Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಶಾಸಕರ ವಿದೇಶ ಪ್ರವಾಸʼ ಅಪಾರ್ಥ...

ʼಶಾಸಕರ ವಿದೇಶ ಪ್ರವಾಸʼ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಡಿ.ಕೆ.ಸುರೇಶ್

ವಾರ್ತಾಭಾರತಿವಾರ್ತಾಭಾರತಿ17 Feb 2026 4:11 PM IST
share
ʼಶಾಸಕರ ವಿದೇಶ ಪ್ರವಾಸʼ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಡಿ.ಕೆ.ಸುರೇಶ್
"ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ, ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ"

ಬೆಂಗಳೂರು : ಶಾಸಕರ ವಿದೇಶ ಪ್ರವಾಸ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಶಾಸಕರ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಶಾಸಕರಾಗಿರುವುದರಿಂದ ಅವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ನೀವು ಶಾಸಕರಾಗಿ ನಿಮ್ಮನ್ನು ಕರೆದುಕೊಂಡು ಹೋಗುತ್ತಾರೆ. ನೀವು ಶಾಸಕರಾಗಲು ಪ್ರಯತ್ನಿಸಿ. ಕೆಲವರು ವಿಶ್ವಾಸಕ್ಕೆ ಹೋಗುತ್ತಾರೆ, ಮತ್ತೆ ಕೆಲವರು ದೇಶ ನೋಡಲು ಹೋಗುತ್ತಾರೆ, ಇನ್ನು ಕೆಲವರು ಅಧ್ಯಯನಕ್ಕಾಗಿ ಹೋಗುತ್ತಾರೆ. ಇಲ್ಲಿ ವ್ಯಾಖ್ಯಾನ ಮಾಡುವಂತದ್ದು ಇಲ್ಲ. ಆಗಾಗ್ಗೆ ಶಾಸಕರುಗಳು ವಿದೇಶಕ್ಕೆ ಹೋಗಿ ಬರುತ್ತಾರೆ. ಇದರಲ್ಲಿ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಕೆಲಸಗಳ ಒತ್ತಡ, ಗೊಂದಲಗಳ ಮಧ್ಯೆ ಕುಟುಂಬ ಹಾಗೂ ಸ್ನೇಹಿತರ ವಿದೇಶ ಪ್ರವಾಸ ಎಲ್ಲರಿಗೂ ನೆಮ್ಮದಿ ನೀಡುತ್ತದೆ” ಎಂದು ತಿಳಿಸಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಎಚ್.ಸಿ ಮಹದೇವಪ್ಪ ಅವರು ಬಾಲ ನಾಯಿಯನ್ನೇ ಅಲ್ಲಡಿಸಬಾರದು ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು ಯಾರನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ. ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ. ನಿಯತ್ತಿನ ನಾಯಿಗಳು” ಎಂದರು.

ಹಾಗಾದರೆ ಹೊರಗಡೆಯಿಂದ ಬಂದವರು ಬೀದಿ ನಾಯಿಗಳೇ ಎಂದು ಕೇಳಿದಾಗ, “ನಾನು ಹಾಗೆಂದು ಹೇಳಿಲ್ಲ. ಕಟ್ಟಾ ಕಾಂಗ್ರೆಸಿಗರು ಋಣ ತೀರಿಸುವ ವ್ಯಕ್ತಿತ್ವ ಹೊಂದಿರುವವರು. ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ. ಅದು ನಿಯತ್ತಿನ ನಾಯಿಗಳ ಸ್ವಭಾವ. ನಿಯತ್ತಿಗಾಗಿಯೇ ಜನ ನಾಯಿಗಳನ್ನು ಸಾಕುತ್ತಾರೆ. ಬೇರೆಯವರು ನಮ್ಮ ಋಣ ತೀರಿಸುತ್ತಾರೋ ಇಲ್ಲವೋ, ನಾಯಿ ನಮ್ಮ ಋಣ ತೀರಿಸುತ್ತದೆ ಎಂಬ ಕಾರಣಕ್ಕೆ ನಾಯಿ ಸಾಕುತ್ತಾರೆ. ಬೀದಿ ನಾಯಿಗೆ ಊಟ ಹಾಕುತ್ತಾರೆ. ನಾಯಿ ನಿಯತ್ತಿನ ಬಗ್ಗೆ ಅನೇಕ ಗಾದೆಗಳು, ನಾಣ್ನುಡಿಗಳಿವೆ” ಎಂದು ಸ್ಪಷ್ಟನೆ ನೀಡಿದರು.

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ, ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ :

ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ, “ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಂದಿನಿ ಉತ್ಪನ್ನಗಳನ್ನು ಮಾಡುವಾಗ ಯಾವುದೇ ರೀತಿಯ ಕಲಬೆರಕೆ ಮಾಡುವುದಿಲ್ಲ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಖಾಸಗಿ ಕಂಪನಿಗಳು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಖಾಸಗಿಯವರು, ಬೇರೆಯವರು ಮಾಡಿಸುತ್ತಿರಬಹುದು. ನಾವು ಖಾಸಗಿಯವರ ಜತೆ ಸ್ಪರ್ಧೆ ಮಾಡಬೇಕಾದಾಗ ಅಪಪ್ರಚಾರ ಮಾಡುವುದು ಸಹಜ. ನಂದಿನಿ ಯಾವತ್ತೂ ಗುಣಮಟ್ಟದ ಜತೆ ರಾಜಿಯಾಗಿಲ್ಲ. ನಂದಿನಿಗೆ ಎಷ್ಟೇ ನಷ್ಟವಾದರೂ ಎಂದಿಗೂ ಗ್ರಾಹಕರಿಗೆ ಹಾಗೂ ರೈತರಿಗೆ ಅನ್ಯಾಯ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಗುಣಮಟ್ಟದ ಉತ್ಪನ್ನಗಳನ್ನು ಮುಂದೆಯೂ ನೀಡಲಿದೆ” ಎಂದು ತಿಳಿಸಿದರು.

Tags

D.K. Suresh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X