Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕ್ರೀಡಾ ಸಾಧಕರಿಗೆ ಗೌರವ, ಭವಿಷ್ಯಕ್ಕೆ...

ಕ್ರೀಡಾ ಸಾಧಕರಿಗೆ ಗೌರವ, ಭವಿಷ್ಯಕ್ಕೆ ಭದ್ರತೆ ಕಲ್ಪಿಸಲು ನಮ್ಮ ಸರ್ಕಾರ ಬದ್ಧ : ಡಾ.ಜಿ.ಪರಮೇಶ್ವರ್‌

► "ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಪುರಸ್ಕಾರ ಹೆಚ್ಚಳ ; ಚಿನ್ನಕ್ಕೆ 1 ಕೋಟಿ, ಬೆಳ್ಳಿಗೆ 75 ಲಕ್ಷ ರೂ." ► "ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಗ್ರೂಪ್-ಬಿ ಹುದ್ದೆಗೆ ನೇರ ನೇಮಕಾತಿ"

ವಾರ್ತಾಭಾರತಿವಾರ್ತಾಭಾರತಿ6 Oct 2026 4:25 PM IST
share
ಕ್ರೀಡಾ ಸಾಧಕರಿಗೆ ಗೌರವ, ಭವಿಷ್ಯಕ್ಕೆ ಭದ್ರತೆ ಕಲ್ಪಿಸಲು ನಮ್ಮ ಸರ್ಕಾರ ಬದ್ಧ : ಡಾ.ಜಿ.ಪರಮೇಶ್ವರ್‌

ಬೆಂಗಳೂರು: ಏಷ್ಯನ್ ಗೇಮ್ಸ್-2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ವಿಧಾನಸೌಧದಲ್ಲಿ ಇಂದು ಸನ್ಮಾನಿಸಿ ಅಭಿನಂದಿಸಿದರು.

ಏಷ್ಯನ್ ಗೇಮ್ಸ್‌ನಲ್ಲಿ ರಾಜ್ಯದ ಕ್ರೀಡಾಪಟುಗಳು ತೋರಿದ ಸಾಧನೆಯನ್ನು ಗೌರವಿಸುವುದರ ಜೊತೆಗೆ, ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸುವ ಉದ್ದೇಶದಿಂದ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಏಷ್ಯನ್ ಗೇಮ್ಸ್ ಪದಕ ವಿಜೇತರ ನಗದು ಪುರಸ್ಕಾರ ಭಾರೀ ಹೆಚ್ಚಳ :

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರದ ಮೊತ್ತವನ್ನು ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ಹಿಂದೆ ಚಿನ್ನದ ಪದಕ ವಿಜೇತರಿಗೆ ₹35 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ ₹25 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹15 ಲಕ್ಷ ನಗದು ಪುರಸ್ಕಾರ ನೀಡಲಾಗುತ್ತಿತ್ತು. ಪರಿಷ್ಕೃತ ಮೊತ್ತದ ಪ್ರಕಾರ, ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಮತ್ತು ಕಂಚಿನ ಪದಕ ಗೆದ್ದರೆ ₹50 ಲಕ್ಷ ನಗದು ಪುರಸ್ಕಾರ ನೀಡಲಾಗುವುದು.

ಈ ಬಾರಿ ಎಂಟು ಮಂದಿಗೆ ಈ ನಗದು ಪುರಸ್ಕಾರ ಸಿಗಲಿದ್ದು, ಜೊತೆಗೆ ಈ ಎಂಟು ಪದಕ ವಿಜೇತರಿಗೆ ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಿದ್ದಕ್ಕಾಗಿ, ಪದಕ ಸಾಧನೆಗೆ ನೀಡಲಾಗುವ ನಗದು ಪುರಸ್ಕಾರದ ಹೆಚ್ಚುವರಿಯಾಗಿ ತಲಾ ₹5 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು.

ಕ್ರೀಡಾಪಟುಗಳ ಸಾಧನೆಗೆ ತಕ್ಕ ಗೌರವ ನೀಡುವ ಹಾಗೂ ಮುಂದಿನ ಕ್ರೀಡಾಪಟುಗಳಿಗೆ ಇನ್ನಷ್ಟು ಪ್ರೇರಣೆ ನೀಡುವ ಉದ್ದೇಶದಿಂದ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಕ್ರೀಡಾ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ 5 ಲಕ್ಷ :

ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷ ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.

ರಾಜ್ಯದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವುದೇ ಮಹತ್ವದ ಸಾಧನೆಯಾಗಿದ್ದು, ಪದಕ ಗಳಿಸಿದವರ ಜೊತೆಗೆ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಎಲ್ಲ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪದಕ ವಿಜೇತರಿಗೆ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ :

ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಅರ್ಹ ಹಾಗೂ ಆಸಕ್ತ ಪದಕ ವಿಜೇತ ಕ್ರೀಡಾಪಟುಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇರ ನೇಮಕಾತಿ ಮಾಡಲು ಅವಕಾಶ ನೀಡಲಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರುವ ಸಾಧಕರಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ನೀಡುವ ಮೂಲಕ ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

Tags

Dr. G. Parameshwara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X