‘ರಾಷ್ಟ್ರೀಯ ಮತದಾರರ ದಿನ’ | ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

ಬೆಂಗಳೂರು : ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರೆ ಇಲಾಖೆಗಳ ಉನ್ನತ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Next Story





