ಕಾಣೆಯಾಗಿರುವ ಮಕ್ಕಳ ಪತ್ತೆಗೆ ಕ್ರಮ : ಡಾ.ಜಿ.ಪರಮೇಶ್ವರ್

ಬೆಂಗಳೂರು, ಫೆ. 26 : ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು ನಾಪತ್ತೆಯಾಗಿರುವ ಕುರಿತು ಈಗಾಗಲೇ ಮಾಹಿತಿ ಸಿಕ್ಕಿದೆ. ಆಯಾ ಜಿಲ್ಲೆಗಳಲ್ಲಿ ಇಲಾಖೆ ಸಭೆಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಗಂಭೀರವಾಗಿ ಪರಿಗಣಿಸುತ್ತೇವೆ.ಜತೆಗೆ, ವಿಶೇಷ ಕಾರ್ಯಾಚರಣೆ ನಡೆಸುವ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
ಮುಖ್ಯಮಂತ್ರಿ ವಿಷಯದಲ್ಲಿ ಈಗಾಗಲೇ ಸಾಕಷ್ಟು ಗೊಂದಲಗಳು ಹುಟ್ಟು ಹಾಕಲಾಗಿದೆ. ಆದರೆ, ಈ ಬಗ್ಗೆ ನಾನು ಸಹ ಮಾತನಾಡಿ ಹೆಚ್ಚು ಗೊಂದಲ ಸೃಷ್ಟಿಸುವುದಿಲ್ಲ. ಅನೇಕರು ನನ್ನನ್ನ ಪ್ರಶ್ನೆ ಮಾಡುತ್ತಾರೆ. ಇನ್ನೊಂದೆಡೆ, ಅಲ್ಲಲ್ಲಿ ನೀವು ಸಿಎಂ ಅಗಬೇಕೆಂದು ಭಾವನೆ ವ್ಯಕ್ತಪಡಿಸುತ್ತಾರೆ. ಇದಕ್ಕೆಲ್ಲಾ ಉತ್ತರ ಹೈಕಮಾಂಡ್ ಕೊಡಬೇಕು ಎಂದು ಅವರು ಹೇಳಿದರು.
Next Story





