Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡದ ಬಾವುಟಕ್ಕೆ ಗೌರವ ಸಲ್ಲಿಸಲು...

ಕನ್ನಡದ ಬಾವುಟಕ್ಕೆ ಗೌರವ ಸಲ್ಲಿಸಲು ಡಾ.ಪುರುಷೋತ್ತಮ ಬಿಳಿಮಲೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Oct 2024 10:12 PM IST
share
ಕನ್ನಡದ ಬಾವುಟಕ್ಕೆ ಗೌರವ ಸಲ್ಲಿಸಲು ಡಾ.ಪುರುಷೋತ್ತಮ ಬಿಳಿಮಲೆ ಸೂಚನೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನದಂದು(ನ.1)ಗಲ್ಲಿಗಲ್ಲಿಗಳಲ್ಲಿ ಹಾರಿಸುವ ಕನ್ನಡದ ಬಾವುಟಕ್ಕೆ ಗೌರವಗಳನ್ನು ಸಲ್ಲಿಸಬೇಕಾಗಿದ್ದು, ಬಾವುಟವು ಹಳದಿ ಮತ್ತು ಕೆಂಪು ಬಣ್ಣದ್ದಾಗಿರಬೇಕು. ಹಳದಿ ಬಣ್ಣ ಮೇಲೆ ಹಾಗೂ ಕೆಂಪು ಬಣ್ಣ ಕೆಳಗೆ ಬರುವಂತೆ ಬಾವುಟವು ಹಾರಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ಬಾವುಟವು ಕೈಮಗ್ಗ ಅಥವಾ ಖಾದಿ ಉತ್ಪನ್ನದ್ದಾಗಿದ್ದರೆ ಚೆನ್ನಾಗಿದೆ, ರಾಷ್ಟ್ರಧ್ವಜದ ಅಳತೆಗಳ ಆಧಾರದಲ್ಲಿ ಕನ್ನಡ ಧ್ವಜವು ಇರಬೇಕು. ವಿವಿಧ ಅಳತೆಯ ರಾಷ್ಟ್ರಧ್ವಜಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಈ ಪೈಕಿ ಅವಶ್ಯಕತೆಗೆ ಅನುಗುಣವಾದ ಅಳತೆಯ ಧ್ವಜವನ್ನು ಹಾರಿಸಬೇಕು ಎಂದಿದ್ದಾರೆ.

ನಾಡಧ್ವಜವನ್ನು ರಾಜ್ಯೋತ್ಸವದ ದಿನ 9 ಗಂಟೆಯ ಒಳಗೆ ಹಾರಿಸಬೇಕು. ಹಾರಿಸಿದ ನಂತರ ಕಾರ್ಯಕ್ರಮ ಅಂದೇ ಮುಗಿದಲ್ಲಿ ಸೂರ್ಯ ಮುಳುಗುವ ಮುನ್ನ ಎಲ್ಲ ಗೌರವಗಳೊಂದಿಗೆ ಅದನ್ನು ಕೆಳಗಿಳಿಸಿ ಸಂರಕ್ಷಿಸುವ ಕೆಲಸವಾಗಬೇಕು. ಯಾವುದೇ ಕಾರಣಕ್ಕೂ ನಾಡಧ್ವಜವನ್ನು ಅನಿರ್ದಿಷ್ಟ ಅವಧಿಗೆ ಕಂಬಗಳ ಮೇಲೆ ಹಾಗೆಯೇ ಬಿಡತಕ್ಕದ್ದಲ್ಲ ಎಂದು ಅವರು ಹೇಳಿದ್ದಾರೆ.

ಧ್ವಜದ ಮೇಲೆ ಯಾವುದೇ ಚಿತ್ರಗಳು ಹಾಕಬಾರದು. ಧ್ವಜಸ್ತಂಭವನ್ನು ವರ್ಷಪೂರ್ತಿ ಶುಚಿಯಾಗಿ ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಸ್ಥಳೀಯ ಸಂಘ ಸಂಸ್ಥೆಗಳು, ವ್ಯಕ್ತಿಗಳು ಕಾಳಜಿಯಿಂದ ನಿರ್ವಹಿಸಬೇಕು. ಧ್ವಜವನ್ನು ಯಾವುದೇ ಪ್ರತಿಮೆ ಮುಚ್ಚಲು ಬಳಸಬಾರದು. ಧ್ವಜವನ್ನು ನೆಲದ ಮೇಲೆ ಇಡಬಾರದು ಎಂದು ಅವರು ತಿಳಿಸಿದ್ದಾರೆ.

