹಳ್ಳಿ, ಹಳ್ಳಿಗೆ ಹೋಗಿ ಈ ಅಭಿಯಾನ ನಡೆಸಲಿ. ಮೊಬೈಲ್ ಅಪ್ಲಿಕೇಶನ್ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಈಗ ಅದಕ್ಕೆ ಹೊಂದಿಕೊಳ್ಳಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X