Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ :...

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ29 Oct 2026 11:17 PM IST
share
ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ರೈತರ ನಷ್ಟ ತಡೆಯಲು ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. ರೈತರನ್ನು ಕಾಪಾಡುವುದು ನಮಗೆ ಮುಖ್ಯ. ಆದುದರಿಂದ ಸರಕಾರ ರೈತರಿಗೆ ಸಹಾಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಲಿನ ದರ ಏರಿಕೆಯನ್ನು ಸಮರ್ಥಿಸಿದ್ದಾರೆ.

ಹಾಲಿನ ದರ ಏರಿಕೆ ಸಂಬಂಧ ಗುರುವಾರ ನಗರದ ಖಾಸಗಿ ಹೋಟೆಲ್ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಾಲಿನ ದರ ಏರಿಸುವಂತೆ ಒಂದೂವರೆ ವರ್ಷದಿಂದ ಬೇಡಿಕೆ ಇತ್ತು. ಇದೀಗ ದರ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗಿದೆ. ‘ಜನಸಾಮಾನ್ಯರಿಗೆ ಹಾಲಿನ ಬೆಲೆ ಹೆಚ್ಚಳದಿಂದ ಹೊರೆಯಾಗುವುದಿಲ್ಲವೇ?’ ಎಂದು ಕೇಳಿದಾಗ, ‘ರೈತರಿದ್ದರೆ ಹಾಲು ಕುಡಿಯಬಹುದು. ಇಲ್ಲದಿದ್ದರೆ ಹಾಲು ಕುಡಿಯಲು ಸಾಧ್ಯವೇ?’ ಎಂದು ಮರು ಪ್ರಶ್ನೆ ಹಾಕಿದರು.

ಪ್ಲಾಸ್ಟಿಕ್ ಕವರ್, ಡೀಸೆಲ್, ಪೆಟ್ರೋಲ್ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಾಗಿದೆ. ಹಾಲಿನ ದರವನ್ನು 12ರಿಂದ 15 ರೂ.ಗಳವರೆಗೆ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ನಾವು ಎಲ್ಲರೊಂದಿಗೆ ಚರ್ಚಿಸಿ 8 ರೂ.ಗಳನ್ನು ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಪ್ರತಿ ಲೀಟರ್ ಹಾಲಿಗೆ 30-35 ರೂ.ಗಳನ್ನು ನೀಡಲಾಗುತ್ತಿದೆ. ನೆರೆಯ ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ಬೆಲೆ ಕಡಿಮೆ ಇದೆ. ನಮ್ಮಲ್ಲಿ ಬೆಲೆ ಕಡಿಮೆ ಇದ್ದಿದ್ದರಿಂದ ಆಂಧ್ರ, ಮಹಾರಾಷ್ಟ್ರಕ್ಕೂ ಹಾಲು ಹೋಗುತ್ತಿತ್ತು. ಅದನ್ನು ತಡೆಯಬೇಕಿತ್ತು. ತಿರುಪತಿಗೆ ನಂದಿನಿ ತುಪ್ಪವನ್ನೇ ಖರೀದಿ ಮಾಡುತ್ತಾರೆ. ಅವರು ಅಲ್ಲಿಯೇ ಖರೀದಿಸಬಹುದು. ಆದರೆ, ನಂದಿನಿ ಬಗ್ಗೆ ಅವರಿಗೆ ನಂಬಿಕೆ ಇದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಮೈಸೂರು ಪಾಕ್ ಸೇರಿದಂತೆ ಇತರೆ ಪದಾರ್ಥಗಳಿಗೆ ನಂದಿನ ತುಪ್ಪದ ಬೇಡಿಕೆ ಇದೆ. ಇದರ ಜೊತೆಗೆ ಸರಕಾರದಿಂದಲೂ ಪ್ರೊ ತ್ಸಾಹ ಧನ ನೀಡಲಾಗುತ್ತಿದೆ. ರೈತರಿಗೆ ನಷ್ಟವಾಗುತ್ತಿರುವುದರಿಂದ ಸರಕಾರ ಹಾಲಿನ ದರ ಹೆಚ್ಚಿಸುವ ತೀರ್ಮಾನವನ್ನು ಮಾಡಿದೆ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ವಿಧಾನಸಭೆ ವಿಧಾನಪರಿಷತ್ತಿನಲ್ಲಿಯೂ ಹಾಲಿನ ದರ ಹೆಚ್ಚಳ ಮಾಡಬೇಕೆಂದು ಪಕ್ಷಾತೀತವಾಗಿ ಎಲ್ಲ ಶಾಸಕರು ಬೇಡಿಕೆ ಇಟ್ಟಿದ್ದರು. ಚುನಾವಣೆ ಇದ್ದುದ್ದರಿಂದ ತೀರ್ಮಾನ ಮಾಡಲಾಗಲಿಲ್ಲ. ಈಗ ಚುನಾವಣೆ ಮುಗಿದಿರುವುದರಿಂದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಸ್ ದರ ಏರಿಕೆ: ಸಾರಿಗೆ ಇಲಾಖೆ ತೀರ್ಮಾನಿಸಲಿದೆ: ‘ಸಾರಿಗೆ ಇಲಾಖೆಯಲ್ಲಿ ಬಹಳ ನಷ್ಟವಾಗಿದ್ದು, ಡೀಸಲ್‍ಗೆ ಕೂಡ ಅನುದಾನವಿಲ್ಲ. ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಸರಕಾರ ನೀಡಲಾಗುತ್ತಿದೆ. ಹಾಗಾಗಿ, ಬಸ್ ದರವನ್ನು ಏರಿಕೆ ಮಾಡುವ ಬಗ್ಗೆ ಸಾರಿಗೆ ಇಲಾಖೆಯವರೇ ತೀರ್ಮಾನ ಕೈಗೊಳ್ಳಲು ತಿಳಿಸಲಾಗಿದೆ’

Tags

D.K.Sivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X