Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಜ್ಞಾನ ಕೇಂದ್ರಗಳಲ್ಲಿ...

ವಿಜ್ಞಾನ ಕೇಂದ್ರಗಳಲ್ಲಿ ‘ವಿದ್ಯಾರ್ಥಿ-ವಿಜ್ಞಾನಿ ಸಂವಾದ’; ಇಸ್ರೋ ಸಹಕಾರ ಕೋರಿದ ಸಚಿವ ಡಾ.ಅಜಯ್ ಧರಂ ಸಿಂಗ್

ವಾರ್ತಾಭಾರತಿವಾರ್ತಾಭಾರತಿ9 Sept 2026 6:44 PM IST
share
ವಿಜ್ಞಾನ ಕೇಂದ್ರಗಳಲ್ಲಿ ‘ವಿದ್ಯಾರ್ಥಿ-ವಿಜ್ಞಾನಿ ಸಂವಾದ’; ಇಸ್ರೋ ಸಹಕಾರ ಕೋರಿದ ಸಚಿವ ಡಾ.ಅಜಯ್ ಧರಂ ಸಿಂಗ್

ಬೆಂಗಳೂರು : ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯವನ್ನು ಪಠ್ಯಪುಸ್ತಕದ ಆಚೆಗೆ ಅನುಭವಾತ್ಮಕವಾಗಿ ಪರಿಚಯಿಸುವ ಉದ್ದೇಶದಿಂದ, ವಿವಿಧ ವಿಜ್ಞಾನ ಕೇಂದ್ರಗಳಲ್ಲಿ ಇಸ್ರೋ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲು ಸಹಕಾರ ನೀಡಬೇಕು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಧರಂ ಸಿಂಗ್, ಇಸ್ರೋ ಅಧ್ಯಕ್ಷ ಡಾ.ವಿ.ನಾರಾಯಣನ್‍ಗೆ ಮನವಿ ಮಾಡಿದ್ದಾರೆ.

ಬುಧವಾರ ಇಸ್ರೋ ಅಧ್ಯಕ್ಷರನ್ನು ಭೇಟಿಯಾದ ಸಂದರ್ಭದಲ್ಲಿ ಈ ಸಂಬಂಧ ಮನವಿ ಸಲ್ಲಿಸಿದ ಸಚಿವರು, ಬಾಹ್ಯಾಕಾಶ ವಿಜ್ಞಾನ, ಸಂಶೋಧನೆ, ಉಪಗ್ರಹ ತಂತ್ರಜ್ಞಾನ ಮತ್ತು ವಿಜ್ಞಾನ ವೃತ್ತಿಜೀವನದ ಬಗ್ಗೆ ವಿದ್ಯಾರ್ಥಿಗಳು ನೇರವಾಗಿ ವಿಜ್ಞಾನಿಗಳಿಂದ ತಿಳಿದುಕೊಳ್ಳುವ ವ್ಯವಸ್ಥೆ ರೂಪಿಸಬೇಕು ಎಂದು ಕೋರಿದ್ದಾರೆ.

ವಿದ್ಯಾರ್ಥಿಗಳು ವಿಜ್ಞಾನಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದಾಗ ವಿಜ್ಞಾನ ಅವರಿಗೊಂದು ಪಾಠದ ವಿಷಯವಾಗಿರದೆ, ಭವಿಷ್ಯದ ಅವಕಾಶವಾಗಿ ಕಾಣಲು ಆರಂಭಿಸುತ್ತದೆ. ಇಸ್ರೋ ವಿಜ್ಞಾನಿಗಳ ಅನುಭವ ಮತ್ತು ಸಾಧನೆಗಳು ಮಕ್ಕಳಲ್ಲಿ ಕುತೂಹಲ, ಸಂಶೋಧನಾ ಮನೋಭಾವ ಹಾಗೂ ದೊಡ್ಡ ಕನಸುಗಳನ್ನು ಹುಟ್ಟುಹಾಕಬಲ್ಲವು ಎಂದು ಅಜಯ್ ಧರಂಸಿಂಗ್ ಹೇಳಿದ್ದಾರೆ.

ಅನುಭವದ ಮೂಲಕ ಕಲಿಕೆ: ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಮತ್ತು ಸಂವಾದಾತ್ಮಕ ವಿಜ್ಞಾನ ಕಲಿಕೆಯನ್ನು ಉತ್ತೇಜಿಸಲು ರಾಜ್ಯ ಸರಕಾರ ವಿಜ್ಞಾನ ಕೇಂದ್ರಗಳು, ಮೊಬೈಲ್ ಪ್ಲಾನೆಟೋರಿಯಂಗಳು ಹಾಗೂ ದೂರದರ್ಶಕ ಆಧಾರಿತ ಕಾರ್ಯಕ್ರಮಗಳನ್ನು ವಿಸ್ತರಿಸುತ್ತಿದೆ. ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮೊಬೈಲ್ ಡಿಜಿಟಲ್ ಪ್ಲಾನೆಟೋರಿಯಂ ಕಾರ್ಯಕ್ರಮವು 3,282ಶಾಲೆಗಳನ್ನು ತಲುಪಿದ್ದು, 5.46 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದರ ಪ್ರಯೋಜನ ಪಡೆದಿದ್ದಾರೆ.

ವಿಜ್ಞಾನವನ್ನು ಮಕ್ಕಳಿಗೆ ತೋರಿಸಬೇಕು, ಅನುಭವಿಸಬೇಕು, ಪ್ರಶ್ನಿಸಲು ಅವಕಾಶ ಕೊಡಬೇಕು. ವಿಜ್ಞಾನಿಗಳೊಂದಿಗೆ ನೇರ ಸಂವಾದವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜೊತೆಗೆ ಮುಂದಿನ ಪೀಳಿಗೆಯ ವಿಜ್ಞಾನಿಗಳು, ಸಂಶೋಧಕರು ಮತ್ತು ತಂತ್ರಜ್ಞಾನ ತಜ್ಞರನ್ನು ರೂಪಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.

Tags

Dr.Ajay Dharam Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X