Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 10 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ...

10 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಮುನ್ನುಡಿ: ಐತಿಹಾಸಿಕ 'ಸಿಸ್ಟರ್-ಸಿಟಿ' ಒಪ್ಪಂದ ಪ್ರಸ್ತಾಪಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ29 Jun 2026 1:23 PM IST
share
10 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಮುನ್ನುಡಿ: ಐತಿಹಾಸಿಕ ಸಿಸ್ಟರ್-ಸಿಟಿ ಒಪ್ಪಂದ ಪ್ರಸ್ತಾಪಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು : ಪೆರು ಗಣರಾಜ್ಯದೊಂದಿಗಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ, ಪೆರು ದೇಶದ ರಾಜಧಾನಿ 'ಲಿಮಾ' ನಂತಹ ಪ್ರಮುಖ ನಗರ ಹಾಗೂ 'ಬೆಂಗಳೂರು' ನಗರದ ನಡುವೆ ಐತಿಹಾಸಿಕ 'ಸಿಸ್ಟರ್-ಸಿಟಿ' (Sister-City) ಒಪ್ಪಂದ ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ಅತ್ಯಂತ ಉತ್ಸುಕವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.

ಭಾರತ ಮತ್ತು ಪೆರು ನಡುವಿನ 63 ವರ್ಷಗಳ ನಿರಂತರ ರಾಜತಾಂತ್ರಿಕ ಬಾಂಧವ್ಯ ಹಾಗೂ ಪೆರು ಗಣರಾಜ್ಯದ '205ನೇ ಸ್ವಾತಂತ್ರ್ಯ ದಿನಾಚರಣೆ'ಯ ಅಂಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರವಿವಾರ ಆಯೋಜಿಸಲಾಗಿದ್ದ ಉನ್ನತ ಮಟ್ಟದ ರಾಜತಾಂತ್ರಿಕ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿಗಳು, ಪೆರುವಿನ ಲ್ಯಾಟಿನ್ ಅಮೆರಿಕನ್ ವಿಮೋಚನಾ ಚಳುವಳಿಗಳು ಮತ್ತು ಮಹಾತ್ಮ ಗಾಂಧಿಯವರ ನೇತೃತ್ವದ ಭಾರತದ ಸ್ವಾತಂತ್ರ್ಯ ಹೋರಾಟದ ನಡುವಿನ ಆಳವಾದ ಸಾಮ್ಯತೆಗಳನ್ನು ಸ್ಮರಿಸಿದರು.

"ಭಾರತದ ಐಟಿ ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಜೈವಿಕ ತಂತ್ರಜ್ಞಾನ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯವು ಶೇ. 40 ಕ್ಕಿಂತ ಹೆಚ್ಚಿನ ಪಾಲನ್ನು ಹೊಂದುವ ಮೂಲಕ ಪ್ರಥಮ ಸ್ಥಾನದಲ್ಲಿದ್ದು, ಈ ಕ್ಷೇತ್ರದಲ್ಲಿ ಇಡೀ ದೇಶವನ್ನೇ ಮುನ್ನಡೆಸುತ್ತಿದೆ. ಇತ್ತೀಚೆಗೆ ರಾಜ್ಯದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಅಭೂತಪೂರ್ವ ಯಶಸ್ಸು ಮತ್ತು ಅಲ್ಲಿ ಹರಿದುಬಂದ ಬೃಹತ್ ಹೂಡಿಕೆಗಳು ರಾಜ್ಯದ ಪ್ರಗತಿಯನ್ನು ಮತ್ತಷ್ಟು ಸಾಬೀತುಪಡಿಸಿವೆ," ಎಂದು ಅವರು ತಿಳಿಸಿದರು.

"ಬೆಂಗಳೂರು ಮತ್ತು ಪೆರು ದೇಶದ ಪ್ರಮುಖ ನಗರದ ನಡುವೆ ವ್ಯಾಪಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನೇರ ಸಾಂಸ್ಥಿಕ ಸಹಯೋಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸಿಸ್ಟರ್‌-ಸಿಟಿ ಒಪ್ಪಂದವು ಅತ್ಯಂತ ಮಹತ್ವದ್ದಾಗಿದೆ. ಇದು ಭವಿಷ್ಯದಲ್ಲಿ ಉಭಯ ದೇಶಗಳ ನಡುವಿನ 10 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ದೊಡ್ಡ ಮುನ್ನುಡಿಯಾಗಲಿದೆ," ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪೆರು ರಾಯಭಾರಿ ಜೇವಿಯರ್ ಮ್ಯಾನುಯೆಲ್ ಪೌಲಿನಿಚ್ ವೆಲಾರ್ಡ್, ಬೆಂಗಳೂರಿನಲ್ಲಿರುವ ಪೆರುವಿನ ಗೌರವ ಕಾನ್ಸುಲ್ ವಿಕ್ರಮ್ ವಿಶ್ವನಾಥ್ ಅವರು ಹಾಗೂ ಉನ್ನತ ಅಧಿಕಾರಿಗಳು, ವಿವಿಧ ದೇಶಗಳ ರಾಜತಾಂತ್ರಿಕರು ಮತ್ತು ಬೆಂಗಳೂರಿನ ಪ್ರಮುಖ ವಾಣಿಜ್ಯೋದ್ಯಮಿಗಳು ಭಾಗವಹಿಸಿದ್ದರು.

Tags

Dr. G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X