ಧ್ವಜದಿಂದ ಯಾವುದೇ ಕಟ್ಟಡವನ್ನು ಮುಚ್ಚಲು ಬಳಸಬಾರದು. ಹರಿದ ಧ್ವಜವನ್ನು ಯಾವುದೇ ಸಂದರ್ಭದಲ್ಲಿಯೂ ಬಳಸಬಾರದು. ರಾಷ್ಟ್ರಧ್ವಜದೊಂದಿಗೆ ನಾಡಧ್ವಜವನ್ನು ಹಾರಿಸಬಹುದು. ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕನ್ನಡ ಧ್ವಜವನ್ನು ಹಾರಿಸುವುದು ಸರಿಯಲ್ಲ ಎಂದು ಡಾ.ಪುರುಷೋತ್ತಮ ಬಿಳಿಮಲೆ ಸೂಚಿಸಿದ್ದಾರೆ.

ಕಾಗದದಲ್ಲಿ ಮಾಡಲಾದ ಧ್ವಜಗಳನ್ನು ಅಲಂಕಾರಕ್ಕೆ ಬಳಸಿಕೊಂಡ ಸಂದರ್ಭದಲ್ಲಿ ಕಾರ್ಯಕ್ರಮ ಮುಗಿದ ನಂತರ ಅದನ್ನು ಚೆಲ್ಲಾಪಿಲ್ಲಿಯಾಗಿಸದೆ ಗೌರವಪೂರ್ವಕವಾಗಿ ವಿಲೇವಾರಿ ಮಾಡಬೇಕು. ವಾಹನಗಳ ಮೇಲೆ ಬಾವುಟವನ್ನು ಅಳವಡಿಸಿಕೊಂಡು ಚಲಿಸುವ ಸಂದರ್ಭದಲ್ಲಿಯೂ ಬಾವುಟಕ್ಕೆ ಸಿಗಬೇಕಾದ ಗೌರವವನ್ನು ಕಳೆಯಬಾರದು. ವಾಹನದ ಮಧ್ಯದಲ್ಲಿ ಅಥವಾ ಬಲಗಡೆ ಮಾತ್ರ ಬಾವುಟವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.

ಯಾವುದೇ ಮೆರವಣಿಗೆಗಳಲ್ಲಿ ಬಾವುಟವನ್ನು ಕೊಂಡೊಯ್ಯುವ ಸಂದರ್ಭದಲ್ಲಿ ಅದನ್ನು ಕೊಂಡೊಯ್ಯುವ ವ್ಯಕ್ತಿಯು ತಂಡದ ಮುಂದೆ ಅಥವಾ ಬಲಗಡೆ ಇರಬೇಕು. ಬಾವುಟವನ್ನು ಕೊಂಡೊಯ್ಯುವ ವ್ಯಕ್ತಿಯು ಬಾವುಟವನ್ನು ಬಗ್ಗಿಸಿ ಬೇರಾವುದೇ ಗಣ್ಯರಿಗೆ ನಮಸ್ಕರಿಸಬಾರದು ಎಂದು ಅವರು ಹೇಳಿದ್ದಾರೆ.

ಇವು ನಾಡಧ್ವಜಕ್ಕೆ ನೀಡಬೇಕಾದ ಕನಿಷ್ಠ ಗೌರವಗಳಾಗಿದ್ದು, ವಸ್ತುಸ್ಥಿತಿಯ ಆಧಾರದಲ್ಲಿ ಆಯೋಜಕರು ಧ್ವಜಕ್ಕೆ ದೊರಕಬೇಕಾದ ಎಲ್ಲ ಗೌರವಗಳನ್ನು ಸಮರ್ಪಕವಾಗಿ ನೀಡುವ ಮೂಲಕ ಕನ್ನಡದ ಪ್ರಜ್ಞೆಯನ್ನು ಮೆರೆಯಬೇಕು. ಇದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X