Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಂವಿಧಾನ ಬದಲಾಯಿಸುತ್ತೇವೆಂದ...

ಸಂವಿಧಾನ ಬದಲಾಯಿಸುತ್ತೇವೆಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ26 Nov 2024 10:51 PM IST
share
Photo of Program

ಬೆಂಗಳೂರು : ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದಿದ್ದ ಬಿಜೆಪಿಯನ್ನೇ ಜನರು ಬದಲಾಯಿಸಿದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ನಗರದ ವಸಂತನಗರದಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ‘ಸಂವಿಧಾನ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ ಎಂದರು.

ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯವರಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಅವರು ತಮ್ಮ ಎಲ್ಲಾ ಭಾಷಣದ ವೇಳೆಯೂ ಸಂವಿಧಾನದ ಪ್ರತಿ ಹಿಡಿದು ಮಾತು ಪ್ರಾರಂಭಿಸುತ್ತಿದ್ದರು. ಇದರಿಂದ ಪ್ರಧಾನ ಮಂತ್ರಿಗಳು ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ತೆಗೆದುಕೊಳ್ಳುವಂತಹ ಸಂದರ್ಭ ಸೃಷ್ಟಿಯಾಯಿತು. ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಇತಿಹಾಸ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎನ್ನುವ ಕಿವಿಮಾತನ್ನು ರಾಜಕಾರಣಿಗಳಿಗೆ ಅಂಬೇಡ್ಕರ್ ಅವರು ಹೇಳಿದ್ದಾರೆ. ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದ ಕಾರಣ ಪ್ರತಿಯೊಬ್ಬರು ಇತಿಹಾಸದಿಂದ ಪಾಠ ಕಲಿಯಬೇಕು ಎನ್ನುವ ಸಂದೇಶವನ್ನು ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಅನೇಕ ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡಿದ್ದೇವೆ. ಇದು ನಮ್ಮೆಲ್ಲರ ಬದುಕಿಗೂ ಸಂಬಂಧ ಪಡುತ್ತದೆ ಎನ್ನುವ ಕಿವಿಮಾತನ್ನು ನಮಗೆ ಅಂಬೇಡ್ಕರ್ ಅವರು ಬಿಟ್ಟು ಹೋಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಧರ್ಮ ಗ್ರಂಥಗಳನ್ನು ಆಯಾ ಧರ್ಮದವರು ಪವಿತ್ರ ಎಂದು ಹೇಳುತ್ತಾರೆ. ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥ. ಇದು ನಮ್ಮೆಲ್ಲರನ್ನು ರಕ್ಷಣೆ ಮಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್ ಪಕ್ಷ ಈ ದೇಶದ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಅಂಬೇಡ್ಕರ್ ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾದರು. ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಸ್ಮರಿಸಿಕೊಳ್ಳುವಂತಹ ಮಹಾನ್ ಗ್ರಂಥ ನಮಗೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಸಚಿವ ಎಚ್.ಸಿ.ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆಗೆ ಹೊಸ ರೂಪವನ್ನು ನೀಡಿದ್ದಾರೆ. ರಾಜಕೀಯದಿಂದ ನಿವೃತ್ತಿ ಪಡೆದ ಮೇಲೆ ಮಹದೇವಪ್ಪ ಅವರನ್ನು ನಮ್ಮ ವಿಶ್ವವಿದ್ಯಾನಿಲಯಗಳಿಗೆ ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು ಎನ್ನುವ ಅಭಿಲಾಷೆ ಅವರ ಮಾತುಗಳನ್ನು ಕೇಳಿದಾಗ ಅನ್ನಿಸಿತು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ನಮ್ಮ ರಾಜಕೀಯಕ್ಕೆ ಇನ್ನೂ 10-15 ವರ್ಷ ಆಯಸ್ಸಿದೆ: ನಮ್ಮ ರಾಜಕೀಯ ಆಯಸ್ಸು ಇನ್ನು 10-15 ವರ್ಷವಿದೆ. ವಿದ್ಯಾರ್ಥಿಗಳು ಮುಂದಿನ 60-70 ವರ್ಷಗಳ ಕಾಲ ಈ ದೇಶವನ್ನು ಮುನ್ನಡೆಸುವವರು. ಅವರಿಗೆ ಸಂವಿಧಾನದ ಬಗ್ಗೆ ಅಡಿಪಾಯ ಹಾಕಬೇಕು ಎನ್ನುವ ಕಾರಣಕ್ಕೆ ಜಾಗೃತಿ ಮೂಡಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಅಮೆರಿಕಾದ ಮಾಜಿ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ ಅವರು ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X