Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನ್ಯಾಯಾಲಯದ ಕಾರ್ಯ ಮಾಡಲು ನೀವು...

ನ್ಯಾಯಾಲಯದ ಕಾರ್ಯ ಮಾಡಲು ನೀವು ಮುಂದಾಗಬೇಡಿ: ಶಾಸಕ ಹರೀಶ್ ಪೂಂಜಾರಿಗೆ ಹೈಕೋರ್ಟ್ ತರಾಟೆ

ಪೊಲೀಸರಿಗೆ ಬೆದರಿಕೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ31 May 2024 12:32 PM IST
share
ನ್ಯಾಯಾಲಯದ ಕಾರ್ಯ ಮಾಡಲು ನೀವು ಮುಂದಾಗಬೇಡಿ: ಶಾಸಕ ಹರೀಶ್ ಪೂಂಜಾರಿಗೆ ಹೈಕೋರ್ಟ್  ತರಾಟೆ

ಬೆಂಗಳೂರು, ಮೇ 31: ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜ್ಯ ಹೈಕೋರ್ಟ್ ತೀವ್ರ ತರಾಟೆಗೈದಿದೆ.

ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್ ಗಳನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು.

ಪ್ರಸಕ್ತ ದಿನಗಳಲ್ಲಿ ಪೊಲೀಸ್ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೆವೆ ಸಲ್ಲಿಸುವುದಾದರೂ ಹೇಗೆ ಎಂದು ಪೀಠ ಇದೇ ವೆಳೆ ಪ್ರಶ್ನೆ ಮಾಡಿತು.

ಜನ ಪ್ರತಿನಿಧಿಯಾದ ವ್ಯಕ್ತಿ ಯಾವನೋ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದರೆ ತಕ್ಷಣ ಜನ ಪ್ರತಿನಿಧಿ ಪೊಲೀಸ್ ಠಾಣೆಗೆ ಹೋಗಲು ಸಾಧ್ಯವೇ, ಅರ್ಜಿದಾರರು ನೀವು ಠಾಣೆಗೆ ಹೋಗಬಾರದಾಗಿತ್ತು ಎಂದು ತಿಳಿಸಿತು,

ಯಾವುದೇ ವ್ಯಕ್ತಿಯನ್ನು ಬಂಧಿಸಿದಲ್ಲಿ ಅದನ್ನು ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಬದಲಾಗಿ ಶಾಸಕರಾದವರು ಠಾಣೆಗೆ ಹೋದರೆ ಪೊಲೀಸರು ತಮ್ಮ ಸೇವೆ ಸಲ್ಲಿಸುವುದಾದರೂ ಹೇಗೆ? ಎಂದು ಪೀಠ ಖಾರವಾಗಿ ಪ್ರಶ್ನಿಸಿತು.

ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದ, ವಿದೇಶ ನ್ಯಾಯಾಲಯಗಳು ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅಧರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ಪೀಠ ತಿಳಿಸಿತು.

ವಾದ ಆಲಿಸಿದ ಪೀಠ, ಸರಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X